ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗೆ ಗಾಯ, ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲು

ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ  ಅವರಿಗೆ ಬಲ ಭುಜ ಹಾಗೂ ತೊಡೆಯ ಮೇಲ್ಭಾಗದ ಮೂಳೆ ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ. ಕೇರೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗೆ ಗಾಯ, ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲು
ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗೆ ಗಾಯ, ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲು

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ವಿಜಯಪುರ ಜ್ಞಾನಯೋಗಾಶ್ರಮದ (jnanayogashrama) ಸಿದ್ದೇಶ್ವರ ಸ್ವಾಮೀಜಿ (siddeshwara swamiji) ಅವರು ತಾಲ್ಲೂಕಿನ ಬಸವನಾಳಗಡ್ಡೆಯಲ್ಲಿರುವ ಮಗದುಮ್ ಅವರ ತೋಟದ ಮನೆಯ ಸ್ನಾನ ಗೃಹದಲ್ಲಿ ಸೋಮವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಅವರಿಗೆ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ಮಹಾರಾಷ್ಟ್ರದ ಕನ್ಹೇರಿ ಮಠದ (maharashtra kaneri math) ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಲ್ಲೂಕಿನ ಕೇರೂರ ಗ್ರಾಮದಲ್ಲಿ ‘ಆಧ್ಯಾತ್ಮಿಕ ಪ್ರವಚನ ಸೇವಾ ಸಮಿತಿ’ಯಿಂದ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಬೆಳಿಗ್ಗೆ ಪಾಲ್ಗೊಂಡಿದ್ದರು. ಮಧ್ಯಾಹ್ನ ಕಾಗವಾಡ ತಾಲ್ಲೂಕಿನ ಶೇಡಬಾಳದ ವಿದ್ಯಾನಂದ ಮುನಿರಾಜ ಕನ್ನಡ ಪ್ರಾಥಮಿಕ ಶಾಲೆ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿದ್ಯಾನಂದ ಮುನಿರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ, ಕೇರೂರದಲ್ಲಿ ತಿಂಗಳವರೆಗೆ ಹಮ್ಮಿಕೊಂಡಿದ್ದ ಪ್ರವಚನದ ಮುಖ್ಯ ವೇದಿಕೆ ಪರಿಶೀಲಿಸಿದ್ದರು. ನಂತರ ತಮಗೆ ವಾಸ್ತವ್ಯ ಕಲ್ಪಿಸಿದ್ದ ತೋಟದ ಮನೆಗೆ ಮರಳಿದ್ದರು.

ಅವರಿಗೆ ಬಲ ಭುಜ ಹಾಗೂ ತೊಡೆಯ ಮೇಲ್ಭಾಗದ ಮೂಳೆ ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ. ಕೇರೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಸ್ವಾಮೀಜಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ‌ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಕಾಲಿಗೆ ಗಾಯವಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದೇಶ್ವರ ಸ್ವಾಮೀಜಿಗೆ ದೂರವಾಣಿ ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನು ಓದಿ: ಅಂತ್ಯಕ್ರಿಯೆಗೆ ಅಂತ ಬಂದವನು ಅಂತ್ಯವಾಗಿ ಹೋದ, ಚಾಕುವಿನಿಂದ ಇರಿದು ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ

Published On - 10:24 am, Tue, 11 January 22

Click on your DTH Provider to Add TV9 Kannada