ಅತಿ ಆಸೆ ಗತಿಗೇಡು: ಲೋನ್ ಆಸೆಗೆ ತಾಳಿ ಅಡವಿಟ್ಟು ಮುಂಗಾಡ ಹಣ ಕಟ್ಟಿ ಮೋಸ ಹೋದ ಮಹಿಳೆಯರು

vijayapura loan scam: ಕಡಿಮೆ ಬಡ್ಡಿ ಸಾಲದ ಆಮಿಷವೊಡ್ಡಿ ನೂರಾರು ಅಮಾಯಕ ಮಹಿಳೆಯರು ಮತ್ತು ಜನರಿಗೆ ಲಕ್ಷಾಂತರ ರೂ ವಂಚಿಸಿದ ದೊಡ್ಡ ಜಾಲವೊಂದು ವಿಜಯಪುರದಲ್ಲಿ ಬೆಳಕಿಗೆ ಬಂದಿದೆ. ವಂಚಕರು ನಕಲಿ ಕಚೇರಿ ತೆರೆದು, ಮುಂಗಡ ಹಣ ಪಡೆದು ಪರಾರಿಯಾಗಿದ್ದಾರೆ. ಸಾಲ ಸಿಗಬಹುದೆಂಬ ಆಸೆಗೆ ತಾಳಿ ಅಡವಿಟ್ಟ ಮಹಿಳೆಯರು ಮೋಸ ಹೋಗಿದ್ದಾರೆ.

ಅತಿ ಆಸೆ ಗತಿಗೇಡು: ಲೋನ್ ಆಸೆಗೆ ತಾಳಿ ಅಡವಿಟ್ಟು ಮುಂಗಾಡ ಹಣ ಕಟ್ಟಿ ಮೋಸ ಹೋದ ಮಹಿಳೆಯರು
ವಂಚನೆ
Image Credit source: tv9 kannada
Edited By:

Updated on: Jul 20, 2026 | 4:47 PM

ಮುಖ್ಯಾಂಶಗಳು

  • ವಿಜಯಪುರದಲ್ಲಿ ಹೈಟೆಕ್ ಲೋನ್ ದಂಧೆ
  • ಕಡಿಮೆ ಬಡ್ಡಿಗೆ ಆಸೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಮಹಿಳೆಯರು
  • ವಂಚಕರಿಗಾಗಿ ಬಲೆ ಬೀಸಿದ ಪೊಲೀಸರು

ವಿಜಯಪುರ, ಜುಲೈ 20: “ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ” ಎಂಬ ಮಾತಿಗೆ ಪುಷ್ಟಿ ನೀಡುವಂತಹ ಮತ್ತೊಂದು ವಂಚನೆ (Fraud) ಜಾಲ ವಿಜಯಪುರದಲ್ಲಿ (vijayapura) ಬಯಲಾಗಿದೆ. ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ಅಮಾಯಕ ಗ್ರಾಮೀಣ ಮಹಿಳೆಯರಿಗೆ ಮಕ್ಮಲ್ ಟೋಪಿ ಹಾಕಲಾಗಿದ್ದು, ಸಾಲದ ಆಸೆಗೆ ಬಿದ್ದ ನೂರಾರು ಜನ ಮುಂಗಾಡವಾಗಿ ಹಣ ಕಟ್ಟಿ ಲಕ್ಷ ಲಕ್ಷ ಹಣ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ.

ಜನರನ್ನ ನಂಬಿಸಲು ಹೈಟೆಕ್ ಪ್ಲ್ಯಾನ್ ಮಾಡಿದ್ದ ಖದೀಮರು​

ವಿಜಯಪುರ ತಾಲೂಕಿನ ಲೋಂಗಾವ, ಬಳ್ಳೊಳ್ಳಿ, ಕಪನಿಂಬರಗಿ, ಹೊರ್ತಿ, ತಿಕೋಟ ಮತ್ತು ಜಾಲಗೇರಿ ಸೇರಿದಂತೆ ಹಲವು ಹಳ್ಳಿಗಳ ನೂರಾರು ಜನರು ವಂಚಕರ ಜಾಲಕ್ಕೆ ಸಿಲುಕಿ ಹಣ ಕಳೆದಿಕೊಂಡಿದ್ದಾರೆ. ಜನರನ್ನು ನಂಬಿಸಲೆಂದೇ ಈ ಖದೀಮರು ಹೈಟೆಕ್ ಪ್ಲ್ಯಾನ್​ ಮಾಡಿದ್ದರು. ನಗರದ ಬಂಜಾರಾ ಕ್ರಾಸ್ ಬಳಿಯ ಪಾಟೀಲ್ ಪ್ಲಾನೆಟ್ ಒಳಗೆ ಸುಸಜ್ಜಿತ ಕಚೇರಿಯನ್ನು ತೆರೆದಿದ್ದರು. ವಿಜಯಪುರದ ಧೀರಜ್ ಸಿಂಗ್ ರಜಪೂತ್ ಹಾಗೂ ಲೋಂಗಾವ ಮೂಲದ ಬಂದೇನವಾಜ್ ಪಠಾಣ್ ಎಂಬುವವರೇ ಈ ವಂಚನೆ ಜಾಲದ ಸೂತ್ರಧಾರರು.

ಇದನ್ನೂ ಓದಿ: ವರ್ಕ್ ಫ್ರಮ್ ಹೋಮ್ ಆಮಿಷ: ಕೋಲಾರದಲ್ಲಿ ಊದುಬತ್ತಿ ಕಂಪನಿಯಿಂದ 10 ಕೋಟಿ ರೂ ವಂಚನೆ!

ಈ ಖದೀಮರು ಕೇವಲ ನೂರಕ್ಕೆ 50 ಪೈಸೆ ಬಡ್ಡಿ ದರದಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಈ ಖದೀಮರು, ಮೊದಲು ಮೂರ್ನಾಲ್ಕು ಕಂತಿನ ಹಣ ಕಟ್ಟಿ, ಆಮೇಲೆ ನಿಮ್ಮ ಅಕೌಂಟ್‌ಗೆ ನೇರವಾಗಿ ಲೋನ್ ಜಮೆ ಆಗುತ್ತದೆ ಎಂದು ಯಾಮಾರಿಸಿದ್ದಾರೆ.

ತಾಳಿ ಅಡವಿಟ್ಟು ಹಣ ಕಟ್ಟಿದ ಮಹಿಳೆಯರು

ಹೆಚ್ಚಿನ ಲೋನ್ ಸಿಗುತ್ತದೆ ಎಂಬ ಆಸೆಗೆ ಬಿದ್ದ ಹಳ್ಳಿಗರು 50 ಸಾವಿರದಿಂದ ಹಿಡಿದು 1 ಲಕ್ಷ ರೂ.ವರೆಗೂ ಹಣ ತಂದು ಕಟ್ಟಿದ್ದಾರೆ. ಅದರಲ್ಲೂ ದುರಂತ ಅಂದರೆ ಸಾಲ ಸಿಕ್ಕರೆ ಬದುಕು ಹಸನಾಗಬಹುದು ಎಂಬ ಆಸೆಯಿಂದ ಗ್ರಾಮೀಣ ಭಾಗದ ಮಹಿಳೆಯರು ತಮ್ಮ ತಾಳಿಯನ್ನ ಅಡವಿಟ್ಟು ತಂದು ಹಣ ಕಟ್ಟಿದ್ದಾರೆ. ಮಹಿಳೆಯರಿಗೆ ನಂಬಿಕೆ ಬರಲಿ ಎಂದು ನಕಲಿ ರಸೀದಿ, ಬಿಲ್ ಹಾಗೂ ನಕಲಿ ಬಾಂಡ್‌ ಪೇಪರ್‌ಗಳನ್ನು ಸಹ ಈ ವಂಚಕರು ನೀಡಿದ್ದರು. ಸದ್ಯ ಅಮಾಯಕರಿಂದ ಕೋಟಿಗೂ ಅಧಿಕ ಹಣ ಸಂಗ್ರಹಿಸಿ ಖದೀಮರು ಊರು ಬಿಟ್ಟು ಪರಾರಿಯಾಗಿದ್ದಾರೆ.

ಎಸ್​​ಪಿ ಕಚೇರಿ ಮೆಟ್ಟಿಲೇರಿದ ಸಂತ್ರಸ್ತರು 

ಅತ್ತ ಲೋನ್​​ ಇಲ್ಲ, ಇತ್ತ ಕಟ್ಟಿದ ಹಣವೂ ಇಲ್ಲದೇ ಕಂಗಾಲಾದ ಮಹಿಳೆಯರು ಮತ್ತು ಸಂತ್ರಸ್ತರು ದೂರು ನೀಡಲು ವಿಜಯಪುರ ಎಸ್​​ಪಿ ಕಚೇರಿ ಮೆಟ್ಟಿಲು ಹತ್ತಿದ್ದಾರೆ. ವಿಷಯದ ಗಾಂಭೀರ್ಯತೆ ಅರಿತಿರುವ ಎಸ್​​ಪಿ ಲಕ್ಷ್ಮಣ ನಿಂಬರಗಿ, ಸಂತ್ರಸ್ತರಿಂದ ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸದ್ಯ ಪೊಲೀಸರು ವಂಚಕರಿಗಾಗಿ ಬಲೆ ಬೀಸಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Loading...
Unable to load recommendations.
Follow Us