ವಿಜಯಪುರ ಅರಣ್ಯ ಭೂಮಿಗೆ ಜಿಐ ಟ್ಯಾಗ್​, ಸಿದ್ದೇಶ್ವರ ಶ್ರೀಗಳ ಹೆಸರು ನಾಮಕರಣ

|

Updated on: Oct 17, 2024 | 2:31 PM

ವಿಜಯಪುರ ಜಿಲ್ಲೆಯ ಮಮದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅರಣ್ಯ ಪ್ರದೇಶಕ್ಕೆ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ತಾಣ ಎಂದು ಮರು ನಾಮಕರಣ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ತಿಳಿಸಿದರು.

ವಿಜಯಪುರ ಅರಣ್ಯ ಭೂಮಿಗೆ ಜಿಐ ಟ್ಯಾಗ್​, ಸಿದ್ದೇಶ್ವರ ಶ್ರೀಗಳ ಹೆಸರು ನಾಮಕರಣ
ಸಿದ್ದೇಶ್ವರ ಸ್ವಾಮೀಜಿ
Follow us on

ವಿಜಯಪುರ, ಅಕ್ಟೋಬರ್​ 17: ಮಮದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 1.494.38 ಎಕರೆ ಮೀಸಲು ಅರಣ್ಯ ಪ್ರದೇಶಕ್ಕೆ (Forest Land) ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddeshwar Swamiji) ಪಾರಂಪರಿಕ ಜೀವವೈವಿಧ್ಯ ತಾಣ ಎಂದು ಮರು ನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜನವರಿ 2 ಸಿದ್ದೇಶ್ವರ ಸ್ವಾಮೀಜಿ ಅವರ ಪಯಣ್ಯತಿಥಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಸಿದ್ದೇಶ್ವರ ಸ್ವಾಮೀಜಿಯವರ ಜೀವನ ಮತ್ತು ಕೊಡುಗೆಗಳನ್ನು ಜನರಿಗೆ ತಿಳಿಸಲು ವಿಜ್ಞಾನ ಕೇಂದ್ರ ಮತ್ತು ವಸ್ತುಸಂಗ್ರಹಾಲಯವನ್ನು ಸಹ ಸ್ಥಾಪಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶೇ.5ರಷ್ಟು ಅರಣ್ಯ ಪ್ರದೇಶವಿದ್ದು, ವಿಜಯಪುರದಲ್ಲಿ ಶೇ.1ಕ್ಕಿಂತ ಕಡಿಮೆ ಇದೆ. ಪಾರಂಪರಿಕ ತಾಣ ಎಂದು ಘೋಷಣೆ ನಂತರ ಅರಣ್ಯ ಸಂರಕ್ಷಣೆಗೆ ಉತ್ತೇಜಿಸದಂತಾಗುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಜಿಐ ಟ್ಯಾಗ್ ಪರಿಣಾಮ: ವಿಜಯಪುರ ನಿಂಬೆ ಗಿಡಗಳಿಗೆ ಬೇಡಿಕೆಯೋ ಬೇಡಿಕೆ, 5 ಲಕ್ಷ ಸಸಿ ಮಾರಾಟ

ಅರಣ್ಯ ಭೂಮಿಯನ್ನು ಪಾರಂಪರಿಕ ತಾಣವೆಂದು ಘೋಷಿಸುವುದರಿಂದ ಸಸ್ಯ ಮತ್ತು ಪ್ರಾಣಿ ಸಂಕುಲದ ರಕ್ಷಣೆಗೆ ಹೆಚ್ಚಿನ ಗಮನ ಕೊಡಬಹುದು. ವಿಜಯಪುರದಲ್ಲಿ ಅರಣ್ಯ ಇಲಾಖೆಗೆ ಒಳಪಡುವ ಒಟ್ಟು 2 ಸಾವಿರ ಹೆಕ್ಟೇರ್ ಜಮೀನು ಇದೆ. ಈ ಪಾರಂಪರಿಕ ತಾಣದಲ್ಲಿ ಎರಡು ಕೆರೆಗಳಿದ್ದು, ಇವು ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿವೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಸಾಮಾನ್ಯವಾಗಿ ಪಾರಂಪರಿಕ ತಾಣಗಳು ಮತ್ತು ಸಂರಕ್ಷಣಾ ಮೀಸಲು ಪ್ರದೇಶಗಳೆಂದು ಬೆಂಗಳೂರು ಸುತ್ತಮುತ್ತ ಅಥವಾ ಪಶ್ಚಿಮ ಘಟ್ಟ ಪ್ರದೇಶಗಳು ಎಂದು ಘೋಷಿಸಲಾಗುತ್ತದೆ. ಯಾವಾಗಲೂ ಬಯಲು ಸೀಮೆಯ ಪ್ರದೇಶಗಳಿಗೆ ಇಂತಹ ಟ್ಯಾಗ್ ಸಿಗುವುದಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:19 am, Thu, 17 October 24