AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಕಾವೇರಿದ ಮಹಾನಗರ ಪಾಲಿಕೆ ಮೇಯರ್‌, ಉಪಮೇಯರ್‌ ಚುನಾವಣೆ: ಬಿಜೆಪಿ ಕಾಂಗ್ರೆಸ್ ತೀವ್ರ ಸೆಣಸಾಟ

ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಬಿಜೆಪಿಯವರು ಅಪಹರಣ ಮಾಡಿ ಅಡಗುತಾಣದಲ್ಲಿಟ್ಟಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಆರೋಪ ಮಾಡಿದ್ದಾರೆ.ತಮ್ಮ ತಮ್ಮ ಪಕ್ಷದ ಸದಸ್ಯರ ಸುರಕ್ಷತೆಗಾಗಿ ಸದಸ್ಯರು ಪ್ರವಾಸದಲ್ಲಿದ್ದಾರೆ. ಈಗ ನಮ್ಮ ಒಬ್ಬ ಬೆಂಬಲಿತ ಸದಸ್ಯರನ್ನು ಬಿಜೆಪಿಯವರು ವಿಶೇಷವಾಗಿ ನಗರದ ಶಾಸಕರು ಒಯ್ದು ತಮ್ಮ ಅಡಗುತಾಣದಲ್ಲಿ ಇಟ್ಟಿದ್ದಾರೆಂದು ನಮಗೆ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ವಿಜಯಪುರದಲ್ಲಿ ಕಾವೇರಿದ ಮಹಾನಗರ ಪಾಲಿಕೆ ಮೇಯರ್‌, ಉಪಮೇಯರ್‌ ಚುನಾವಣೆ: ಬಿಜೆಪಿ ಕಾಂಗ್ರೆಸ್ ತೀವ್ರ ಸೆಣಸಾಟ
ವಿಜಯಪುರದಲ್ಲಿ ಕಾವೇರಿದ ಮಹಾನಗರ ಪಾಲಿಕೆ ಮೇಯರ್‌, ಉಪಮೇಯರ್‌ ಚುನಾವಣೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 24, 2023 | 2:59 PM

Share

ವಿಜಯಪುರ, ಅಕ್ಟೋಬರ್ 24: ವಿಜಯಪುರ ಮಹಾನಗರ ಪಾಲಿಕೆ (Vijayapura Municipal Corporation) ಮೇಯರ್‌ ಹಾಗೂ ಉಪಮೇಯರ್‌ ಚುನಾವಣೆ ಕಾವು ಏರಿದೆ. ಅಕ್ಟೋಬರ್ 30 ರಂದು ಪಾಲಿಕೆ ಮೇಯರ್ ಉಪ ಮೇಯರ್ ಚುನಾವಣೆ ನಡೆಸಲು ಮಹೂರ್ತ ಫಿಕ್ಸ್ ಆಗಿದೆ. ಮಹಾನಗರ ಪಾಲಿಕೆಯ ಅದಿಕಾರದ ಗದ್ದುಗೆ ಹಿಡಿಯಲು ಬಿಜೆಪಿ (BJP) ಕಾಂಗ್ರೆಸ್ (Congress) ತೀವ್ರ ಸೆಣಸಾಟ ನಡೆಸಿವೆ. ಸದಸ್ಯರ ಭದ್ರತೆಗಾಗಿ ಬಿಜೆಪಿ ಕಾಂಗ್ರೆಸ್ ಹಾಗೂ ಇತರೆ ಸದಸ್ಯರು ಇತರಡೆ ಪ್ರವಾಸಕ್ಕೆ ಹೋಗಿದ್ದಾರೆ. ಬಿಜೆಪಿ ಸದಸ್ಯರು ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದರೆ ಕಾಂಗ್ರೆಸ್ ಹಾಗೂ ಇತರರು ಚಿಕ್ಕಮಗಳೂರಿನ ಪ್ರದೇಶದಲ್ಲಿದ್ದಾರೆ.

ಈ ಮದ್ಯೆ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಬಿಜೆಪಿಯವರು ಅಪಹರಣ ಮಾಡಿ ಅಡಗುತಾಣದಲ್ಲಿಟ್ಟಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಆರೋಪ ಮಾಡಿದ್ದಾರೆ. ವಿಜಯಪುರ ನಗರದ ಕಾಂಗ್ರೆಸ್ ಕಚೇರಿಯ ಕೊದಲ ಮಹಡಿಯಲ್ಲಿ ಮಹಿಳಾ ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ತಮ್ಮ ತಮ್ಮ ಪಕ್ಷದ ಸದಸ್ಯರ ಸುರಕ್ಷತೆಗಾಗಿ ಸದಸ್ಯರು ಪ್ರವಾಸದಲ್ಲಿದ್ದಾರೆ. ಈಗ ನಮ್ಮ ಒಬ್ಬ ಬೆಂಬಲಿತ ಸದಸ್ಯರನ್ನು ಬಿಜೆಪಿಯವರು ವಿಶೇಷವಾಗಿ ನಗರದ ಶಾಸಕರು ಒಯ್ದು ತಮ್ಮ ಅಡಗುತಾಣದಲ್ಲಿ ಇಟ್ಟಿದ್ದಾರೆಂದು ನಮಗೆ ತಿಳಿದುಬಂದಿದೆ. ಅದೇನು ಮಾಡಿದರೂ ಪ್ರಯೋಜನವಾಗುವುದಿಲ್ಲ. ಮತ್ತು ಇದೇನೂ ದೊಡ್ಡ ಕೆಲಸವಲ್ಲ. ನಮಗೂ ಆ ಕೆಲಸ ಮಾಡಲು ಬರುತ್ತದೆ. ಆದರೆ ಅಂತಹ ಕೆಲಸಕ್ಕೆ ನಾವು ಕೈ ಹಾಕುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಂಥವರು ನಾವು. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಜಯ ಸಿಗುತ್ತದೆ ಎಂದು ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಮತ್ತು ಎಲ್ಲದಕ್ಕೂ ಚುನಾವಣಾ ದಿನಾಂಕ ಅಕ್ಟೋಬರ್‌ 30 ರಂದು ತಿಳಿಯುತ್ತದೆ, ಕಾದುನೋಡಿ ಎಂದು ಪ್ರತಿಕ್ರಿಯೆಯನ್ನ ನೀಡಿದ್ದಾರೆ.

ಇದನ್ನೂ ಓದಿ: ಚೈತ್ರಾ ಗ್ಯಾಂಗ್‌ ರೀತಿಯಲ್ಲೇ ಮತ್ತೊಂದು ಟಿಕೆಟ್‌ ದೋಖಾ: ಬಿಜೆಪಿ ಟಿಕೆಟ್‌ ಕೊಡಿಸೋದಾಗಿ ನಂಬಿಸಿದ್ದು ಹೇಗೆ? ಅಸಲಿಗೆ ಆಗಿದ್ದೇನು?

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಹೇಗಿದೆ ಬಲಾಬಲ?

ಪಕ್ಷೇತರ ಸದ್ಯಸ್ಯೆ ವಾರ್ಡ್ ನಂಬರ್ 19 ರ ನಿಶಾತ್ ಹೈದರ್ ಅಲಿ ನದಾಫ್ ಹಾಗೂ ವಾರ್ಡ್ ನಂಬರ್ 25 ರ ಎಐಎಂಐಎಂ ಸದಸ್ಯೆ ಸುಪ್ರೀಯಾ ವಾಟೆ ಎಂಬುವವರನ್ನು ಬಿಜೆಪಿಯವರು ಅಪಹರಣ ಮಾಡಿದ್ದಾರೆಂಬ ವದಂತಿ ಕೇಳಿ ಬಂದಿದೆ.

ಇನ್ನು 35 ಸದಸ್ಯ ಬಲದ ವಿಜಯಪುರ ಮಹಾನಗರ ಪಾಲಿಕೆಯಲ್ಲಿ 17 ಸ್ಥಾನಗಳಲ್ಲಿ ಬಿಜೆಪಿ, 10 ಸ್ಥಾನಗಳಲ್ಲಿ ಕಾಂಗ್ರೆಸ್, 5 ಸ್ಥಾನಗಳಲ್ಲಿ ಪಕ್ಷೇತರರು, 2 ಸ್ಥಾನಗಳಲ್ಲಿ ಎಐಎಂಐಎಂ ಹಾಗೂ 1 ಸ್ಥಾನದಲ್ಲಿ ಜೆಡಿಎಸ್ ಸದಸ್ಯರಿದ್ದು ಪಕ್ಷೇತರರು ಎಐಎಂಐಎಂ ಹಾಗೂ ಜೆಡಿಎಸ್ ಸದಸ್ಯರ ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದ್ದಾರೆಂದು ಕೈ ನಾಯಕರು ಮಾಹಿತಿ ನೀಡಿದ್ದಾರೆ. ಜೊತೆಗೆ ಇಬ್ಬರು ಶಾಸಕರು ಹಾಗೂ ಓರ್ವ ಪರಿಷತ್ ಸದಸ್ಯನ ಮತಗಳ ಬಲವನ್ನೂ ಕಾಂಗ್ರೆಸ್ ಹೊಂದಿದೆ. ಈ ರೀತಿ ಚುನಾವಣಾ ಕಾವು ಏರಿದ್ದು ಅಕ್ಟೋಬರ್ 30 ರಂದು ಪಾಲಿಕೆ ಆಧಿಕಾರ ಯಾರಿಗೆ ಸಿಗಲಿದೆ ಎಂಬುದು ತಿಳಿದು ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ