ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಸಿಡಿ ಶಾಕ್ ಕೊಟ್ಟ ಮುಸ್ಲಿಂ ಮುಖಂಡರು

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಆಗಾಗ ಸಿಡಿ ಸುದ್ದು ಮಾಡುತ್ತಿರುತ್ತದೆ. ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಸಿಡಿಗಳು ಇವೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಕೆಲ ಸಿಡಿಗಳು ರಿಲೀಸ್ ಆಗಿವೆ. ಇನ್ನೂ ಕೆಲವು ಹಾಗೆ ಮರೆಯಾಗಿ ಉಳಿದಿವೆ. ಇದರ ಮಧ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದು, ಸಿಡಿ ಬಿಡುಗಡೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಸಿಡಿ ಶಾಕ್ ಕೊಟ್ಟ ಮುಸ್ಲಿಂ ಮುಖಂಡರು
ಬಸನಗೌಡ ಪಾಟೀಲ್ ಯತ್ನಾಳ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 14, 2024 | 7:48 PM

ವಿಜಯಪುರ, (ಅಕ್ಟೋಬರ್ 14): ಕಟ್ಟರ್ ಹಿಂದುತ್ವವಾದಿ, ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದಾರೆ. ನಾಳೆ (ಅಕ್ಟೋಬರ್ 15) ವಿಜಯಪುರದಲ್ಲಿ ವಕ್ಫ್​ ಹಠಾವೋ ದೇಶ ಬಚಾವೋ ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಮುಸ್ಲಿಂ ಮುಖಂಡರು, ನಿಮ್ಮ ರಾಜಕಾರಣ ಏನು ಇದೆಯೋ ಅದನ್ನು ಮಾಡಿಕೊಂಡು ಹೋಗಿ. ಇಲ್ಲದಿದ್ದರೆ ನವೆಂಬರ್ 6ರಂದು ನಿಮ್ಮ ಸಿಡಿ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಖಡಕ್​ ಎಚ್ಚರಿಕೆ ನೀಡಿದ್ದಾರೆ.

ನಾಳೆ ವಿಜಯಪುರದಲ್ಲಿ ವಕ್ಫ್​ ಹಠಾವೋ ದೇಶ ಬಚಾವೋ ಆಂದೋಲನ ಪ್ರತಿಭಟನೆಗೆ ಕರೆ ನೀಡಿರುವ ಶಾಸಕ ಯತ್ನಾಳ್ ವಿರುದ್ಧ ಮುಸ್ಲಿಮರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ವಿಜಯಪುರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಸ್ಲಿಂ ಮುಖಂಡರಾದ ಎಸ್ ಎಸ್ ಖಾದ್ರಿ ಸೇರಿದಂತೆ ಹಲವರು ಮಾತನಾಡಿ ಯತ್ನಾಳ್​ಗೆ ಸಿಡಿ ಎಚ್ಚರಿಕೆ ಕೊಟ್ಟಿದ್ದಾರೆ.

ಈ ವೇಳೆ ಮಾತನಾಡಿದ ಎಸ್ ಎಸ್ ಖಾದ್ರಿ, ತಿ…… ಮುಚ್ಚಿಕೊಂಡು ರಾಜಕಾರಣ ಮಾಡಬೇಕು. ಇಲ್ಲದಿದ್ದರೆ ನವೆಂಬರ್ 06ರಂದು ಸಿಡಿ ಬಿಡುಗಡೆ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದರು. ಇದಕ್ಕೆ ಧ್ವನಿಗೂಡಿಸಿದ ಮಾಜಿ ಕಾರ್ಪೊರೇಟರ್ ಅಬ್ದುಲ್ ರಜಾಕ್ ಹೊರ್ತಿ, ನಾನೇನು ಬ್ಲಾಕ್ಮೇಲ್ ಮಾಡುತ್ತಿಲ್ಲ. ಕೋರ್ಟ್ ನಿಂದ ತಮ್ಮ ವಿರುದ್ದ ಮಾನಹಾನಿ ವರದಿ ಪ್ರಸಾರ ಮಾಡದಂತೆ ತಡಯಾಜ್ಞೆ ತಂದಿದ್ದರ ಕುರಿತು ಯತ್ನಾಳಗೆ ಪ್ರಶ್ನಿಸಿ. ತಡೆಯಾಜ್ಞೆ ಯಾವುದಕ್ಕೆ ತಂದಿದ್ದಾರೆ ಎಂಬುದು ಯತ್ನಾಳ್​ ಅವರಿಗೆ ಗೊತ್ತು ಎಂದು ವ್ಯಂಗ್ಯವಾಡಿದರು.

ಧರ್ಮಗುರು ಮೌಲಾನಾ ಸಯ್ಯದ್ ತನ್ವೀರ್ ಪೀರಾ ಹಾಶ್ಮಿ ಯಾವುದಕ್ಕೆ ತಡೆಯಾಜ್ಞೆ ತಂದಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡದ ಮುಸ್ಲಿಂ ನಾಯಕರು, ಸ್ಟೇ ಕುರಿತು ಧರ್ಮಗುರುಗಳಿಗೆ ಕೇಳಬೇಕು ಎಂದರು.

ಪ್ರತಿಭಟನೆಗೆ ಕರೆ ಕೊಟ್ಟಿರುವ ಯತ್ನಾಳ್

ವಕ್ಫ್ ಕಾನೂನು ರದ್ದತಿಗೆ ಒತ್ತಾಯಿಸಿ ನಾಳೆ(ಅಕ್ಟೋಬರ್ 14) ವಿಜಯಪುರದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ನೇತೃತ್ವ ಪ್ರತಿಭಟನೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ, ಚಕ್ರವರ್ತಿ ಸೂಲಿಬೆಲೆ ಹಾಗೂ ಇತರರು ಭಾಗಿಯಾಗಲಿದ್ದಾರೆ. ಜಿಲ್ಲೆಯ 12000 ಎಕರೆ, ವಿಜಯಪುರ ತಾಲೂಕಿನ 2643 ಎಕರೆ ಆಸ್ತಿ ವಕ್ಪ ಎಂದು ಎಂಟ್ರಿ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶಿಸಿದ್ದಾರೆ. ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ಎಂಟ್ರಿ ಮಾಡುವುದನ್ನು ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ನಾಳೆ(ಅ.14) ಬೆಳಿಗ್ಗೆ 10 ಗಂಟೆಗೆ ಸಿದ್ದೇಶ್ವರ ದೇವಸ್ಥಾನದ ಬಳಿ ಪ್ರತಿಭಟನಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಗ್ಗಂಟುಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾಗಲು ಕರೆ ಯತ್ನಾಳ್ ಕರೆ ಕೊಟ್ಟಿದ್ದಾರೆ.

ಸಂಘ ಸಂಸ್ಥೆಯವರು, ದೇಶಾಭಿಮಾನಿಗಳು, ಧಾರ್ಮಿಕ ಮುಖಂಡರು, ಮಠಾಧೀಶರು , ನ್ಯಾಯವಾದಿಗಳು, ವೈದ್ಯರು, ಉದ್ದಿಮೆದಾರರು, ರೈತರು, ಹಿಂದುಪರ ಸಂಘಟನೆಗಳು, ಮಹಿಳೆಯರು ಪಕ್ಷಾತೀತವಾಗಿ ಭಾಗಿಯಾಗಲು ಯತ್ನಾಳ್ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Mon, 14 October 24

ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ