ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಹಿ ಗ್ರಾಮದ ಜಾಪರ್ ಬೆಣ್ಣಿ ಎಂಬ ವ್ಯಕ್ತಿ ಹನುಮ ಮಾಲಾ ಧರಿಸಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ
ಜಾಪರ್ ಬೆಣ್ಣಿ
Follow us
TV9 Web
| Updated By: ಆಯೇಷಾ ಬಾನು

Updated on:Dec 03, 2022 | 10:34 AM

ವಿಜಯಪುರ: ಕರ್ನಾಟಕದಲ್ಲಿ ಕಳೆದ ಒಂದು ವರ್ಷಕ್ಕಿಂತ ಆಧಿಕ ಸಮಯದಿಂದ ಕೋಮುಸೌಹಾರ್ಧತೆಗೆ ಧಕ್ಕೆ ತರೋ ಘಟನೆಗಳು ನಡೆಯುತ್ತಾ ಬಂದಿವೆ. ಹಿಜಾಬ್, ಜಟ್ಕಾ ಕಟ್ ಹಲಾಲ್ ಕಟ್, ಹಿಂದೂ ದೇವಸ್ಥಾನಗಳ ಮುಂದೆ ಮುಸ್ಲಿಂ ವ್ಯಾಪಾರಸ್ಥರು ವ್ಯಾಪಾರ ಮಾಡಲು ತಡೆ, ಹಿಂದೂ ಯುವಕರ ಹತ್ಯೆ ಮುಸ್ಲಿಂ ಯುವಕರ ಹತ್ಯೆಯಂಥ ಘಟನೆಗಳು ನಡೆದಿವೆ. ಇಷ್ಟರ ಮಧ್ಯೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರಲು ಮುಸ್ಲಿಂ ವ್ಯಕ್ತಿಯೋರ್ವ(Muslim Man) ಹನುಮ ಮಲಾ ಧಾರಣೆ(Hanuma Maladharane) ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಮೂಲಕ ಕೋಮು ಸೌಹಾರ್ಧತೆ ಮೆರೆದಿದ್ಧಾರೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಹಿ ಗ್ರಾಮದ ಜಾಪರ್ ಬೆಣ್ಣಿ ಎಂಬ ವ್ಯಕ್ತಿ ಹನುಮ ಮಾಲಾ ಧರಿಸಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ. ನೆರೆಯ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಆಂಜನೇಯನ ಹನುಮ ಮಾಲಾ ವೃತಾಚರಣೆ ಮಾಡುವ ಮೂಲಕ ಸೋದರತೆಯನ್ನು ಸಾರಿದ್ದಾರೆ. ಹಣೆಗೆ ಗಂಧ ಇರಿಸಿ, ತಿಲಕ ಹಚ್ಚಿಕೊಂಡು, ಕೇಸರಿ ವಸ್ತ್ರ ಧರಿಸಿ, ಹನುಮ ಮಾಲಾ ದೀಕ್ಷೆ ಪಡೆದಿರುವ ಜಾಫರ್ ಬೆಣ್ಣಿ ಇಂದು ನಮಗೆಲ್ಲಾ ಮಾದರಿಯಾಗಿದ್ದಾರೆ. ಹನುಮ ಮಾಲಾ ವೃತಾಚರಣೆ ಅಂಗವಾಗಿ ಜಾಫರ್ ಬೆಣ್ಣಿ ಅವರು ನಿತ್ಯ ಹಿಂದೂ ದೇವಾಲಯದ ಪೂಜೆಗಳಲ್ಲಿ ಭಾಗಿಯಾಗಿ, ದೇವರ ಸ್ತುತಿಗಳನ್ನು ಹಾಡುತ್ತಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಹೊರಟಿರೋ ಜಾಫರ್ ಅವರು ಅಂಜನಾದ್ರಿ ಬೆಟ್ಟದಲ್ಲಿ ಹನುಮದೇವನಿಗೆ ಪೂಜೆ ಸಲ್ಲಿಸಿ ಹನುಮ ಮಾಲಾಧಾರ ವೃತ ಮುಕ್ತಾಯ ಮಾಡೋದಾಗಿ ಮಾಹಿತಿ ನೀಡಿದ್ದಾರೆ. ಬಸವನಾಡಿನಲ್ಲಿ ಐಕ್ಯತೆ ಸಾರಿರೋ ಜಾಫರ್ ಅವರ ನಡೆಗೆ ಹಿಂದೂ ಮುಸ್ಲಿಂ ಸಮುದಾಯದವರು ಮೆಚ್ಚುಗೆ ವ್ಯಕ್ತಪಡಿದಿದ್ದಾರೆ.

ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ

ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:04 am, Sat, 3 December 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು