ವಿಜಯಪುರ: ‘ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲಿಮ್ ರಾಷ್ಟ್ರ’ ಎಂಬ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್
‘ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲಿಮ್ ರಾಷ್ಟ್ರ’ ಎಂದು ಸಾಮಾಜಿಕ ಮಾಧ್ಯಮ ಇನ್ಸಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ: ‘ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲಿಮ್ ರಾಷ್ಟ್ರ’ ಎಂದು ಸಾಮಾಜಿಕ ಮಾಧ್ಯಮ ಇನ್ಸಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದ ಯುವಕ ಇಬ್ರಾಹಿಂ ಮುರ್ತುಜಸಾಬ್ ಮುಲ್ಲಾ ಇನ್ಸಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದ. ಇದನ್ನು ವೀಕ್ಷಿಸಿದ ಸ್ಥಳಿಯರು ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡ ತಾಳಿಕೋಟೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಸದ್ಯ ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ನೀಡಿದೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ಸಿಕ್ಕಿದ ಬೆನ್ನಲ್ಲೇ ಇಂಥ ಕೆಲವು ಘಟನೆಗಳು ರಾಜ್ಯದ ವಿವಿಧ ಕಡೆಗಳಲ್ಲಿ ವರದಿಯಾಗಿವೆ. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಲ್ಲದೆ, ಕೇಸರಿ ಧ್ವಜದ ಪಕ್ಕ ಅದನ್ನು ಅಳವಡಿಸಿ ಸಂಭ್ರಮಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿತ್ತು. ಭಟ್ಕಳ ಸಂಶುದ್ದಿನ್ ಸರ್ಕಲ್ ಮೇಲೆ ನಿಂತು ಕೇಸರಿ ಬಾವುಟ ಪಕ್ಕದಲ್ಲಿ ಇಸ್ಲಾಂ ಧ್ವಜ ಹಿಡಿದು ಸಂಭ್ರಮಾಚರಣೆ ನಡೆಸಲಾಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶವೂ ವ್ಯಕ್ತವಾಗಿತ್ತು.
ಇದನ್ನೂ ಓದಿ: ಕಾಂಗ್ರೆಸ್ಗೆ ಬಹುಮತ; ಭಟ್ಕಳದಲ್ಲಿ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಮುಸ್ಲಿಂ ಯುವಕರು
ಈ ಮಧ್ಯೆ, ವಿಜಯಪುರದ ನಾಲತವಾಡ ಪಟ್ಟಣದ ಕಾನಬಾವಿ ಓಣಿಯ ನಿವಾಸಿ ವೀರೇಶ ಪರಯ್ಯ ಕರ್ಪೂರಮಠ ಎಂಬಾತ ವಾಟ್ಸ್ಆ್ಯಪ್ನಲ್ಲಿ ಪಾಕಿಸ್ತಾನದ ಪರ ಬರಹ ಪ್ರಕಟಿಸಿ ಸೋಮವಾರವಷ್ಟೇ ಜೈಲು ಸೇರಿದ್ದ. ಮುದ್ದೇಬಿಹಾಳ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಅಪ್ಪಾಜಿ ನಾಡಗೌಡ ಹೆಸರಿನ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ವೀರೇಶ ಪರಯ್ಯ ಕರ್ಪೂರಮಠ ‘ಪಾಕಿಸ್ತಾನ್ ಜಿಂದಾಬಾದ್’ ಎನ್ನುವ ಬರಹವನ್ನು ಪೋಸ್ಟ್ ಮಾಡಿದ್ದ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ