ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ, ಮಲಗಿದ್ದಲ್ಲೇ ಸುಟ್ಟು ಕರಕಲಾದ ವೃದ್ಧ ದಂಪತಿ

ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ತಗುಲಿದ್ದು ಮಲಗಿದ್ದಲ್ಲೇ ಪತಿ-ಪತ್ನಿ ಸುಟ್ಟು ಕರಕಲಾಗಿದ್ದಾರೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ, ಮಲಗಿದ್ದಲ್ಲೇ ಸುಟ್ಟು ಕರಕಲಾದ ವೃದ್ಧ ದಂಪತಿ
ಕರೀಂಸಾಬ್ ಟಪಾಲ್, ಸಾಜನಬೀ ಟಪಾಲ್
Follow us
TV9 Web
| Updated By: ಆಯೇಷಾ ಬಾನು

Updated on:Feb 26, 2023 | 9:52 AM

ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ವೃದ್ಧ ದಂಪತಿ ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ಹೊರವಲಯದ ಜಮೀನಿನಲ್ಲಿ ನಡೆದಿದೆ. ಕರೀಂಸಾಬ್ ಟಪಾಲ್(82), ಸಾಜನಬೀ ಟಪಾಲ್(72) ಮೃತ ವೃದ್ಧರು. ಮತ್ತೊಂದೆಡೆ ಯಾದಗಿರಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಸುಟ್ಟು ಕರಕಲಾಗಿದೆ.

ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ಕರೀಂಸಾಬ್ ಟಪಾಲ್ ಮತ್ತು ಸಾಜನಬೀ ಟಪಾಲ್ ಎಂಬ ವೃದ್ಧ ದಂಪತಿ ವಾಸವಾಗಿದ್ದರು. ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ತಗುಲಿದ್ದು ಮಲಗಿದ್ದಲ್ಲೇ ಪತಿ-ಪತ್ನಿ ಸುಟ್ಟು ಕರಕಲಾಗಿದ್ದಾರೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 8 ವರ್ಷಗಳ ಪ್ರೀತಿ: ಬರಸಿಡಿಲಿನಂತೆ ಬಂದು ಅಪ್ಪಳಿಸಿದ ಪ್ರೇಯಸಿಯ ಲಗ್ನ ಪತ್ರಿಕೆ, ವಿಷ ಕುಡಿದ ಪ್ರಿಯಕರ

ಸಿಲಿಂಡರ್ ಸ್ಫೋಟಕ್ಕೆ ಸುಟ್ಟು ಕರಕಲಾದ ಗುಡಿಸಲು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಸಾಯಿ ನಗರ ಕ್ಯಾಂಪ್ ನಲ್ಲಿ ಸಿಲಿಂಡರ್ ಸ್ಫೋಟಕ್ಕೆ ಗುಡಿಸಲು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಂಧ್ರ ಮೂಲದ ಟಿ.ಮದು ಅವರಿಗೆ ಸೇರಿದ ಗುಡಿಸಲು ಇದಾಗಿದ್ದು ಸ್ನಾನ ಮಾಡಲು ನೀರು ಕಾಯಿಸಲು ಇಟ್ಟಾಗ ಸಿಲಿಂಡರ್ ಸ್ಪೋಟಗೊಂಡಿದೆ. ಗುಡಿಸಲಿನಲ್ಲಿದ್ದ 2 ಲಕ್ಷ ಹಣ, ವಾಷಿಂಗ್ ಮಷೀನ್, ಟಿವಿ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇನ್ನು ಮದು ಅವರು ಮಗಳ ಚಿಕಿತ್ಸೆಗಾಗಿ ಗುಡಿಸಲಲ್ಲಿ ಹಣ ತಂದಿಟ್ಟಿದ್ದರು. ಆದ್ರೆ ಈಗ ಹಣ ಸುಟ್ಟು ಹೋಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ‌ ಬಂದು ಬೆಂಕಿ ನಂದಿಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ, ಕಾರಿನಲ್ಲಿದ್ದ 4 ವರ್ಷದ ಮಗು ಸಾವು

ಕೊಪ್ಪಳ ತಾಲೂಕಿನ ಬಹದ್ದೂರ್​​ ಬಂಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮರುಳು ತುಂಬಿದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ 4 ವರ್ಷದ ಮಗು ಮೃತಪಟ್ಟಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗದಗದಿಂದ ಹೊಸಪೇಟೆಯತ್ತ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೊಪ್ಪಳ ಗ್ರಾಮೀಣ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:52 am, Sun, 26 February 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ