AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು

ವಿಜಯಪುರದಲ್ಲಿ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ವೇಳೆ ತಲೆ ಮೇಲೆ ಕ್ಯಾಂಟರ್ ಹರಿದ ಪರಿಣಾಮ ತಲೆಗಳು ಛಿದ್ರವಾಗಿವೆ. ಸ್ಥಳಕ್ಕೆ ವಿಜಯಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸವಾರರ ಹೆಸರು, ವಿಳಾಸ ಪತ್ತೆ ಮಾಡುತ್ತಿದ್ದಾರೆ.

ವಿಜಯಪುರ: ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು
ಅಪಘಾತ
ಅಶೋಕ ಯಡಳ್ಳಿ, ವಿಜಯಪುರ
| Updated By: ಆಯೇಷಾ ಬಾನು|

Updated on:Aug 24, 2023 | 7:25 AM

Share

ವಿಜಯಪುರ, ಆ.24: ವಿಜಯಪುರ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭಿವಿಸಿದೆ. ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪರಿಚಿತ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ(Accident). ತಲೆ ಮೇಲೆ ಕ್ಯಾಂಟರ್ ಹರಿದ ಪರಿಣಾಮ ತಲೆಗಳು ಛಿದ್ರವಾಗಿವೆ. ಇನ್ನೂ ಮೃತ ಸವಾರರ ಹೆಸರು, ವಿಳಾಸ ಪತ್ತೆಯಾಗಿಲ್ಲ. ಹಾಗಾಗಿ ವಿಜಯಪುರ ಸಂಚಾರಿ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸವಾರರ ಹೆಸರು, ವಿಳಾಸ ಪತ್ತೆಗೆ ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಅಪಘಾತ ತಪ್ಪಿಸಲು ಹೊಸ ಮಾರ್ಗ

ಬೆಂಗಳೂರಿನಲ್ಲಿ ದಿನನಿತ್ಯವೂ ಆಕ್ಸಿಡೆಂಟ್ ಕಾಮನ್ ಆಗಿದೆ. ಒಂದಲ್ಲಾ ಒಂದು ಏರಿಯಾದಲ್ಲಿ ಅಪಘಾತಗಳು ಸಂಭವಿಸುತ್ತಲೇ ಇದ್ದು ಸವಾರರು ಗಾಯಾಳುಗಳಾಗಿ, ಮರಣವನಪ್ಪುತ್ತಲೇ ಇರುತ್ತಾರೆ. ಆದರೆ ಪದೇ ಪದೇ ಆಕ್ಸಿಡೆಂಟ್ ಆಗುವ ಬ್ಲಾಕ್ ಸ್ಪಾಟ್ ಗಳನ್ನು ಪಟ್ಟಿಮಾಡಿ, ಅಪಘಾತಕ್ಕೆ ಪರಿಹಾರ ಹುಡುಕಿ ಅಪಘಾತ ನಿಯಂತ್ರಿಸಲು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಪೊಲೀಸ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿದ್ದ ವ್ಯಕ್ತಿ ಕೊನೆಗೂ ಪೊಲೀಸ್ ಬಲೆಗೆ

ಸಂಚಾರ ದಟ್ಟಣೆ ಹಾಗು ವಯಲೇಷನ್‌ ತಪ್ಪಿಸಲು ಅಫೇನ್ಸ್‌ ಅನಾಲೈಝ್ಡ್‌ ಕ್ಯಾಮರಾ ಬಳಕೆ, ಬದಲಿ ಸಂಚಾರ ವ್ಯವಸ್ಥೆ, ಸಂಚಾರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಸ್ಪಾಟ್‌ ಫೈನ್‌ ಕ್ಯಾನ್ಸಲ್‌ ಮಾಡಿ ಕಾಂಟ್ಯಾಕ್ಟ್ಟ ಲೆಸ್ ಕೇಸ್ ಗಳ ದಾಖಲು ಮಾಡುವುದು ಸೇರಿದಂತೆ ಹಲವು ಕ್ರಮಗಳನ್ನ ಸಂಚಾರಿ ಪೊಲೀಸರು ಕೈಗೊಂಡಿದ್ದಾರೆ. ಈಗ ಮತ್ತೊಂದು ಹೊಸ ವಿಧಾನ ಪೊಲೀಸರು ಕಂಡುಕೊಂಡಿದ್ದಾರೆ. ಟ್ರಾಫಿಕ್‌ ನ ಸ್ಟ್ಯಾಟಿಸ್ಟಿಕ್‌ನ್ನು ತೆಗೆದುಕೊಂಡು ಪರಿಶೀಲನೆ ನಡೆಸಿ ಅದಕ್ಕೊಂದು ಪರಿಹಾರವನ್ನೂ ಕಂಡುಕೊಂಡಿದ್ದಾರೆ. ಅದಕ್ಕೆ ಇಟ್ಟ ಹೆಸರು ಬ್ಲಾಕ್‌ ಸ್ಪಾಟ್‌.

ಅತಿಯಾದ ವೇಗ , ರಸ್ತೆಗುಂಡಿಗಳೂ ಕೂಡ ಅಪಘಾತಕ್ಕೆ ಕಾರಣವಾಗಿದೆ. ಹಾಗು ಅವೈಜ್ಜಾನಿಕವಾಗಿ ಅಳವಡಿಸಿರುವ ರೋಡ್‌ ಹಂಪ್ಸ್‌ ಕೂಡ ಆಕ್ಸಿಡೆಂಟ್‌ ಕಾರಣವಾಗಿದೆ. ಈ ಹಿನ್ನಲೆ ಸಂಚಾರಿ ಪೊಲೀಸರಲ್ಲದೆ ಮತ್ತೆರಡು ಇಲಾಖೆಯ ಅಧಿಕಾರಿಗಳು ಕೂಡ ಇನ್ಸ್ಪೆಕ್ಷನ್‌ ಮಾಡಲಿದ್ದಾರೆ. ಯೆಸ್‌, ಪಿ ಡಬ್ಲ್ಯೂ ಡಿ ಹಾಗು ಬಿಬಿಎಂಪಿ ಅಧಿಕಾರಿಗಳು ಕೂಡ ಸಂಚಾರಿ ಪೊಲೀಸ್‌ ಅಧಿಕಾರಿಗಳ ಜೊತೆಗಿದ್ದು ಕಾರ್ಯ ನಿರ್ವಹಿಸಲಿದ್ದಾರೆ. ಈಗಾಗಲೆ ಎಲ್ಲೆಲ್ಲಿ ಬ್ಲಾಕ್‌ ಸ್ಪಾಟ್‌ಗಳೆಂದು ಗುರುತಿಸಲಾಗಿದ್ಯೋ ಅಲ್ಲೆಲ್ಲ ಮೂರು ತಿಂಗಳಿಗೊಮ್ಮೆ ಮತ್ತೆ ಸರ್ವೇ ನಡೆಸಲಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:14 am, Thu, 24 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ