AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಪತಿ ಜೊತೆ ಬೈಕ್ ಹಿಂಬದಿಯಲ್ಲಿ ಕುಳಿತುಕೊಂಡು ಹೋಗುತ್ತಿದ್ದ ಮಹಿಳೆ ಏಕಾಏಕಿ ಕೆಳಗೆ ಬಿದ್ದು ಸಾವು

Vijayapura News: ತಿಕೋಟಾ ತಾಲೂಕಿನ ಬಾಬಾನಗರ- ಕಳ್ಳಕವಟಗಿ ರಸ್ತೆಯಲ್ಲಿ ತೆರಳುವಾಗ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ವಿಜಯಪುರ: ಪತಿ ಜೊತೆ ಬೈಕ್ ಹಿಂಬದಿಯಲ್ಲಿ ಕುಳಿತುಕೊಂಡು ಹೋಗುತ್ತಿದ್ದ ಮಹಿಳೆ ಏಕಾಏಕಿ ಕೆಳಗೆ ಬಿದ್ದು ಸಾವು
ವಿಜಯಲಕ್ಷ್ಮಿ ಚಂದ್ರಕಾಂತ ಶಿರದವಾಡ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Aug 09, 2023 | 11:20 AM

Share

ವಿಜಯಪುರ, ಆ.09: ತಿಕೋಟಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಅಪಘಾತ(Accident) ಸಂಭವಿಸಿದೆ. ತಿಕೋಟಾ ತಾಲೂಕಿನ ಬಾಬಾನಗರ- ಕಳ್ಳಕವಟಗಿ ರಸ್ತೆಯಲ್ಲಿ ತೆರಳುವಾಗ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ(Death). ವಿಜಯಲಕ್ಷ್ಮಿ ಚಂದ್ರಕಾಂತ ಶಿರದವಾಡ(35) ಮೃತ ಮಹಿಳೆ. ತಿಕೋಟಾದಿಂದ ಪತಿ ಚಂದ್ರಕಾಂತ ಜೊತೆ ಕಳ್ಳಕವಟಗಿ ಗ್ರಾಮಕ್ಕೆ ಬೈಕ್​ನಲ್ಲಿ ಹೊರಟಿದ್ದ ವೇಳೆ ಮಹಿಳೆ ಬೈಕ್​ನಿಂದ ಬಿದ್ದು ಮೃತಪಟ್ಟಿದ್ದಾರೆ.

ಎರಡು ಬೈಕ್‌ಗಳ ಮಧ್ಯೆ ಡಿಕ್ಕಿ ಓರ್ವ ಸಾವು

ವಿಜಯಪುರ ನಗರದ ಶಿವಾಜಿ ಸರ್ಕಲ್‌ನಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್​ ಸವಾರ ಲಾಲ‌ಸಾಬ್ ಜಾನ್ವೇಕರ್(44) ಎಂಬುವವರು ಮೃತಪಟ್ಟಿದ್ದು ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ; 510 ಗ್ರಾಂ ಗಾಂಜಾ ಜಪ್ತಿ

ವಾಹನ ಪಲ್ಟಿ, 15ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬಸಾಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿದ್ದು 15ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗಳಾಗಿವೆ. ಐವರು ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ.

ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ ಮಹಿಳಾ ಕಾರ್ಮಿಕರನ್ನು ಕಾಫಿ ತೋಟಕ್ಕೆ ಕರೆದೊಯ್ಯುತ್ತಿದ್ದಾಗ ಪಿಕ್‌ಅಪ್ ವಾಹನ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಪಿಕ್‌ಅಪ್ ವಾಹನದಲ್ಲಿ ಇಪ್ಪತ್ತಕ್ಕೂ ಹೆಚ್ಚು ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಗಾಯಾಳುಗಳಿಗೆ ಸಕಲೇಶಪುರ ಹಾಗೂ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:19 am, Wed, 9 August 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?