AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಪ್ಪ ಹರಿಜನ​ ಕೊಲೆ ಕೇಸ್​: ಪಿಂಟ್ಯಾ ಸೇರಿ ನಾಲ್ವರು ಆರೋಪಿಗಳ ಬಂಧನ

ವಿಜಯಪುರದಲ್ಲಿ ಭೀಮಾತೀರದ ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ಅವರ ಹತ್ಯೆ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಬೇಧಿಸಿದ್ದಾರೆ. ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಈ ಹತ್ಯೆ ವಕೀಲ ರವಿ ಅಗರಖೇಡ್ ಹತ್ಯೆಗೆ ಪ್ರತೀಕಾರ ಎಂಬ ಅನುಮಾನವಿದೆ. ರವಿ ಅವರ ಸಹೋದರ ಪ್ರಕಾಶ್ ಈ ಕೊಲೆಯಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಗಪ್ಪ ಹರಿಜನ​ ಕೊಲೆ ಕೇಸ್​: ಪಿಂಟ್ಯಾ ಸೇರಿ ನಾಲ್ವರು ಆರೋಪಿಗಳ ಬಂಧನ
ಬಾಗಪ್ಪ ಹರಿಜನ, ಕೊಲೆ ಮಾಡಿದ ಆರೋಪಿಗಳು
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ|

Updated on:Feb 14, 2025 | 10:01 AM

Share

ವಿಜಯಪುರ, ಫೆಬ್ರವರಿ 14: ಭೀಮಾತೀರದ ನಟೋರಿಯಸ್​ ರೌಡಿ ಬಾಗಪ್ಪ ಹರಿಜನ (Bagappa Harijan) ಹತ್ಯೆ ಪ್ರಕರಣ ವಿಜಯಪುರ (Vijayapura) ಪೊಲೀಸರು ಬೇಧಿಸಿದ್ದಾರೆ. ಗಾಂಧಿಚೌಕ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲಿ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಪ್ರಕಾಶ ಅಲಿಯಾಸ್​ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಎ1 ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು ಎಂದು ಎಸ್​ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರೆಲ್ಲರು ಗೆಳೆಯರು ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್​ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಬಾಗಪ್ಪ ಹರಿಜನ​ ಕೊಲೆ

ಫೆಬ್ರವರಿ 11 ರಾತ್ರಿ 9:45ರ ಸುಮಾರಿಗೆ ವಿಜಯಪುರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಬರ್ಬರ ಕೊಲೆ ಮಾಡಲಾಗಿತ್ತು. ಆಟೋದಲ್ಲಿ ಬಂದಿದ್ದ ನಾಲ್ಕೈದು ಮಂದಿ, ಪಕ್ಕಾ ಪ್ಲ್ಯಾನ್ ಮಾಡಿ ಮಾರಕಾಸ್ತ್ರಗಳಿಂದ ಬಾಗಪ್ಪನ ತಲೆ, ಕೈಗೆ ಹಲ್ಲೆಗೈದು, ಎಡಗೈ ಮತ್ತು ಮುಂಗೈ ಕತ್ತರಿಸಿ ಮತ್ತು ಗುಂಡು ಹಾರಿಸಿ ಸಂಬಂಧಿಕರ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು. ಊಟ ಮಾಡಿ ವಾಕ್ ಮಾಡುತ್ತಿದ್ದಾಗಗಲೇ ಬಾಗಪ್ಪನನ್ನು ಕೊಲೆಗೈದು ಪರಾರಿಯಾಗಿದ್ದಾರೆ.

ವಕೀಲ ರವಿ ಹತ್ಯೆಗೆ ಪ್ರತೀಕಾರನಾ?

2024 ರ ಆಗಷ್ಟ 12 ರಂದು ರವಿ ಹತ್ಯೆಯಾಗಿತ್ತು. ವಿಜಯಪುರ ನಗರದ ಬಸವ ನಗರ ರಸ್ತೆಯ ಮೇಲೆ ಸ್ಕೂಟಿ ಮೇಲೆ ತೆರಳುತ್ತಿದ್ದ ರವಿ ಮೇಲೆ ಇನೋವಾ ಕಾರ್ ಹರಿಸಲಾಗಿತ್ತು. ಇನೋವಾ ಕಾರಿನ ಅಡಿಯಲ್ಲಿ ರವಿ ಶವ ಸಿಕ್ಕಿಹಾಕಿಕೊಂಡಿತ್ತು. ಶವವನ್ನು 2-3 ಕಿಮೀ ದೂರ ಎಳೆದುಕೊಂಡು ಹೋಗಿದ್ದ ಇನೋವಾ ಕಾರನಲ್ಲಿ ತುಳಸಿರಾಮ್ ಹರಿಜನ್ ಹಾಗೂ ಸಹಚರರಿದ್ದರು. ಈ ಪ್ರಕರಣದಲ್ಲಿ ತುಳಸಿರಾಮನಿಗೆ ಭಾಗಪ್ಪ ಹರಿಜನ್​ ಬೆಂಬಲ ನೀಡಿದ್ದಾನೆ ಆರೋಪ ಕೇಳಿ ಬಂದಿತ್ತು. ಬಾಗಪ್ಪ ಹತ್ಯೆಯಾದ ಬಳಿಕ ರವಿ ಸಹೋದರ ಪ್ರಕಾಶ್ ಅಲಿಯಾಸ್​ ಪಿಂಟ್ಯಾ ಅಣ್ಣನ ಆತ್ಮಕ್ಕೆ ಶಾಂತಿ ಸಿಕ್ಕಿತು ಎಂದು ಸ್ಟೇಟಸ್ ಹಾಕಿದ್ದನು ಎನ್ನಲಾಗಿದೆ.

ಇದನ್ನೂ ಓದಿ: ಭೀಮಾತೀರದ ಹಂತಕನ ಹತ್ಯೆ ಹಿಂದೆ ಇದೆಯಾ ಅಡುಗೆ ಕೆಲಸದವಳ ಕೈವಾಡ? ಬಾಗಪ್ಪ ಹರಿಜನ್​ ಪುತ್ರಿಯರು ಹೇಳಿದ್ದಿಷ್ಟು

ಕೊಲೆಯಾಗಿದ್ದ ವಕೀಲ ರವಿ ಅಗರಖೇಡ್​ನ ತಮ್ಮನೇ ಪ್ರಕಾಶ್​ ಅಲಿಯಾಸ್​ ಪಿಂಟ್ಯಾ. ಬಾಗಪ್ಪ ಹರಿಜನ್​ ಬರ್ಬರ ಹತ್ಯೆ ಕೇಸ್ ತನಿಖೆಯನ್ನು ಪೊಲೀಸರು ಹಲವು ಆಯಾಮಗಳಲ್ಲಿ ನಡೆಸುತ್ತಿದ್ದು, ವಕೀಲ ರವಿ ಅಗರಖೇಡ್ ಹತ್ಯೆಗೆ ಬಾಗಪ್ಪ ಕೊಲೆ ಮೂಲಕ ಪ್ರತಿಕಾರವೇ ಎನ್ನುವ ಆ್ಯಂಗಲ್​ನಲ್ಲೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕೊಲೆಯಾಗಿರುವ ವಕೀಲ ರವಿ ಸಹೋದರ ಪ್ರಕಾಶ್ ಅಲಿಯಾಸ್ ಪಿಂಟ್ಯಾ ಮತ್ತು ಸಹಚರರಿಂದ ಕೃತ್ಯ ಎಸಗಲಾಗಿದ ಎಂದು ಬಾಗಪ್ಪ ಪುತ್ರಿ ಗಂಗೂಬಾಯಿ ಗಾಂಧಿಚೌಕ ಠಾಣೆಗೆ ದೂರು ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 am, Fri, 14 February 25