ಪ್ರತಿಭಟನೆ ವೇಳೆ ಪಿಎಸ್​​ಐಗೆ ಸ್ವಾಮೀಜಿಯಿಂದ ಕಪಾಳಮೋಕ್ಷ: ಅಷ್ಟಕ್ಕೂ ಆಗಿದ್ದೇನು?

ವಿಜಯಪುರದಲ್ಲಿ ಖಾಸಗಿ ಮೆಡಿಕಲ್ ಕಾಲೇಜು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಅನಿರೀಕ್ಷಿತ ಘಟನೆ ನಡೆದಿದೆ. ಮೊಬೈಲ್ ಕಸಿದಿದ್ದಕ್ಕೆ, ಸಿಟ್ಟಿಗೆದ್ದ ಸ್ವಾಮೀಜಿ ಮಫ್ತಿಯಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಬಳಿಕ ಎಲ್ಲ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್​​ ನಿವಾಸಕ್ಕೆ ಮುತ್ತಿಗೆ ಯತ್ನ ವೇಳೆ ಈ ಎಲ್ಲ ಘಟನೆಗಳು ನಡೆದಿವೆ.

ಪ್ರತಿಭಟನೆ ವೇಳೆ ಪಿಎಸ್​​ಐಗೆ ಸ್ವಾಮೀಜಿಯಿಂದ ಕಪಾಳಮೋಕ್ಷ: ಅಷ್ಟಕ್ಕೂ ಆಗಿದ್ದೇನು?
PSIಗೆ ಸ್ವಾಮೀಜಿಯಿಂದ ಕಪಾಳಮೋಕ್ಷ
Edited By:

Updated on: Jan 01, 2026 | 2:00 PM

ವಿಜಯಪುರ, ಜನವರಿ 01: ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಮಫ್ತಿಯಲ್ಲಿದ್ದ ಪಿಎಸ್​ಐಗೆ ಸ್ವಾಮೀಜಿ ಕಪಾಳಮೋಕ್ಷ ಮಾಡಿರುವ ಘಟನೆ ವಿಜಯಪುರ- ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ. ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್​​ ನಿವಾಸಕ್ಕೆ ಮುತ್ತಿಗೆ ಯತ್ನ ನಡೆಸಿದ್ದು, ಈ ವೇಳೆ ಪೊಲೀಸರು ಸ್ವಾಮೀಜಿ ಬೊಬೈಲ್​​ ಕಸಿದುಕೊಂಡಿದ್ದಾರೆ. ಇದರಿಂದ ಸಿಟ್ಟಾದ ಅವರು ಪೊಲೀಸ್​​ ಅಧಿಕಾರಿ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ.

ಘಟನೆ ಏನು?

ಸಚಿವ MB Patil ಮನೆಗೆ ಮುತ್ತಿಗೆ ಯತ್ನ. ತಡೆದ PSI Seetharam Lamaniಗೆ Sangabasava Swamiji ಕಪಾಳಮೋಕ್ಷ | #TV9D

ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿರೋಧಿಸಿ ಕಳೆದ ನೂರಾರು ದಿನಗಳಿಂದ ಹೋರಾಟ ನಡೆದುಕೊಂಡುಬಂದಿದೆ. ಇದರ ಭಾಗವಾಗಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹೋರಾಟ ಸಮಿತಿ ಮತ್ತು ಇತರ ಸಂಘಟನೆಗಳು ಇಂದು ಉಸ್ತುವಾರಿ ಸಚಿವರ ಮನೆ ಮುತ್ತಿಗೆ ಯತ್ನ ನಡೆಸಿವೆ. ಈ ವೇಳೆ ಹೋರಾಟಗಾರರನ್ನು ವಿಜಯಪುರ-ಸೊಲ್ಲಾಪುರ ರಸ್ತೆಯಲ್ಲಿಯೇ ಪೊಲೀಸರು ತಡೆದಿದ್ದು, ರಸ್ತೆ ಮಧ್ಯ ಹೋರಾಟ ಮಾಡದಂತೆ ಮನವಿ ಮಾಡಿದ್ದಾರೆ. ಜೊತೆಗೆ ಹೋರಾಟದಲ್ಲಿ ಭಾಗಿಯಾಗಿದ್ದ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಸಂಗನಬಸವ ಸ್ವಾಮೀಜಿ ಮೊಬೈಲ್​​ ಕಸಿದಿದ್ದಾರೆ. ಇದರಿಂದ ಕೋಪಗೊಂಡ ಸ್ವಾಮೀಜಿ ಪೊಲೀಸ್​​ ಯೂನಿಫಾರ್ಮ್​​ ಧರಿಸಿರದ ಪಿಎಸ್​ಐ ಸೀತಾರಾಮ್ ಲಮಾಣಿಗೆ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ನಾನು ತಪ್ಪು ಮಾಡಿಲ್ಲ, ಕರೆ ಮಾಡುತ್ತೇನೆಂದರೂ ಮೊಬೈಲ್ ಕಸಿದರು ಎಂದು ಸಂಗನಬಸವ ಸ್ವಾಮೀಜಿ ಹೇಳಿದ್ದಾರೆ. ಆದರೆ ಶ್ರೀಗಳನ್ನು ಎಳೆದು ತಮ್ಮ ವಾಹನದಲ್ಲಿ ಪೊಲೀಸರು ಕೂರಿಸಿದ್ದಾರೆ. ಕರ್ತವ್ಯ ನಿರತ ಅಧಿಕಾರಿ ಮೇಲೆ ಸ್ವಾಮೀಜಿ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದು, ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಬಳಿಕ ಎಲ್ಲ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Loading...
Unable to load recommendations.
Follow Us