ವಿಜಯಪುರ: ಯುವಕನ ಕೊಲೆ; ಭೀಮಾತೀರದಲ್ಲಿ ಕೇಳಿಬಂತು ಮರ್ಯಾದೆ ಹತ್ಯೆ ಆರೋಪ

Vijayapura News: ಯುವತಿಯ ಇಬ್ಬರು ಪೋಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆಲಮೇಲ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಜಯಪುರ: ಯುವಕನ ಕೊಲೆ; ಭೀಮಾತೀರದಲ್ಲಿ ಕೇಳಿಬಂತು ಮರ್ಯಾದೆ ಹತ್ಯೆ ಆರೋಪ
ಪ್ರಾತಿನಿದಿಕ ಚಿತ್ರ

ವಿಜಯಪುರ: ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ಆರೋಪ ಕೇಳಿಬಂದಿದೆ. ಯುವತಿಯನ್ನು ಪ್ರೀತಿಸಿದ್ದಕ್ಕೆ ಅನ್ಯ ಕೋಮಿನ ಯುವಕನ ಕೊಲೆ ಮಾಡಲಾಗಿದೆ. ಬಳಗಾನೂರ ಗ್ರಾಮದಲ್ಲಿ ರವಿ ನಿಂಬರಗಿ (32) ಎಂಬಾತ ಮೃತ ದುರ್ದೈವಿ. ಈ ಸಂಬಂಧ, ಯುವತಿಯ ಇಬ್ಬರು ಪೋಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆಲಮೇಲ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೋಲಾರ: ಪತ್ನಿಯನ್ನು ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ
ಪತ್ನಿಯನ್ನು ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋಲಾರದ ಒಂದನೇ ಸೆಷನ್ಸ್‌ ಕೋರ್ಟ್‌ ತೀರ್ಪು ನೀಡಿದೆ. ಮಣಿಯನಹಳ್ಳಿ ನಿವಾಸಿ ಲಕ್ಷ್ಮೀಪತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೋಲಾರ ತಾಲೂಕಿನ ಮಣಿಯನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀಪತಿ ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ಚಂದ್ರಕಲಾ ಹತ್ಯೆ ಮಾಡಿದ್ದ. 2019ರ ಜನವರಿ 21 ರಂದು ಪತ್ನಿಯನ್ನು ಸ್ವತಃ ಪತಿಯೇ ಕೊಲೆ ಮಾಡಿದ್ದ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಚಿಕ್ಕಬಳ್ಳಾಪುರ: ಅತ್ಯಾಚಾರ ಆರೋಪಿಗೆ ಕಠಿಣ ಕಾರಾಗೃಹ
ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರ ಆರೋಪಿಗೆ 13 ವರ್ಷ ಕಠಿಣ ಕಾರಾಗೃಹ ಹಾಗೂ 15 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹೀಗೆ ತೀರ್ಪು ನೀಡಿದೆ. ನ್ಯಾಯಾಧೀಶರಾದ ಬಿ.ಸಿ. ಭಾನುಮತಿ ಅವರಿಂದ ತೀರ್ಪು ನೀಡಲಾಗಿದೆ. 2018 ರ ಆಗಸ್ಟ್ 27 ರಂದು ಈ ಅತ್ಯಾಚಾರ ಪ್ರಕರಣ ನಡೆದಿತ್ತು. ಗೌರಿಬಿದನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಭಿಯೋಜಕ ಮುನಿರೆಡ್ಡಿ ವಾದ ಮಂಡಿಸಿದ್ದರು.

ಇದನ್ನೂ ಓದಿ: ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ; ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ

ಇದನ್ನೂ ಓದಿ: Crime News: ಮೈಸೂರು ಹೊರವಲಯದಲ್ಲಿ ಡಬಲ್ ಮರ್ಡರ್; ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿ ಕೊಲೆ

Click on your DTH Provider to Add TV9 Kannada