AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ಹಳೆಯ ವೈಷಮ್ಯಕ್ಕೆ ಯಾಸೀನ್ ಠಕ್ಕೆ ಕೊಲೆ

ವಿಜಯಪುರದಲ್ಲಿ ಮತ್ತೆ ಗ್ಯಾಂಗ್‌ವಾರ್ ನಡೆದಿದ್ದು, ಯಾಸೀನ್ ಠಕ್ಕೆ ಎಂಬ ಯುವಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮುಂಡೆವಾಡಿ ಆಸ್ಪತ್ರೆ ಬಳಿ ನಡೆದ ಈ ಘಟನೆಗೆ ಹಳೆಯ ಡಿಜೆ ವಿವಾದವೇ ಕಾರಣವೆಂದು ಶಂಕಿಸಲಾಗಿದೆ. ವಿಜಯಪುರದಲ್ಲಿ ಬಂದೂಕು ಸಂಸ್ಕೃತಿ ಹೆಚ್ಚುತ್ತಿದ್ದು, ಸರಣಿ ಅಪರಾಧಗಳಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಪೊಲೀಸರು ತನಿಖೆ ಮುಂದುವರಿಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ಹಳೆಯ ವೈಷಮ್ಯಕ್ಕೆ ಯಾಸೀನ್ ಠಕ್ಕೆ ಕೊಲೆ
ಬಾವಡಿ ನಿವಾಸಿ ಯಾಸೀನ್Image Credit source: Tv9 kannada
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Nov 05, 2026 | 7:17 PM

Share

ವಿಜಯಪುರ, ನ.05: ವಿಜಯಪುರದಲ್ಲಿ ಮತ್ತೆ ನೆತ್ತರಿನ ಓಕುಳಿಯಾಗಿದೆ. ಗ್ಯಾಂಗ್‌ವಾರ್ ಹಾಗೂ ಸರಣಿ ಅಪರಾಧ ಕೃತ್ಯಗಳಿಗೆ ಹೆಸರುವಾಸಿಯಾಗಿದ್ದ ನಗರದಲ್ಲಿ ಮತ್ತೊಮ್ಮೆ ಗುಂಡಿನ ಮೊರೆತ ಕೇಳಿಬಂದಿದ್ದು, ದುಷ್ಕರ್ಮಿಗಳು ಯುವಕನೊಬ್ಬನನ್ನು ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಗರದ ಗ್ಯಾಂಗ್ ಬಾವಡಿ ನಿವಾಸಿ ಯಾಸೀನ್ ಠಕ್ಕೆ ಕೊಲೆಯಾದ ದುರದೃಷ್ಟಕರ ಯುವಕ. ನಗರದ ಮುಂಡೆವಾಡಿ ಆಸ್ಪತ್ರೆಯ ಸಮೀಪ ಈ ಘಟನೆ ಸಂಭವಿಸಿದ್ದು, ಹತ್ಯೆಯಿಂದಾಗಿ ಸ್ಥಳೀಯ ಪ್ರದೇಶದಲ್ಲಿ ತೀವ್ರ ಆತಂಕ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಪ್ರತ್ಯಕ್ಷದರ್ಶಿಗಳು ಹಾಗೂ ಪೊಲೀಸ್ ಮೂಲಗಳ ಪ್ರಕಾರ, ಯಾಸೀನ್ ಠಕ್ಕೆ ಅವರು ತಮ್ಮ ಸ್ಕೂಟಿಯಲ್ಲಿ ಮುಂಡೆವಾಡಿ ಆಸ್ಪತ್ರೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ಹಠಾತ್ತಾಗಿ ಎದುರಾದ ದುಷ್ಕರ್ಮಿಗಳು ವಾಹನವನ್ನು ತಡೆದು ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಯಾಸೀನ್ ಅವರ ಮೇಲೆ ಸತತ 2 ಸುತ್ತು ಫೈರಿಂಗ್ ನಡೆಸಿದ್ದಾರೆ. ಗನ್‌ನಿಂದ ಚಿಮ್ಮಿದ ಗುಂಡುಗಳು ನೇರವಾಗಿ ಯಾಸೀನ್ ಅವರ ಎದೆಗೆ ತಗುಲಿದ್ದರಿಂದ, ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲಿಸಿದ ಪೊಲೀಸರಿಗೆ ಎರಡು ರೌಂಡ್ ಖಾಲಿ ಬುಲೆಟ್ ಕವರ್‌ಗಳು ಲಭ್ಯವಾಗಿವೆ.

ಹಳೆಯ ವೈಷಮ್ಯವೇ ಕೊಲೆಗೆ ಕಾರಣ?

ವಿಜಯಪುರ ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಈ ಭೀಕರ ಹತ್ಯೆಯ ಹಿಂದೆ ಹಳೆಯ ದ್ವೇಷ ಅಡಗಿದೆ ಎನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ನಗರದಲ್ಲಿ ಸಂಭವಿಸಿದ್ದ ಡಿಜೆ ಸೌಂಡ್ ಸಿಸ್ಟಮ್ ವಿಚಾರಕ್ಕೆ ಸಂಬಂಧಿಸಿದಂತೆ ಯಾಸೀನ್ ಹಾಗೂ ಇನ್ನೊಂದು ಗುಂಪಿನ ನಡುವೆ ಭಾರಿ ಗಲಾಟೆ ನಡೆದಿತ್ತು. ಆ ಗಲಾಟೆಯ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಎದುರಾಳಿ ಗುಂಪು, ಸೂಕ್ತ ಸಮಯಕ್ಕಾಗಿ ಕಾಯ್ದು ಯಾಸೀನ್‌ನನ್ನು ಸ್ಕೂಟಿಯಲ್ಲಿ ಒಂಟಿಯಾಗಿ ಸರಣಿ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಗಾಂಧಿಚೌಕ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸ್ಥಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆಸ್ಪತ್ರೆ ಹಾಗೂ ಗ್ಯಾಂಗ್ ಬಾವಡಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್: 6 ಮಂದಿ ಖತರ್ನಾಕ್ ಗಾಂಜಾ ಪೆಡ್ಲರ್‌ಗಳ ಬಂಧನ

ವಿಜಯಪುರದಲ್ಲಿ ರಕ್ತದ ಇತಿಹಾಸ:

ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಸಣ್ಣ ಸಣ್ಣ ಗಲಾಟೆಗಳು ಸರಣಿ ಕೊಲೆ ಹಾಗೂ ಶೂಟೌಟ್‌ ಇದೇ ಮೊದಲೇನಲ್ಲ. ಜಿಲ್ಲೆಯಲ್ಲಿ ಬಂದೂಕು ಹಾಗೂ ಗ್ಯಾಂಗ್‌ವಾರ್‌ ಸಂಸ್ಕೃತಿಗೆ ದಶಕಗಳ ಭೀಕರ ಇತಿಹಾಸವಿದೆ. ವಿಜಯಪುರದ ಇತಿಹಾಸದಲ್ಲಿ ಗ್ಯಾಂಗ್‌ವಾರ್‌ಗಳಲ್ಲಿ ಭೀಮಾ ತೀರದ ರೌಡಿಶೀಟರ್‌ಗಳಾದ ಚಂದಪ್ಪ ಹರಿಜನ ಹಾಗೂ ಭಾಗಪ್ಪ ಹರಿಜನ ನಡುವಿನ ಕಾದಾಟ ಪ್ರಮುಖವಾದದ್ದು. ಭಾಗಪ್ಪ ಹರಿಜನ ಮೇಲೆ ಕೋರ್ಟ್ ಆವರಣದಲ್ಲೇ 5 ಸುತ್ತು ಗುಂಡು ಹಾರಿಸಿ ಕೊಲೆ ಯತ್ನ ನಡೆಸಲಾಗಿತ್ತು. ಇನ್ನು ಚಡಚಣ ತಾಲೂಕಿನಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ರೌಡಿಶೀಟರ್ ಭೀಮನ್‌ಗೌಡ ಬಿರಾದಾರ್ ಅವರನ್ನು ಕಟಿಂಗ್ ಶಾಪ್ ಒಳಗೆ ನುಗ್ಗಿ, ಕಣ್ಣಿಗೆ ಖಾರದ ಪುಡಿ ಎರಚಿ ಪಾಯಿಂಟ್ ಬ್ಲಾಂಕ್‌ನಲ್ಲಿ ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.

ವಿಜಯಪುರದಲ್ಲಿ ಕಂಟ್ರಿಮೇಡ್ ಪಿಸ್ತೂಲ್‌ಗಳು ಸುಲಭವಾಗಿ ಲಭ್ಯವಾಗುತ್ತಿದ್ದು, ಕ್ಷುಲ್ಲಕ ರಿಯಲ್ ಎಸ್ಟೇಟ್ ವಿವಾದ, ವೈಯಕ್ತಿಕ ದ್ವೇಷ ಹಾಗೂ ಡಿಜೆ ಸೌಂಡ್ ಗಲಾಟೆಗಳಿಗೂ ಬಂದೂಕುಗಳನ್ನು ಬಳಸಿ ಕೊಲೆ ಮಾಡುವ ಪ್ರವೃತ್ತಿ ಬೆಳೆದುಬಂದಿದೆ. ಇದೀಗ ಡಿಜೆ ವಿಚಾರದ ಸಣ್ಣ ಗಲಾಟೆಯೂ ಯಾಸೀನ್ ಠಕ್ಕೆ ಎಂಬ ಯುವಕನ ಜೀವ ಬಲಿ ಪಡೆದಿದ್ದು, ಬಂದೂಕು ಸಂಸ್ಕೃತಿಗೆ ಕಡಿವಾಣ ಹಾಕಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ಅಶೋಕ ಯಡಳ್ಳಿಯವರು ಮೂಲತಃ ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದವರು. ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇದು ಇವರ ಕೆಲಸದ ಮಾಹಿತಿಯಾಗಿದೆ. ಪ್ರಾಥಮಿಕ ಶಿಕ್ಷಣ ನಂತರ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡವೇ ಇವರ ವಿದ್ಯಾ ಕ್ಷೇತ್ರವಾಗಿದೆ . ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ್ದಾರೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ, ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದಾರೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ, ಆಸಕ್ತಿ ಇವರಗಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ.

Read More
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ