ಸಚಿವ ಎಂಬಿ ಪಾಟೀಲ್ ಪರ ರಂಭಾಪುರಿ ಶ್ರೀ ಬ್ಯಾಟಿಂಗ್: ಸಿದ್ದರಾಮಯ್ಯ ವಿರುದ್ಧ ಅಸಮಾಧಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಳವಾಟ ಗ್ರಾಮದಲ್ಲಿ ಮಾತನಾಡಿದ ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ, ಸಚಿವ ಎಂಬಿ ಪಾಟೀಲ್​ ಅವರನ್ನು ಹಾಡಿಹೊಗಳಿದ್ದಾರೆ. ಜಲಸಂಪನ್ಮೂಲ ಖಾತೆ ನೀಡದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಎಂಬಿ ಪಾಟೀಲ್ ಪರ ರಂಭಾಪುರಿ ಶ್ರೀ ಬ್ಯಾಟಿಂಗ್: ಸಿದ್ದರಾಮಯ್ಯ ವಿರುದ್ಧ ಅಸಮಾಧಾನ
ರಂಭಾಪುರಿ ಶ್ರೀ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 10, 2023 | 4:32 PM

ವಿಜಯಪುರ, ಡಿಸೆಂಬರ್​​ 10: ಈ ಬಾರಿ ಸರ್ಕಾರದಲ್ಲಿ ಎಂಬಿ ಪಾಟೀಲ್ (MB Patil)​ ಅವರಿಗೆ ಜಲಸಂಪನ್ಮೂಲ ಖಾತೆ ಸಿಗುತ್ತೆ ಅಂತ ಬಹಳ ಆಸೆ ಇಟ್ಟುಕೊಂಡಿದ್ದೇವು. ಆದರೆ ಅದು ಬೇರೆಯವರ ಪಾಲಾಯಿತು. ಸಿಎಂ ಸಿದ್ದರಾಮಯ್ಯ ಅವರು ಅವಕಾಶ ಕೊಡಲಿಲ್ಲ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಳವಾಟ ಗ್ರಾಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದಲ್ಲಿ ಬೃಹತ್ ಕೈಗಾರಿಕಾ ಸಚಿವರಾಗಿ ಎರಡನೇ ಸ್ಥಾನದಲ್ಲಿ ಎಂಬಿ ಪಾಟೀಲ್ ಮುನ್ನಡೆಯುತ್ತಿದ್ದಾರೆ ಎಂದು ಹೊಗಳಿದ್ದಾರೆ.

ಕೈಗಾರಿಕೆಯಿಂದ ರಾಜ್ಯ, ಜಿಲ್ಲೆಯಲ್ಲಿ ಏನೇನು ಮಾಡಬೇಕು ಅದನ್ನು ಮಾಡಲು ಭದ್ರವಾದ ಬುನಾದಿ ಹಾಕುತ್ತಿದ್ದಾರೆ. ವಿದೇಶದಿಂದ ಹೆಚ್ಚಿನ ನೆರವು ತರುತ್ತಿದ್ದಾರೆ. ಹಿಂದೆ ಜಲಸಂಪನ್ಮೂಲ ಸಚಿವರಿದ್ದಾಗ ಬಹಳ ದೊಡ್ಡ ಕೆಲಸ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ಭಾಗದಲ್ಲಿ ಕೆರೆ ತುಂಬುವ ಕೆಲಸ ಮಾಡಿದ್ದು ದೊಡ್ಡ ಕೆಲಸ. ಇವತ್ತು ಬಹಳ ಮಳೆ ಆಗದೇ ಇದ್ದರೂ ಇಲ್ಲಿ ಹಸಿರು ನೋಡಿದರೆ, ಎಲ್ಲಾ ಕೆರೆ ತುಂಬಿದ ಪರಿಣಾಮದಿಂದಲೇ ಅಂತರ್ಜಲ ಹೆಚ್ಚಾಗಿ ಬೋರ್ವೆಲ್​ನಲ್ಲಿ ನೀರಿದೆ. ಫಸಲು ಬೆಳೆಯಲು ಸಾಧ್ಯವಾಗಿದೆ ಎಂದಿದ್ದಾರೆ.

ಅನುದಾನ ಕೊಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರಂಭಾಪುರಿ ಶ್ರೀ

ರೇಣುಕಾಚಾರ್ಯ ಶಿಲಾ ಮಂಟಪಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಕೊಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರಂಭಾಪುರಿ ಶ್ರೀ, ಬಾಳೆ ಹೊನ್ನೂರು ಧರ್ಮ ಪೀಠದಲ್ಲಿ 51 ಅಡಿ ಎತ್ತರದ ಜಗದ್ಗುರು ರೇಣುಕಾಚಾರ್ಯರ ಶಿಲಾ ಮಂಟಪ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಮೂರು ಬೃಹತ್ ಶಿಲೆಗಳು ಬಂದಿವೆ. ಶಿಲ್ಪಿಗಳು ಕೆಲಸ ಮಾಡುತ್ತಿದ್ದಾರೆ. 36 ಅಡಿ ಎತ್ತರ 22 ಅಗಲದ ಕಲ್ಲು ಆಂಧ್ರದಿಂದ ವರ್ಷದ ಕೊನೆ ಹಂತದಲ್ಲಿ ಬರಲಿದೆ. 12 ಕೋಟಿ ರೂ. ಯೋಜನೆ ಅದು. ಬಿಎಸ್​ ಯಡಿಯೂರಪ್ಪ ಸಿಎಂ ಆಗಿದ್ದಾಗ ಐದು ಕೋಟಿ ರೂ. ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ಜನತಾ ದಳದಲ್ಲಿದ್ದಾಗ ಮುಸಲ್ಮಾನರನ್ನು ಓಲೈಸುತ್ತಿದ್ದ ಬಸನಗೌಡ ಯತ್ನಾಳ್ ಬಿಜೆಪಿಗೆ ಪುನರ್ ಪ್ರವೇಶ ಪಡೆದು ದ್ವೇಷಿಸುತ್ತಿದ್ದಾರೆ: ಎಂಬಿ ಪಾಟೀಲ್

ಆಮೇಲೆ ಬಂದಂತಹ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಆಗಲಿ, ಸದ್ಯ ಕಾಂಗ್ರೆಸ್ ಸರ್ಕಾರದ ಮುಖ್ಯಸ್ಥರಾಗಲಿ‌‌, ಯಾವುದೇ ರೀತಿ ಸ್ಪಂದಿಸದೇ ತಟಸ್ಥವಾಗಿ ಮುಂದುವರಿದ್ದಾರೆ‌. ಇಂತಹ ಸಂದರ್ಭದಲ್ಲಿ ನಿಗದಿಪಡಿಸಿದ ಕಾರ್ಯ ಮುಗಿಸಬೇಕು ಎನ್ನುವ ಸಂಕಲ್ಪ. ಭಕ್ತರ ಸಹಾಯ ಪಡೆದುಕೊಂಡು, ಪೀಠವೂ ಸ್ವಲ್ಪ ಹೊರೆ ಹೊತ್ತು, ಆ ಕಾರ್ಯ ಪೂರ್ಣಗೊಳಿಸಲು ಇಚ್ಛೆಪಟ್ಟಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:31 pm, Sun, 10 December 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ