Siddeshwar swamiji: ಸಿದ್ದೇಶ್ವರ ಶ್ರೀಗಳ ಉಸಿರಾಟದಲ್ಲಿ ಸಮಸ್ಯೆ, ಆಕ್ಸಿಜನ್​ ನೀಡುತ್ತಿದ್ದೇವೆ: ಡಾ.ಎಸ್.ಬಿ.ಪಾಟೀಲ್​ ಹೇಳಿಕೆ

ಶ್ರೀಗಳು ಬೆಳಗ್ಗೆ ಗಂಜಿ ಕುಡಿದಿದ್ದರು, ಅದಾದ ನಂತರ ಆಹಾರ ಸೇವಿಸಿಲ್ಲ. ಆಸ್ಪತ್ರೆಗೆ ದಾಖಲಾಗಲು ಸಿದ್ದೇಶ್ವರ ಸ್ವಾಮೀಜಿ ನಿರಾಕರಿಸುತ್ತಿದ್ದಾರೆ.

Siddeshwar swamiji: ಸಿದ್ದೇಶ್ವರ ಶ್ರೀಗಳ ಉಸಿರಾಟದಲ್ಲಿ ಸಮಸ್ಯೆ, ಆಕ್ಸಿಜನ್​ ನೀಡುತ್ತಿದ್ದೇವೆ: ಡಾ.ಎಸ್.ಬಿ.ಪಾಟೀಲ್​ ಹೇಳಿಕೆ
ಸಿದ್ದೇಶ್ವರ ಸ್ವಾಮಿಜಿ, ವೈದ್ಯ ಡಾ.ಎಸ್.ಬಿ.ಪಾಟೀಲ್
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 02, 2023 | 6:47 PM

ವಿಜಯಪುರ: ಜ್ಞಾನಯೋಗಾಶ್ರಮದ (Jnanayogashrama) ಸಿದ್ದೇಶ್ವರ ಸ್ವಾಮೀಜಿ (Siddeshwar swamiji) ಆರೋಗ್ಯದಲ್ಲಿ (Health) ಏರುಪೇರಾಗಿದ್ದು, ಶ್ರೀಗಳಿಗೆ ಉಸಿರಾಟದ ಸಮಸ್ಯೆಯಿದೆ, ಆಕ್ಸಿಜನ್​ ನೀಡುತ್ತಿದ್ದೇವೆ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಎಸ್.ಬಿ.ಪಾಟೀಲ್​ ತಿಳಿಸಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ ರಕ್ತದೊತ್ತಡದಲ್ಲಿ ವ್ಯತ್ಯಾಸ ಆಗಿದೆ. ಚಿಕಿತ್ಸೆಗೆ ಬೇಕಾದ ವೈದ್ಯಕೀಯ ಉಪಕರಣ ಸನ್ನದ್ಧವಾಗಿವೆ. ನಾವು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ ಎಂದು ವೈದ್ಯರು ಹೇಳಿದರು.

ವಿಜಯಪುರದಲ್ಲಿ ಇಂದು (ಜ.2) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಶ್ರೀಗಳು ಬೆಳಗ್ಗೆ ಗಂಜಿ ಕುಡಿದಿದ್ದರು, ಅದಾದ ನಂತರ ಆಹಾರ ಸೇವಿಸಿಲ್ಲ. ಆಸ್ಪತ್ರೆಗೆ ದಾಖಲಾಗಲು ಸಿದ್ದೇಶ್ವರ ಸ್ವಾಮೀಜಿ ನಿರಾಕರಿಸುತ್ತಿದ್ದಾರೆ. ಅವರ ಅಣತಿಯಂತೆ ಜ್ಞಾನಯೋಗಾಶ್ರಮದಲ್ಲೇ ಚಿಕಿತ್ಸೆ ಮುಂದುವರಿಕೆಯಾಗಿದೆ. ಶ್ರೀಗಳಲ್ಲಿ ಮೂಮೆಂಟ್ ಇದೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶ್ರೀ ಸಿದ್ದೇಶ್ವರ ಸ್ವಾಮೀಜಿ ಬೇಗ ಚೇತರಿಸಿಕೊಳ್ಳುವಂತಾಗಲು ಬಿಜ್ಜರಗಿ ಶಾಲಾಮಕ್ಕಳಿಂದ ಎಡೆಬಿಡದ ಪ್ರಾರ್ಥನೆ

ಶ್ರೀಗಳಿಗೆ ಉಸಿರಾಟದಲ್ಲಿ ಸ್ವಲ್ಪ ತೊಂದರೆ ಇದೆ

ಶ್ರೀಗಳಿಗೆ ಉಸಿರಾಟದಲ್ಲಿ ಸ್ವಲ್ಪ ತೊಂದರೆ ಇದೆ. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲು ಮನವೊಲಿಸಲು ಯತ್ನಿಸಿದೆವು. ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದಾರೆ, ಹೀಗಾಗಿ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದೇಶ್ವರ ಶ್ರೀಗಳು ಮಾತನಾಡುತ್ತಿಲ್ಲ, ಆದರೆ ಸನ್ನೆ ಮಾಡುತ್ತಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್