AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದ ನಡುವೆಯೂ ಪುಸ್ತಕ ಬಿಡುಗಡೆ ಮಾಡಿದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ

ಅನಾರೋಗ್ಯದ ನಡುವೆಯೂ ಸಿದ್ದೇಶ್ವರ ಸ್ವಾಮೀಜಿಯವರು ತಾನೇ ಬರೆದ ಜ್ಞಾನಯೋಗ ಸಂಪುಟ ಪುಸ್ತಕ ಬಿಡುಗಡೆ ಮಾಡಿದರು.

ಅನಾರೋಗ್ಯದ ನಡುವೆಯೂ ಪುಸ್ತಕ ಬಿಡುಗಡೆ ಮಾಡಿದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ
ಜ್ಞಾನಯೋಗ ಸಂಪುಟ ಪುಸ್ತಕ ಬಿಡುಗಡೆ ಮಾಡಿದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ
TV9 Web
| Edited By: Rakesh Nayak Manchi|

Updated on:Jan 01, 2023 | 7:00 PM

Share

ವಿಜಯಪುರ: ತಮ್ಮ ‘ಜ್ಞಾನಯೋಗ ಸಂಪುಟ’ ಪುಸ್ತಕವನ್ನು ಸಿದ್ದೇಶ್ವರ ಸ್ವಾಮೀಜಿ (Siddeshwara Swamiji)ಯವರು ವಿಜಯಪುರದ ಜ್ಞಾನಯೋಗಾಶ್ರಮ (Vijayapura Jnana Yogashrama)ದಲ್ಲಿ ಬಿಡುಗಡೆ ಮಾಡಿದರು. ತಮ್ಮ ಗುರುಗಳಾದ ಮಲ್ಲಿಕಾರ್ಜುನಶ್ರೀ ಕುರಿತಾಗಿ ಸಿದ್ದೇಶ್ವರ ಸ್ವಾಮೀಜಿ ಬರೆದಿರುವ ಪುಸ್ತಕ ಇದಾಗಿದ್ದು, ಹಾಸಿಗೆ ಮೇಲೆ ಮಲಗಿಕೊಂಡು ತಮ್ಮ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ವೇಳೆ ಸುತ್ತೂರು ಮಠದ ಶ್ರೀಗಳು, ಗದುಗಿನ ಶಿವಾನಂದ ಮಠದ ಸದಾಶಿವಾನಂದ ಸ್ವಾಮೀಜಿ‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆದರೂ ಸಹ ಕೆಲ ವದಂತಿಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಸಿದ್ದೇಶ್ವರ ನೋಡಿ ದರ್ಶನ ಪಡೆಯಲು ವಿಜಯಪುರದ ಜ್ಞಾನಯೋಗಾಶ್ರಮದತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ. ಉತ್ತರಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬಂದಿರುವ ಭಕ್ತರು ಯೋಗಾಶ್ರಮದ ಗೇಟ್ ಮುಂದೆ ಜಮಾವಣೆಯಾಗಿದ್ದು, ಶ್ರೀಗಳ ದರ್ಶನಕ್ಕಾಗಿ ಕಾಯುತ್ತಿದ್ದಾರೆ. ಇದರಿಂದ ಸಿದ್ದೇಶ್ವರ ಸ್ವಾಮೀಜಿಗಳ ದರ್ಶನಕ್ಕಾಗಿ ಎಲ್ಇಡಿ ಪರದೆ ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ: Siddeshwar Swamiji Health : ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಹೇಗಿದೆ? ಮಾಹಿತಿ ನೀಡಿದ ಡಿಸಿ, ಎಸ್ಪಿ, ವೈದ್ಯ, ಊಹಾಪೋಹಗಳಿಗೆ ತೆರೆ

ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಶ್ರಮಕ್ಕೆ ಜಿಲ್ಲಾಧಿಕಾರಿ ಡಾ. ಮಹಾಂತೇಶ ದಾನಮ್ಮನವರ, ಎಸ್ಪಿ ಹೆಚ್ ಡಿ ಆನಂದಕುಮಾರ, ವೈದ್ಯ ಡಾ. ಮಲ್ಲಣ್ಣ ಮೂಲಿಮನಿ ಮತ್ತು ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಭೇಟಿ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Sun, 1 January 23

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು