ವಿಜಯಪುರ: ತಮ್ಮ ‘ಜ್ಞಾನಯೋಗ ಸಂಪುಟ’ ಪುಸ್ತಕವನ್ನು ಸಿದ್ದೇಶ್ವರ ಸ್ವಾಮೀಜಿ (Siddeshwara Swamiji)ಯವರು ವಿಜಯಪುರದ ಜ್ಞಾನಯೋಗಾಶ್ರಮ (Vijayapura Jnana Yogashrama)ದಲ್ಲಿ ಬಿಡುಗಡೆ ಮಾಡಿದರು. ತಮ್ಮ ಗುರುಗಳಾದ ಮಲ್ಲಿಕಾರ್ಜುನಶ್ರೀ ಕುರಿತಾಗಿ ಸಿದ್ದೇಶ್ವರ ಸ್ವಾಮೀಜಿ ಬರೆದಿರುವ ಪುಸ್ತಕ ಇದಾಗಿದ್ದು, ಹಾಸಿಗೆ ಮೇಲೆ ಮಲಗಿಕೊಂಡು ತಮ್ಮ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ವೇಳೆ ಸುತ್ತೂರು ಮಠದ ಶ್ರೀಗಳು, ಗದುಗಿನ ಶಿವಾನಂದ ಮಠದ ಸದಾಶಿವಾನಂದ ಸ್ವಾಮೀಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆದರೂ ಸಹ ಕೆಲ ವದಂತಿಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಸಿದ್ದೇಶ್ವರ ನೋಡಿ ದರ್ಶನ ಪಡೆಯಲು ವಿಜಯಪುರದ ಜ್ಞಾನಯೋಗಾಶ್ರಮದತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ. ಉತ್ತರಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬಂದಿರುವ ಭಕ್ತರು ಯೋಗಾಶ್ರಮದ ಗೇಟ್ ಮುಂದೆ ಜಮಾವಣೆಯಾಗಿದ್ದು, ಶ್ರೀಗಳ ದರ್ಶನಕ್ಕಾಗಿ ಕಾಯುತ್ತಿದ್ದಾರೆ. ಇದರಿಂದ ಸಿದ್ದೇಶ್ವರ ಸ್ವಾಮೀಜಿಗಳ ದರ್ಶನಕ್ಕಾಗಿ ಎಲ್ಇಡಿ ಪರದೆ ಅಳವಡಿಕೆ ಮಾಡಲಾಗಿದೆ.
ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಶ್ರಮಕ್ಕೆ ಜಿಲ್ಲಾಧಿಕಾರಿ ಡಾ. ಮಹಾಂತೇಶ ದಾನಮ್ಮನವರ, ಎಸ್ಪಿ ಹೆಚ್ ಡಿ ಆನಂದಕುಮಾರ, ವೈದ್ಯ ಡಾ. ಮಲ್ಲಣ್ಣ ಮೂಲಿಮನಿ ಮತ್ತು ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಭೇಟಿ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:00 pm, Sun, 1 January 23