AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿ ಪಟ್ಟಣದಲ್ಲಿ ಭೂಕಂಪನವಾದದ್ದು ನಿಜ; ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ ದಾಖಲು

Vijayapura Earthquake: ಮಸೂತಿ‌ಯಲ್ಲಿ ಭೂಕಂಪನದ ಕೇಂದ್ರ ಬಿಂದುವಿದ್ದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಈಕುರಿತು ಅಧಿಕೃತ ಮಾಹಿತಿ ನೀಡಿದೆ. ಆದರೆ ಅದೃಷ್ಟವಶಾತ್ ಭೂಕಂಪನದಿಂದ ಯಾವುದೇ ಹಾನಿ ಆಗಿಲ್ಲ ಎಂದು ಸಹ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಸಿಂದಗಿ ಪಟ್ಟಣದಲ್ಲಿ ಭೂಕಂಪನವಾದದ್ದು ನಿಜ; ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ  ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 01, 2021 | 9:50 PM

Share

ವಿಜಯಪುರ: ಸಿಂದಗಿ ಪಟ್ಟಣದಲ್ಲಿ ತಡರಾತ್ರಿಯ ಭೂಕಂಪನದ ಅನುಭವವನ್ನು ಭೂಕಂಪನದವೆಂದು ವಿಜಯಪುರ ಜಿಲ್ಲಾಡಳಿತ ದೃಢಪಡಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.5ರಷ್ಟು ದಾಖಲಾಗಿದೆ. ಮಸೂತಿ‌ಯಲ್ಲಿ ಭೂಕಂಪನದ ಕೇಂದ್ರ ಬಿಂದುವಿದ್ದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಈಕುರಿತು ಅಧಿಕೃತ ಮಾಹಿತಿ ನೀಡಿದೆ. ಆದರೆ ಅದೃಷ್ಟವಶಾತ್ ಭೂಕಂಪನದಿಂದ ಯಾವುದೇ ಹಾನಿ ಆಗಿಲ್ಲ ಎಂದು ಸಹ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗುತ್ತಿದ್ದಂತೆ 3 -4 ಬಾರಿ ನೆಲದಿಂದ ಭಾರೀ ಪ್ರಮಾಣದ ಶಬ್ದ ಕೇಳಿ ಬಂದಿದೆ. ಮಧ್ಯರಾತ್ರಿ ಹಾಗೂ ನಸುಕಿನ ಜಾವ 4.30 ಸುಮಾರಿನಲ್ಲಿ ಘಟನೆ ನಡೆದಿದೆ. ಭೂಮಿ ನಡುಗಿದ ಅನುಭವದಿಂದ ಭಯಗೊಂಡ ಜನತೆ, ಹೊರಬಂದಿದ್ದಾರೆ.

ಕಳೆದ ಸೆಪ್ಟೆಂಬರ್ 4 ರಂದು ಜಿಲ್ಲೆಯ‌ ವಿವಿಧ ಭಾಗಗಳಲ್ಲಿ 3.9 ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಆಗ ಮಹಾರಾಷ್ಟ್ರದ ಕೊಲ್ಲಾಪುರ ಭೂಕಂಪನದ ಕೇಂದ್ರವಾಗಿತ್ತು. ಈಗ ಸಿಂದಗಿ ಪಟ್ಟಣದಲ್ಲಿಯೂ ಭೂಕಂಪನವಾ? ಎಂದು ಜನ ಭಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಲು ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ: 

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ

Sindagi Bypoll: ಸಿಂದಗಿ ಉಪಚುನಾವಣೆ: ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!