AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ

ವಿಜಯಪುರದ ಶಿಕಾರಿಖಾನೆ ಏರಿಯಾದಲ್ಲಿ ಮಾಜಿ ಕಾರ್ಪೊರೇಟರ್​​ ಪುತ್ರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, DySP ಬಸವರಾಜ್​ ಯಲಿಗಾರ್​, ಸಿಪಿಐ ಮಲ್ಲಯ್ಯ ಮಠಪತಿ ಮತ್ತು ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ.

ವಿಜಯಪುರ: ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ
ಅಶನಾಮ್​ ಪ್ರಕಾಶ್ ಮಿರ್ಜಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 25, 2025 | 3:00 PM

Share

ವಿಜಯಪುರ, ಏಪ್ರಿಲ್ 25: ಪಿಸ್ತೂಲ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್​ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ (boy). ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್​ ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್​ ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್​​ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗುಂಡಿನ ಶಬ್ದ ಕೇಳಿ ಕುಟುಂಬಸ್ಥರು ಬೆಡ್​ ರೂಂ ಬಾಗಿಲು ತೆರೆದಿದ್ದಾರೆ. ತಕ್ಷಣ ಅಶನಂ ನನ್ನು ಬಿಎಲ್​ಇಡಿ ಆಸ್ಪತ್ರೆಗೆ ಕುಟುಂಬಸ್ಥರು ಸ್ಥಳಾಂತರ ಮಾಡಿದ್ದಾರೆ. ಆದರೆ ಅಶನಂ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಿಎಲ್​ಇಡಿ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅಶನಂ ಆತ್ಮಹತ್ಯೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, DySP ಬಸವರಾಜ್​ ಯಲಿಗಾರ್​, ಸಿಪಿಐ ಮಲ್ಲಯ್ಯ ಮಠಪತಿ, ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗಂಡನ ಮನೆಯಲ್ಲೇ ಪತ್ನಿ ನೇಣಿಗೆ ಶರಣು

ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಾಡದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಡೆತ್​ನೋಟ್ ಬರೆದಿಟ್ಟು ಗಂಡನ ಮನೆಯಲ್ಲಿ ರಶ್ಮಿ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ ಮತ್ತು ದೊಡ್ಡತ್ತೆ ರತ್ನಮ್ಮ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.

ಇದನ್ನೂ ಓದಿ
Image
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
Image
ಬೆಂಗಳೂರಿನಲ್ಲಿ ವಿಂಗ್ ಕಮಾಂಡರ್​ ರೌಡಿ ವರ್ತನೆ: ಅಸಲಿಗೆ ಆಗಿದ್ದೇನು?
Image
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
Image
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ

ಇದನ್ನೂ ಓದಿ: ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ ಸಾಕ್ಷಿ ಇಲ್ಲಿದೆ

ದಿನೇಶ್ ಗೌಡ ಜೊತೆ ಪ್ರೀತಿಸಿ ಒಂದು ವರ್ಷ ಹಿಂದೆ ರಶ್ಮಿ ಮದುವೆಯಾಗಿದ್ದರು. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ದಂಪತಿ ಕೆಲಸ ಮಾಡುತ್ತಿದ್ದಾರೆ. ಮೂರು ತಿಂಗಳ ಹಿಂದೆ ರಶ್ಮಿಗೆ ಗರ್ಭ ಪಾತವಾಗಿತ್ತು. ವರದಕ್ಷಿಣೆ ನೀಡಿಲ್ಲ, ಮಗು ಆಗಿಲ್ಲ ಅಂತ ಮಾನಸಿಕ ಹಿಂಸೆ ನೀಡುತ್ತಿದ್ದರು ಅಂತ ರಶ್ಮಿ ಡೆತ್ ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಪತಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಮಾಲೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

ತುಂಬು ಗರ್ಭಿಣಿ ಅನುಮಾನಾಸ್ಪದ ಸಾವು: ಗಂಡನ ಮನೆಯವರ ವಿರುದ್ಧ ಕೊಲೆ ಆರೋಪ

ತುಂಬು ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಬೂದಿವಾಳ ಗ್ರಾಮದಲ್ಲಿ ಏಪ್ರಿಲ್ 23 ರ ಬೆಳಗಿನ ಜಾವ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನುಪಮಾ(20)ಮೃತ ಗೃಹಿಣಿ. ವರದಕ್ಷಿಣೆ ಕಿರುಕುಳದಿಂದ ಗಂಡನ ಮನೆಯವರೇ ಕೊಲೆ ಮಾಡಿರು ಆರೋಪ ಕೇಳಿಬಂದಿದೆ. ಸದ್ಯ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ