
ವಿಜಯಪುರ, ಏಪ್ರಿಲ್ 25: ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ (boy). ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್ ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್ ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗುಂಡಿನ ಶಬ್ದ ಕೇಳಿ ಕುಟುಂಬಸ್ಥರು ಬೆಡ್ ರೂಂ ಬಾಗಿಲು ತೆರೆದಿದ್ದಾರೆ. ತಕ್ಷಣ ಅಶನಂ ನನ್ನು ಬಿಎಲ್ಇಡಿ ಆಸ್ಪತ್ರೆಗೆ ಕುಟುಂಬಸ್ಥರು ಸ್ಥಳಾಂತರ ಮಾಡಿದ್ದಾರೆ. ಆದರೆ ಅಶನಂ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಿಎಲ್ಇಡಿ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅಶನಂ ಆತ್ಮಹತ್ಯೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, DySP ಬಸವರಾಜ್ ಯಲಿಗಾರ್, ಸಿಪಿಐ ಮಲ್ಲಯ್ಯ ಮಠಪತಿ, ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಾಡದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಡೆತ್ನೋಟ್ ಬರೆದಿಟ್ಟು ಗಂಡನ ಮನೆಯಲ್ಲಿ ರಶ್ಮಿ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ ಮತ್ತು ದೊಡ್ಡತ್ತೆ ರತ್ನಮ್ಮ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ ಸಾಕ್ಷಿ ಇಲ್ಲಿದೆ
ದಿನೇಶ್ ಗೌಡ ಜೊತೆ ಪ್ರೀತಿಸಿ ಒಂದು ವರ್ಷ ಹಿಂದೆ ರಶ್ಮಿ ಮದುವೆಯಾಗಿದ್ದರು. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ದಂಪತಿ ಕೆಲಸ ಮಾಡುತ್ತಿದ್ದಾರೆ. ಮೂರು ತಿಂಗಳ ಹಿಂದೆ ರಶ್ಮಿಗೆ ಗರ್ಭ ಪಾತವಾಗಿತ್ತು. ವರದಕ್ಷಿಣೆ ನೀಡಿಲ್ಲ, ಮಗು ಆಗಿಲ್ಲ ಅಂತ ಮಾನಸಿಕ ಹಿಂಸೆ ನೀಡುತ್ತಿದ್ದರು ಅಂತ ರಶ್ಮಿ ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಪತಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಮಾಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತುಂಬು ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಬೂದಿವಾಳ ಗ್ರಾಮದಲ್ಲಿ ಏಪ್ರಿಲ್ 23 ರ ಬೆಳಗಿನ ಜಾವ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನುಪಮಾ(20)ಮೃತ ಗೃಹಿಣಿ. ವರದಕ್ಷಿಣೆ ಕಿರುಕುಳದಿಂದ ಗಂಡನ ಮನೆಯವರೇ ಕೊಲೆ ಮಾಡಿರು ಆರೋಪ ಕೇಳಿಬಂದಿದೆ. ಸದ್ಯ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.