AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ತಿಂಗಳ ಹಿಂದೆ ಸಮಾಧಿ ಮಾಡಿದ್ದ ಸ್ವಾಮೀಜಿ ದೇಹ ಕೊಳೆಯದಿರುವುದು ಪತ್ತೆ! ವಿಜಯಪುರದಲ್ಲಿ ವಿಸ್ಮಯಕಾರಿ ಘಟನೆ

ವಿಜಯಪುರದ ಮನಗೂಳಿಯಲ್ಲಿ ಎಂಟು ತಿಂಗಳ ಹಿಂದೆ ಸಮಾಧಿ ಮಾಡಿದ್ದ ಸ್ವಾಮೀಜಿಯವರ ದೇಹ ಕೊಳೆಯದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಭಕ್ತರು ತಿಳಿಸಿದ್ದಾರೆ. ಸಮಾಧಿ ತೆರೆದು ದೇಹ ಹೊರತೆಗೆದು, ಬಾಜಾ-ಭಜಂತ್ರಿಯೊಂದಿಗೆ ಮೆರವಣಿಗೆ ನಡೆಸಿ ಗದ್ದುಗೆ ಬಳಿ ಮರು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಈ ವಿಸ್ಮಯಕಾರಿ ಘಟನೆ ಈಗ ವಿಜಯಪುರದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

8 ತಿಂಗಳ ಹಿಂದೆ ಸಮಾಧಿ ಮಾಡಿದ್ದ ಸ್ವಾಮೀಜಿ ದೇಹ ಕೊಳೆಯದಿರುವುದು ಪತ್ತೆ! ವಿಜಯಪುರದಲ್ಲಿ ವಿಸ್ಮಯಕಾರಿ ಘಟನೆ
ಮಲ್ಲಯ್ಯ ಸರೂರ ಸ್ವಾಮೀಜಿImage Credit source: tv9
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Sep 03, 2026 | 11:41 AM

Share

ಮುಖ್ಯಾಂಶಗಳು

  • ಎಂಟು ತಿಂಗಳ ಬಳಿಕ ಸಮಾಧಿ ತೆರೆದ ಭಕ್ತರು
  • ದೇಹ ಕೊಳೆಯದಿರುವುದು ಕಂಡುಬಂದು ಅಚ್ಚರಿ
  • ಗದ್ದುಗೆ ಬಳಿ ಮರು ಅಂತ್ಯಕ್ರಿಯೆ ನೆರವೇರಿಕೆ

ವಿಜಯಪುರ, ಸೆಪ್ಟೆಂಬರ್ 3: ವಿಜಯಪುರ ಜಿಲ್ಲೆಯಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿದೆ. ಎಂಟು ತಿಂಗಳ ಹಿಂದೆ ಅಂತ್ಯಕ್ರಿಯೆ ನೆರವೇರಿಸಿ ಸಮಾಧಿ ಮಾಡಿದ್ದ ಸ್ವಾಮೀಜಿಯವರ ದೇಹ ಕೊಳೆಯದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಭಕ್ತರು ಹೇಳಿಕೊಂಡಿದ್ದಾರೆ. ಈ ಘಟನೆ ಇದೀಗ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮನಗೂಳಿ ಪಟ್ಟಣದ ಚೌಕಿಮಠದ ಬಳಿ ಈ ಘಟನೆ ನಡೆದಿದೆ. ಶ್ರೀ ರೇವಣಸಿದ್ದೇಶ್ವರ ಗದ್ದುಗೆ ಪೂಜಾರಿಯಾಗಿದ್ದ ಮಲ್ಲಯ್ಯ ಸರೂರ ಸ್ವಾಮೀಜಿ ಅವರು 2025ರ ಡಿಸೆಂಬರ್ 31ರಂದು ನಿಧನರಾಗಿದ್ದರು. ಬಳಿಕ 2026ರ ಜನವರಿ 1ರಂದು ಚೌಕಿಮಠದ ಬಳಿ ಅವರ ಅಂತ್ಯಕ್ರಿಯೆ ನೆರವೇರಿಸಿ, ದೇಹವನ್ನು ಸಮಾಧಿ ಮಾಡಲಾಗಿತ್ತು.

ಕನಸಲ್ಲಿ ಬಂದು ಮರು ಅಂತ್ಯಕ್ರಿಯೆಗೆ ಸೂಚಿಸಿದ್ದ ಸ್ವಾಮೀಜಿ!

ಮಲ್ಲಯ್ಯ ಸರೂರ ಸ್ವಾಮೀಜಿ ಹಲವು ವರ್ಷಗಳಿಂದ ಶ್ರೀ ರೇವಣಸಿದ್ದೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸುತ್ತಿದ್ದರು. ಸ್ವಾಮೀಜಿ ತಮ್ಮ ಭಕ್ತರ ಕನಸಿನಲ್ಲಿ ಬಂದು, ಶ್ರೀ ರೇವಣಸಿದ್ದೇಶ್ವರ ಗದ್ದುಗೆ ಬಳಿ ಅಂತ್ಯಕ್ರಿಯೆ ನೆರವೇರಿಸುವಂತೆ ಸೂಚನೆ ನೀಡಿದ್ದರು ಎಂದು ಭಕ್ತರು ಹೇಳಿಕೊಂಡಿದ್ದಾರೆ.

8 ತಿಂಗಳ ನಂತರ ಮೃತದೇಹ ಹೊರತೆಗೆ ಭಕ್ತರಿಗೆ ಅಚ್ಚರಿ

ಈ ಹಿನ್ನೆಲೆಯಲ್ಲಿ ಸುಮಾರು ಎಂಟು ತಿಂಗಳ ಬಳಿಕ ಭಕ್ತರು ಸಮಾಧಿಯನ್ನು ತೆರೆದು ಸ್ವಾಮೀಜಿಯವರ ದೇಹವನ್ನು ಹೊರತೆಗೆದಿದ್ದಾರೆ. ಈ ವೇಳೆ ದೇಹ ಕೊಳೆಯದ ಸ್ಥಿತಿಯಲ್ಲಿ ಕಂಡುಬಂದಿದ್ದು, ಯಾವುದೇ ಕೊಳೆತ ವಾಸನೆ ಇರಲಿಲ್ಲ ಎಂದು ಭಕ್ತರು ತಿಳಿಸಿದ್ದಾರೆ. ಬಳಿಕ ಬಾಜಾ-ಭಜಂತ್ರಿಯೊಂದಿಗೆ ಸ್ವಾಮೀಜಿಯವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಗಿದೆ. ಶ್ರೀ ರೇವಣಸಿದ್ದೇಶ್ವರ ಗದ್ದುಗೆ ಪಕ್ಕದಲ್ಲೇ ಸ್ವಾಮೀಜಿಯವರ ಮರು ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಸ್ವಾಮೀಜಿಯವರ ಆಸೆಯಂತೆ ಗದ್ದುಗೆ ಬಳಿ ಅಂತ್ಯಕ್ರಿಯೆ ನೆರವೇರಿಸಿದ್ದೇವೆ ಎಂದು ಭಕ್ತರು ಹೇಳಿದ್ದಾರೆ. ಎಂಟು ತಿಂಗಳ ಬಳಿಕ ಸಮಾಧಿ ತೆರೆದಾಗ ದೇಹ ಕೊಳೆಯದಿರುವುದು ಕಂಡುಬಂದಿರುವ ಘಟನೆ ಮನಗೂಳಿ ಪಟ್ಟಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ದೇಹದ ಸ್ಥಿತಿಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಅಥವಾ ವೈದ್ಯಕೀಯ ಕಾರಣವನ್ನು ಈ ಹಂತದಲ್ಲಿ ದೃಢಪಡಿಸಲಾಗಿಲ್ಲ. ಭಕ್ತರು ಮಾತ್ರ ಇದನ್ನು ವಿಸ್ಮಯಕಾರಿ ಘಟನೆ ಎಂದು ಹೇಳುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ