ವಿಜಯಪುರ: ಯುವತಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ, ತಡವಾಗಿ ಬೆಳಕಿಗೆ
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ವಿಜಯಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿರುವ (Rape) ಘಟನೆ ವಿಜಯಪುರ (Vijayapura)ದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 17ರ ತಡರಾತ್ರಿ ಈ ಘಟನೆ ನಡೆದಿದ್ದು, ಓರ್ವ ಅತ್ಯಾಚಾರವೆಸಗಿದ್ದು, ಇಬ್ಬರು ಅತ್ಯಾಚಾರವೆಸಗಲು ಸಹಕರಿಸಿದ್ದರು. ಬಳಿಕ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆ ಸಂಬಂಧ ಸಂತ್ರಸ್ತೆ ಯುವತಿ ಹೇಳಿಕೆ ಮೇರೆಗೆ ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಸ್ಥಳಿಯರಿಂದ ಪೊಲೀಸರಿಗೆ ಮಾಹಿತಿ
ಯುವತಿಯನ್ನು ಪುಸಲಾಯಿಸಿ ನಗರದ ಸ್ಯಾಟ್ಲೈಟ್ ಬಸ್ ನಿಲ್ದಾಣದ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ 3 ಯವಕರು, ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು. ಜನವರಿ 18ರ ಬೆಳಿಗ್ಗೆ ನರುಳುತ್ತಿದ್ದ ಯುವತಿಯನ್ನು ಕಂಡ ಸ್ಥಳಿಯರು, ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಸ್ಥಳೀಯರ ಮಾಹಿತಿಯ ಮೇರೆಗೆ ವಿಜಯಪುರದ ಮಹಿಳಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಯುವತಿಯ ಹೇಳಿಕೆಯ ಸಾಕ್ಷಿಯಾಗಿಟ್ಟುಕೊಂಡು ಪ್ರಕರಣ ದಾಖಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇನ್ನು ಇಂಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತೆ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಆಕೆಯನ್ನು ಪೊಲೀಸರು ಸರ್ಕಾರಿ ಸ್ವಾಮ್ಯದ ಸ್ವಾದಾರ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದು, ಈ ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
ಇನ್ನಷ್ಟು ವಿಜಯಪುರ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 7:15 pm, Thu, 19 January 23