Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಮಕ್ಕಳ ಸಾವಿನ ಪ್ರಕರಣ; ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿಗಳ ಮೇಲೆ ದಾಖಲಾಯ್ತು ಎಫ್​ಐಆರ್

ವಿಜಯಪುರ ನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ(UGD Waste Water Treatment Plant)ದ ನೀರಲ್ಲಿ ಮನೆಯಿಂದ ಕಾಣೆಯಾಗಿದ್ದ ಮೂವರು ಮಕ್ಕಳು ನಿನ್ನೆ(ಮೇ.13) ಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಮೂವರು ಮಕ್ಕಳ ಸಾವಿನ ಪ್ರಕರಣ; ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿಗಳ ಮೇಲೆ ದಾಖಲಾಯ್ತು ಎಫ್​ಐಆರ್
ವಿಜಯಪುರ ಮಹಾನಗರ ಪಾಲಿಕೆ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:May 14, 2024 | 3:17 PM

ವಿಜಯಪುರ, ಮೇ.14: ಕಳೆದ ಏಪ್ರಿಲ್ 12 ರ ಮುಂಜಾನೆ ಮನೆಯಿಂದ ಒಂಟೆ ಸವಾರಿ ನೋಡಲು ಹೋಗಿದ್ದ ಮೂವರು ಮಕ್ಕಳು, ನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ(UGD Waste Water Treatment Plant) ದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಕ್ಕಳ ಪೋಷಕರು, ಈ ಘಟನೆಗೆ  ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ್ದರು. ಈ ಹಿನ್ನಲೆ ಇದೀಗ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಆದರ್ಶ ನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಘಟನೆ ವಿವರ

ಮೇ.12 ರಂದು ಮೂವರು ಮಕ್ಕಳು ಮನೆಯಿಂದ ಕಾಣೆಯಾಗಿದ್ದವರು. ನಿನ್ನೆ(ಮೇ.13) ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವವಾಗಿ ಪತ್ತೆ ಆಗಿದ್ದರು. ಗದಗ ಮೂಲದ ಅನುಷ್ಕಾ ಅನೀಲ ದಹಿಂಡೆ (9), ವಿಜಯ ಅನಿಳ ದಹಿಂಡೆ (7) ಮತ್ತು ವಿಜಯಪುರ ಮೂಲದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತರು. ಇವರಲ್ಲಿ ಗದಗ ಮೂಲದ ಅನುಷ್ಕಾ ಹಾಗೂ ವಿಜಯ ಬೇಸಿಗೆ ರಜೆಯ ಹಿನ್ನಲೆ ವಿಜಯಪುರದಲ್ಲಿರುವ ಮಾವನ ಮನೆಗೆ ಬಂದಿದ್ದರು.

ಇದನ್ನೂ ಓದಿ:ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ನಾಪತ್ತೆ: ಶವವಾಗಿ ಪತ್ತೆ

ಅದರಂತೆ ಮೊನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿ ಮಾಡಿದ್ದಾರೆ. ನಂತರ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋಗಿದ್ದರು. ಬಹಳ ಸಮಯವಾದರೂ ಮನೆಗೆ ಮಕ್ಕಳು ಬಾರದ ಕಾರಣ ಮನೆಯವರು ಸೇರಿಕೊಂಡು ಹುಡುಕಾಡಿದ್ದಾರೆ. ಬಳಿಕ ಸಂಜೆ ಹೊತ್ತಿಗೆ ಎಪಿಎಂಸಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಆದರೆ, ನಿನ್ನೆ ಮಧ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದೀಗ ಘಟನೆಗೆ ಸಂಬಂಧಿಸಿ ಮಹಾನಗರ ಪಾಲಿಕೆ ವಿರುದ್ದ ಎಫ್​ಐಆರ್​ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Tue, 14 May 24

Daily Devotional: ಮಡಿಕೆಯಲ್ಲಿ ನೀರಿನ ಮಹತ್ವ ಹಾಗೂ ಅದರ ಹಿಂದಿನ ರಹಸ್ಯ
Daily Devotional: ಮಡಿಕೆಯಲ್ಲಿ ನೀರಿನ ಮಹತ್ವ ಹಾಗೂ ಅದರ ಹಿಂದಿನ ರಹಸ್ಯ
Daily Horoscope: ಈ ರಾಶಿಗಳಿಗೆ ಇಂದು ಅನುಕೂಲಕರವಾದ ದಿನವಾಗಿರಲಿದೆ
Daily Horoscope: ಈ ರಾಶಿಗಳಿಗೆ ಇಂದು ಅನುಕೂಲಕರವಾದ ದಿನವಾಗಿರಲಿದೆ
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್
ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ