ವಿಜಯಪುರ, ಮೇ.14: ಕಳೆದ ಏಪ್ರಿಲ್ 12 ರ ಮುಂಜಾನೆ ಮನೆಯಿಂದ ಒಂಟೆ ಸವಾರಿ ನೋಡಲು ಹೋಗಿದ್ದ ಮೂವರು ಮಕ್ಕಳು, ನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ(UGD Waste Water Treatment Plant) ದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಕ್ಕಳ ಪೋಷಕರು, ಈ ಘಟನೆಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ್ದರು. ಈ ಹಿನ್ನಲೆ ಇದೀಗ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಮೇ.12 ರಂದು ಮೂವರು ಮಕ್ಕಳು ಮನೆಯಿಂದ ಕಾಣೆಯಾಗಿದ್ದವರು. ನಿನ್ನೆ(ಮೇ.13) ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವವಾಗಿ ಪತ್ತೆ ಆಗಿದ್ದರು. ಗದಗ ಮೂಲದ ಅನುಷ್ಕಾ ಅನೀಲ ದಹಿಂಡೆ (9), ವಿಜಯ ಅನಿಳ ದಹಿಂಡೆ (7) ಮತ್ತು ವಿಜಯಪುರ ಮೂಲದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತರು. ಇವರಲ್ಲಿ ಗದಗ ಮೂಲದ ಅನುಷ್ಕಾ ಹಾಗೂ ವಿಜಯ ಬೇಸಿಗೆ ರಜೆಯ ಹಿನ್ನಲೆ ವಿಜಯಪುರದಲ್ಲಿರುವ ಮಾವನ ಮನೆಗೆ ಬಂದಿದ್ದರು.
ಇದನ್ನೂ ಓದಿ:ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ನಾಪತ್ತೆ: ಶವವಾಗಿ ಪತ್ತೆ
ಅದರಂತೆ ಮೊನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿ ಮಾಡಿದ್ದಾರೆ. ನಂತರ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋಗಿದ್ದರು. ಬಹಳ ಸಮಯವಾದರೂ ಮನೆಗೆ ಮಕ್ಕಳು ಬಾರದ ಕಾರಣ ಮನೆಯವರು ಸೇರಿಕೊಂಡು ಹುಡುಕಾಡಿದ್ದಾರೆ. ಬಳಿಕ ಸಂಜೆ ಹೊತ್ತಿಗೆ ಎಪಿಎಂಸಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಆದರೆ, ನಿನ್ನೆ ಮಧ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದೀಗ ಘಟನೆಗೆ ಸಂಬಂಧಿಸಿ ಮಹಾನಗರ ಪಾಲಿಕೆ ವಿರುದ್ದ ಎಫ್ಐಆರ್ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:16 pm, Tue, 14 May 24