AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ-ಯಶವಂತಪುರ ರೈಲು ಇಂಜಿನ್ ವೈಫಲ್ಯ: ‘ಬಸವ ಎಕ್ಸ್‌ಪ್ರೆಸ್’ ತಡೆದು, ಕಲ್ಲು ತೂರಿ ಪೋಲಿಸ್ ಅಭ್ಯರ್ಥಿಗಳ ತೀವ್ರ ಅಕ್ರೋಶ

ವಿಜಯಪುರದಿಂದ ಹೊರಟ ಯಶವಂತಪುರ ಎಕ್ಸ್‌ಪ್ರೆಸ್ ರೈಲಿನ ಇಂಜಿನ್ ವೈಫಲ್ಯದಿಂದ ಪೋಲಿಸ್ ಪರೀಕ್ಷಾರ್ಥಿಗಳು ಆಕ್ರೋಶಗೊಂಡರು. ಪರೀಕ್ಷೆಗೆ ತಲುಪಲು ಸಾಧ್ಯವಾಗುವುದಿಲ್ಲ ಎಂಬ ಭೀತಿಯಿಂದ ಬಸವ ಎಕ್ಸ್‌ಪ್ರೆಸ್ ತಡೆದು ಕಲ್ಲು ತೂರಾಟ ನಡೆಸಿದರು. ರೈಲ್ವೇ ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಂಡಿತು. ಪರ್ಯಾಯ ಇಂಜಿನ್ ಅಳವಡಿಸಿ ರೈಲು ಪ್ರಯಾಣ ಮುಂದುವರಿಸಿತು. ರೈಲ್ವೇ ಇಲಾಖೆಯ ನಿರ್ಲಕ್ಷ್ಯಕ್ಕೆ ಪರೀಕ್ಷಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ವಿಜಯಪುರ-ಯಶವಂತಪುರ ರೈಲು ಇಂಜಿನ್ ವೈಫಲ್ಯ: 'ಬಸವ ಎಕ್ಸ್‌ಪ್ರೆಸ್' ತಡೆದು, ಕಲ್ಲು ತೂರಿ ಪೋಲಿಸ್ ಅಭ್ಯರ್ಥಿಗಳ ತೀವ್ರ ಅಕ್ರೋಶ
ರೈಲು ಇಂಜಿನ್ ತಾಂತ್ರಿಕ ದೋಷ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Sep 05, 2026 | 7:13 PM

Share

ವಿಜಯಪುರ ಸೆ.5: ವಿಜಯಪುರ ರೈಲ್ವೇ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಯಶವಂತಪುರ ಎಕ್ಸ್‌ಪ್ರೆಸ್ ರೈಲಿನ ಇಂಜಿನ್ ದಿಢೀರ್ ವೈಫಲ್ಯ ಕಂಡ ಹಿನ್ನೆಲೆಯಲ್ಲಿ ನೂರಾರು ಪೋಲಿಸ್ ಉದ್ಯೋಗಾಕಾಂಕ್ಷಿಗಳು ಹಾಗೂ ಪ್ರಯಾಣಿಕರು ತೀವ್ರ ಅಕ್ರೋಶ ವ್ಯಕ್ತಪಡಿಸಿದ ಘಟನೆ ನಗರ ಹೊರವಲಯದಲ್ಲಿ ನಡೆದಿದೆ. ಸಕಾಲಕ್ಕೆ ಪರೀಕ್ಷಾ ಕೇಂದ್ರ ತಲುಪಲು ಸಾಧ್ಯವಾಗುವುದಿಲ್ಲ ಎಂಬ ಭೀತಿಯಿಂದ ಪರೀಕ್ಷಾರ್ಥಿಗಳು ಪಕ್ಕದ ಹಳಿಯಲ್ಲಿ ಬಂದ ಮತ್ತೊಂದು ರೈಲನ್ನು ತಡೆದು ಕಲ್ಲು ತೂರಾಟ ನಡೆಸಿದ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.

ವಿಜಯಪುರದಿಂದ ಮಧ್ಯಾಹ್ನ 2:50ಕ್ಕೆ ಹೊರಟಿದ್ದ ವಿಜಯಪುರ – ಯಶವಂತಪುರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16548) ರೈಲು ಕೇವಲ 4 ಕಿಲೋಮೀಟರ್ ಸಂಚರಿಸುತ್ತಿದ್ದಂತೆಯೇ ಇಂಜಿನ್ ತಾಂತ್ರಿಕ ದೋಷದಿಂದ ಬಂದ್ ಆಗಿದೆ. ಈ ರೈಲಿನಲ್ಲಿ ಭಾನುವಾರ ಬೆಳಿಗ್ಗೆ10 ಗಂಟೆಗೆ ನಡೆಯಲಿರುವ ಸಿಟಿ ಆರ್ಮ್ಡ್ ಹಾಗೂ ಡಿಸ್ಟ್ರಿಕ್ಟ್ ಆರ್ಮ್ಡ್ ಮೀಸಲು ಪೊಲೀಸ್ ಪಡೆ ಹುದ್ದೆಗಳ ಪರೀಕ್ಷೆಗೆ ಹಾಜರಾಗಲು ಬೆಂಗಳೂರು ಹಾಗೂ ತುಮಕೂರು ಭಾಗಗಳಿಗೆ ತೆರಳುತ್ತಿದ್ದ ಸುಮಾರು 500 ರಿಂದ 1000 ಅಭ್ಯರ್ಥಿಗಳು ಪ್ರಯಾಣಿಸುತ್ತಿದ್ದರು.

ಈ ರೈಲು ನಾಳೆ ಬೆಳಿಗ್ಗೆ 5 ಗಂಟೆಗೆ ಯಶವಂತಪುರ ತಲುಪಬೇಕಿತ್ತು. ಅಭ್ಯರ್ಥಿಗಳು ಬೆಳಿಗ್ಗೆ 9:30ರ ವೇಳೆಗೆ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಇರಬೇಕಾಗಿದ್ದರಿಂದ, ಸುಮಾರು 5 ಗಂಟೆಗಳ ಕಾಲ ರೈಲು ಒಂದೇ ಕಡೆ ನಿಂತಿದ್ದರಿಂದ ಉದ್ವಿಗ್ನಗೊಂಡರು.

ಬಸವ ಎಕ್ಸ್‌ಪ್ರೆಸ್ ತಡೆದು ಕಲ್ಲು ತೂರಾಟ:

ರೈಲಿನಿಂದ ಕೆಳಗಿಳಿದ ಅಭ್ಯರ್ಥಿಗಳು ರೈಲ್ವೇ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಪಕ್ಕದ ಹಳಿಯ ಮೇಲೆ ಬಂದ ಬಾಗಲಕೋಟೆ-ಸೋಲಾಪುರ-ಮೈಸೂರು ಮಾರ್ಗದ ‘ಬಸವ ಎಕ್ಸ್‌ಪ್ರೆಸ್’ ರೈಲನ್ನು ತಡೆದು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಕೆಲ ಯುವಕರು ಆಕ್ರೋಶದಿಂದ ರೈಲಿನ ಮೇಲೆ ಕಲ್ಲು ತೂರಿದ್ದು, ಚಲಿಸುತ್ತಿದ್ದ ರೈಲಿಗೆ ತಡೆಯೊಡ್ಡಲು ಯತ್ನಿಸಿದರು. ಸ್ಥಳಕ್ಕೆ ಧಾವಿಸಿದ ರೈಲ್ವೇ ಪೊಲೀಸರು (RPF) ಆಕ್ರೋಶಗೊಂಡ ಯುವಕರನ್ನು ಸಮಾಧಾನಪಡಿಸಿ ವಾತಾವರಣವನ್ನು ತಿಳಿಗೊಳಿಸಿದರು.

ಇದನ್ನೂ ಓದಿ: ಸವದತ್ತಿಯಲ್ಲಿ ಪತ್ತೆಯಾಯ್ತು ಪ್ರಾಚೀನ ಚಿನ್ನದ ನಾಣ್ಯಗಳ ನಿಧಿ

ಮತ್ತೊಂದು ಇಂಜಿನ್ ಜೋಡಣೆ, ಪ್ರಯಾಣ ಆರಂಭ:

ಬಳಿಕ ರೈಲ್ವೇ ಅಧಿಕಾರಿಗಳು ತಕ್ಷಣವೇ ಮತ್ತೊಂದು ಪರ್ಯಾಯ ಇಂಜಿನ್ ತಂದು ವಿಜಯಪುರ-ಯಶವಂತಪುರ ರೈಲಿಗೆ ಜೋಡಿಸಿದರು. ರೈಲು ಪುನಃ ಚಲಿಸಲು ಪ್ರಾರಂಭಿಸುತ್ತಿದ್ದಂತೆ ಪರೀಕ್ಷಾರ್ಥಿಗಳು ಸಮಾಧಾನಗೊಂಡು ಪಯಣ ಮುಂದುವರಿಸಿದರು. “ಒಂದು ವೇಳೆ ನಾಳೆ ಪರೀಕ್ಷೆಗೆ ವಿಳಂಬವಾಗಿ ನಮಗೆ ಪರೀಕ್ಷೆ ಬರೆಯಲು ಅವಕಾಶ ಸಿಗದಿದ್ದರೆ ಅದಕ್ಕೆ ಸಂಪೂರ್ಣವಾಗಿ ರೈಲ್ವೇ ಇಲಾಖೆಯ ನಿರ್ಲಕ್ಷ್ಯವೇ ಕಾರಣ,” ಎಂದು ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ರೈಲು ವಿಳಂಬವಾದರೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲು ಸಾಧ್ಯವಾಗುವುದಿಲ್ಲ. ಜೀವನದ ಪ್ರಮುಖ ಪರೀಕ್ಷೆ ಕೈ ತಪ್ಪುವ ಭೀತಿ ಎದುರಾಗಿದೆ. ಆದ್ದರಿಂದ ಕೂಡಲೇ ರೈಲು ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಪರೀಕ್ಷಾರ್ಥಿಗಳು ಆಗ್ರಹಿಸಿದರು.

ಅರ್ಧ ಗಂಟೆಯಲ್ಲಿ ರೈಲು ಆಗಮನ: ರೈಲ್ವೇ ಅಧಿಕಾರಿಗಳ ಸ್ಪಷ್ಟನೆ:

ಘಟನೆ ಕುರಿತು ಪ್ರತಿಕ್ರಿಯಿಸಿರುವ ರೈಲ್ವೇ ಅಧಿಕಾರಿಗಳು, “ವಿಜಯಪುರ ಬಳಿ ಇಂಜಿನ್ ತಾಂತ್ರಿಕ ತೊಂದರೆಗೊಳಗಾಗಿದ್ದರಿಂದ ರೈಲು ವಿಳಂಬವಾಗಿದೆ. ಇದೀಗ ಪರ್ಯಾಯ ಇಂಜಿನ್ ಅಳವಡಿಸಿ ರೈಲನ್ನು ರವಾನಿಸಲಾಗಿದ್ದು, ಇನ್ನು ಅರ್ಧ ಗಂಟೆಯಲ್ಲಿ ಬಾಗಲಕೋಟೆ ನಿಲ್ದಾಣಕ್ಕೆ ರೈಲು ಆಗಮಿಸಲಿದೆ,” ಎಂದು ಮಾಹಿತಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Sat, 5 September 26

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ