AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ? ಪತಿಗೆ ಚಾಕುವಿನಿಂದ ಇರಿದ ಪತ್ನಿ

ಪತ್ನಿಯಿಂದಲೇ ಪತಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ಇಂದು ನಸುಕಿನ ಜಾವ 3 ಘಂಟೆಗೆ ವಿಜಯಪುರದ ಆಲಕುಂಟೆ ನಗರದಲ್ಲಿ ನಡೆದಿದೆ. ಮೊಬೈಲ್​ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಪತ್ನಿಗೆ ಬುದ್ದಿವಾದ ಹೇಳಿದ್ದಕ್ಕೆ ಪತಿ ಕೊಲೆಗೆ ಯತ್ನಿಸಲಾಗಿದೆ ಎಂದು ಶಂಕಿಸಲಾಗಿದೆ.

ವಿಜಯಪುರ: ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ? ಪತಿಗೆ ಚಾಕುವಿನಿಂದ ಇರಿದ ಪತ್ನಿ
ಪತ್ನಿ ತೇಜು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Apr 27, 2025 | 1:05 PM

Share

ವಿಜಯಪುರ, ಏಪ್ರಿಲ್​ 27: ನಿವೃತ್ತ ಡಿಜಿಪಿ ಓಂಪ್ರಕಾಶ ಅವರನ್ನು ಅವರ ಪತ್ನಿಯೇ (wife) ಚಾಕುವಿನಿಂದ ಇರಿದು ಕೊಲೆ ಮಾಡಿರುವ ಸುದ್ದಿ ಇನ್ನೂ ತಣ್ಣಗಾಗಿಲ್ಲ. ಈ ಮಧ್ಯೆ ಅದೇ ಮಾದರಿಯಲ್ಲಿ ವಿಜಯಪುರ ನಗರದಲ್ಲಿ ಪತ್ನಿಯೇ ಪತಿ (husband) ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಇಂದು ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್​ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ.

ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ ಬಿಎಲ್​​ಡಿಇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅಜೀತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?

ಇನ್ನು ಘಟನೆಗೆ ಕಾರಣ ಪತ್ನಿ ತೇಜುಗೆ ಬುದ್ದಿಮಾತು ಹೇಳಿದ್ದೇ ಅಜೀತ್ ಪ್ರಾಣಕ್ಕೆ ಸಂಚಕಾರ ತಂದಿದೆ ಎನ್ನಲಾಗಿದೆ. ಸದಾಕಾಲ ಮೊಬೈಲ್​ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದ ತೇಜುಗೆ ಚಾಟ್ ಮಾಡಬೇಡ ಎಂದು ಬುದ್ದಿ ಮಾತು ಹೇಳಿದ್ದಕ್ಕೆ ಪತಿ ಅಜೀತ್ ಮೇಲೆ ಸಿಟ್ಟಾಗಿ ಇಂತ ದುಸ್ಸಾಹಸ ಮಾಡಿದ್ದಾಳೆ.

ಇದನ್ನೂ ಓದಿ
Image
ಕಬಡ್ಡಿ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ: ಓರ್ವ ಸಾವು, 13 ಜನರಿಗೆ ಗಾಯ
Image
ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು, ಮದ್ವೆ ಮನೆಯಲ್ಲಿ ಸೂತಕ
Image
ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೆ?
Image
ಪಹಲ್ಗಾಮ್​ ದಾಳಿ: ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ

ಇತರರೊಂದಿಗೆ ಮೊಬೈಲ್​ನಲ್ಲಿ ಚಾಟ್ ಮಾಡುತ್ತಾ ಕಾಲ ಕಳೆಯುತ್ತಿದ್ದ ಪತ್ನಿಯ ನಡೆ ಅಜೀತ್ ರಾಠೋಡ್​ಗೆ ಸರಿ ಬರುತ್ತಿರಲಿಲ್ಲಾ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಅಜೀತ್ ಕೊಲೆಗೆ ತೇಜು ಯತ್ನಿಸಿದ್ದಾಳೆ. ಸದ್ಯ ಸ್ಥಳಕ್ಕೆ ಡಿವೈಎಸ್​ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ನನ್ನ ಗಂಡ ಒಳ್ಳೆಯವನೆ ಆದ್ರೆ….: ಡೆತ್ ನೊಟ್​ ಬರೆದಿಟ್ಟು ನವವಿವಾಹಿತೆ ಆತ್ಮಹತ್ಯೆ

ಇನ್ನು ಆದರ್ಶನಗರ ಪೊಲೀಸರು ತೇಜುಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಆಸ್ತಿ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಆಸ್ತಿ ವಿಚಾರಕ್ಕೆ ನಡೆದ ಇಬ್ಬರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಪರಶುರಾಮ ಗಾಣಗೇರ (50) ಕೊಲೆಯಾದ ವ್ಯಕ್ತಿ.

ಇದನ್ನೂ ಓದಿ: ಚಿತ್ರದುರ್ಗ: ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ನೇಣಿಗೆ ಶರಣು

ನಿನ್ನೆ ತಡರಾತ್ರಿ ಪರಶುರಾಮ ಗಾಣಗೇರ ಹಾಗೂ ದ್ಯಾಮಣ್ಣ ಬಡಿಗೇರ ನಡುವೆ ಆಸ್ತಿ ವಿಚಾರವಾಗಿ ಗಲಾಟೆ ನಡೆದಿದೆ. ಈ ವೇಳೆ ಚಾಕುವಿನಿಂದ ಚುಚ್ಚಿ, ತಲೆ ಮೇಲೆ‌ ಕಲ್ಲು ಹಾಕಿ ಕೊಲೆ ಮಾಡಲಾಗಿದೆ. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:03 pm, Sun, 27 April 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್