ತನ್ನ ಜೊತೆ ಮಾತನಾಡದಿದ್ದಕ್ಕೆ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯನ್ನ ಇರಿದು ಕೊಂದ ಯುವಕ

ಇಂಡಿ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿ ರೇಣುಕಾ ಕನ್ನೊಳ್ಳಿ ಅವರನ್ನು ಅಗರಖೇಡದ ಸಂಜು ಬನಸೋಡೆ ಎಂಬ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ರೇಣುಕಾ ತನ್ನ ಜೊತೆ ಮಾತನಾಡಲು ನಿರಾಕರಿಸಿದ್ದಕ್ಕೆ ಸಂಜು ಈ ಕೃತ್ಯ ಎಸಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ತನ್ನ ಜೊತೆ ಮಾತನಾಡದಿದ್ದಕ್ಕೆ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯನ್ನ ಇರಿದು ಕೊಂದ ಯುವಕ
ಆರೋಪಿ ಸಂಜು, ಮೃತ ರೇಣುಕಾ
Edited By: ವಿವೇಕ ಬಿರಾದಾರ

Updated on: Jun 11, 2025 | 4:44 PM

ವಿಜಯಪುರ, ಜೂನ್​ 11: ಸಮಾಜ ಕಲ್ಯಾಣ ಇಲಾಖೆಯಲ್ಲಿ (Social Welfare Department) ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ತನ್ನೊಂದಿಗೆ ಮಾತನಾಡಲು ನಿರಾಕರಣೆ ಮಾಡುತ್ತಿದ್ದಾಳೆಂದು ಸಿಟ್ಟಾದ ಯುವಕ ಆಕೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಇಂಡಿ (Indi) ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಘಟನೆ ನಡೆದಿದೆ. ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದ ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಕೊಲೆಯಾದ ಮಹಿಳೆ. ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸಂಜು ಬನಸೋಡೆ ಕೊಲೆ ಮಾಡಿದ ಆರೋಪಿ.

ರೇಣುಕಾ ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ರೇಣುಕಾ ಬುಧವಾರ (ಜೂ.11) ಕೊಟ್ನಾಳ ಗ್ರಾಮದಿಂದ ಬಸ್ ಮೂಲಕ ಬಂದಿಳಿದ್ದರು. ಈ ವೇಳೆ ಬೈಕ್​ನಲ್ಲಿ ಆಗಮಿಸಿದ ಸಂಜು ಬನಸೋಡೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರೇಣುಕಾ ಅವರನ್ನು ಇಂಡಿ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರೇಣುಕಾ ಕನ್ನೊಳ್ಳಿ ಮೃತಪಟ್ಟಿದ್ದಾರೆ.

ರೇಣುಕಾ ಸಾವಿನಿಂದ ಅವರ ತಾಯಿ ಸಹೋದರರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಕುರಿತು ಮಾಹಿತಿ ನೀಡಿದ ಕೊಲೆಯಾಗಿರುವ ರೇಣುಕಾ ತಾಯಿ ಹಾಗೂ ಸಹೋದರ, “ರೇಣುಕಾರ ಪತಿ ಸಾಯಬಣ್ಣ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರಂತೆ. ಸಾಯಬಣ್ಣ ಸೇವೆಯಲ್ಲಿರುವಾಗಲೇ ಮೃತಪಟ್ಟ ಕಾರಣ ರೇಣುಕಾ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ಸಿಕ್ಕಿದೆ. ತವರೂರು ಕೊಟ್ನಾಳದಿಂದ ನಿತ್ಯ ಇಂಡಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಬಂದು ಹೋಗುತ್ತಿದ್ದರಂತೆ. ಈ ವೇಳೆ ಇಂಡಿ ತಾಲೂಕಿನ ಅಗರಖೇಡ್ ಗ್ರಾಮದ ಸಂಜು ಬನಸೋಡೆ ಎಂಬ ಯುವಕ ರೇಣುಕಾಗೆ ತನ್ನ ಜೊತೆಗೆ ಮಾತನಾಡು ಎಂದು ಬೆನ್ನು ಬಿದ್ದಿದ್ದನಂತೆ. ಆತನ ಜೊತೆಗೆ ಮಾತನಾಡಲು ನಿರಾಕರಣೆ ಮಾಡಿದ ಪರಿಣಾಮ ಸಂಜು ಬನಸೋಡೆ ಇಂದು ರೇಣುಕಾರಿಗೆ ಹರಿತವಾದ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ” ಎಂದು ಹೇಳಿದರು.

ಇದನ್ನೂ ಓದಿ
ವಿಜಯಪುರ ಕೆನರಾ ಬ್ಯಾಂಕ್​ನಲ್ಲಿದ್ದ 58 ಕೆಜಿ ಚಿನ್ನ ಕಳ್ಳತನ!
ವಿಜಯಪುರ: ವಾಮಾಚಾರ ಮಾಡಿ ರಾಷ್ಟ್ರೀಕೃತ ಕೆನರಾ ಬ್ಯಾಂಕ್​ ಕಳ್ಳತನ
ವೇಷ ಬದಲಿಸಿಕೊಂಡು ಬಂದು ಅತ್ತೆಯ ಕಣ್ಣಿಗೆ ಖಾರದಪುಡಿ ಎರಚಿ ಒಡವೆ ದೋಚಿದ ಅಳಿಯ
ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ? ಪತಿಗೆ ಚಾಕುವಿನಿಂದ ಇರಿದ ಪತ್ನಿ

ಇದನ್ನೂ ಓದಿ: ಬಗೆಹರಿಯದ ಕೃಷ್ಣಾ ನದಿ ನೀರು ವಿವಾದ: ಕುಂಟು ನೆಪ ಹೇಳುತ್ತಾ ಓಡಾಡಬೇಡಿ ಎಂದ ರೈತರು

ಇಂಡಿ ಪಟ್ಟಣ ಠಾಣೆಯ ಪೊಲೀಸರು ಆರೋಪಿ ಸಂಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ತನಿಖೆ ಮುಂದವರೆದಿದೆ. ಇಂಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us