AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫಿಕ್​ನಲ್ಲಿ ಕಿಡ್ನಿ ರವಾನೆ

ವಿಜಯಪುರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಬೈಕ್ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಕುಟುಂಬಸ್ಥರು ತೋರಿದ ಮಾನವೀಯತೆಯಿಂದ ಒಂದು ಕಿಡ್ನಿ ಕಲಬುರಗಿಗೆ, ಇನ್ನೊಂದು ವಿಜಯಪುರ ಆಸ್ಪತ್ರೆಯ ರೋಗಿಗೆ ಅಳವಡಿಸಲಾಗಿದೆ. ಈ ಮಹತ್ವದ ನಿರ್ಧಾರದಿಂದ ಹಲವು ಜೀವಗಳಿಗೆ ಹೊಸ ಭರವಸೆ ಲಭಿಸಿದೆ.

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫಿಕ್​ನಲ್ಲಿ ಕಿಡ್ನಿ ರವಾನೆ
ಅಂಗಾಂಗ ದಾನ ಮಾಡಿದ ಬಲರಾಮ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Feb 13, 2026 | 3:03 PM

Share

ವಿಜಯಪುರ, ಫೆಬ್ರವರಿ 13: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ (Organ Donation) ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ.

ಬೈಕ್ ಅಪಘಾತದಲ್ಲಿ ಗಂಭೀರಗೊಂಡಿದ್ದ ವ್ಯಕ್ತಿ

ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಬಲರಾಮ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದರೂ, ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದರು.

ಇದನ್ನೂ ಓದಿ ಪೋಷಕರು ಕಾಲಿಗೆ ಬಿದ್ದು ಗೋಗರೆದರೂ ಕರಗದ ಮಗಳು! ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ

ಈ ಸಂದರ್ಭದಲ್ಲಿ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದರು. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ತಡರಾತ್ರಿ ವೈದ್ಯರು ಅಂಗಾಂಗಗಳನ್ನು ಪಡೆದುಕೊಂಡಿದ್ದು, ಒಂದು ಕಿಡ್ನಿಯನ್ನು ಝಿರೋ ಟ್ರಾಫಿಕ್​​ನಲ್ಲಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮತ್ತೊಂದು ಕಿಡ್ನಿಯನ್ನು ಬಿಎಲ್ಡಿಇ ಆಸ್ಪತ್ರೆಯಲ್ಲಿರುವ ರೋಗಿಗೆ ಅಳವಡಿಸಲಾಗಿದೆ. ಇತರೆ ಅಂಗಾಂಗಗಳು ಹೊಂದಿಕೆಯಾಗದ ಕಾರಣ ಪಡೆದುಕೊಳ್ಳಲಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:11 pm, Fri, 13 February 26

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ