ವಿಜಯಪುರ: ಗೋದಾಮಿನಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ 100 ಸಿಬ್ಬಂದಿಯಿಂದ ಕಾರ್ಯಾಚರಣೆ

| Updated By: ಗಣಪತಿ ಶರ್ಮ

Updated on: Dec 04, 2023 | 10:28 PM

ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಗೋವಿನ ಜೋಳ ಸಂಗ್ರಹ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. 10 ರಿಂದ 12 ಜನ ಕಾರ್ಮಿಕರು ಅದರೊಳಗೆ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ. ಒಳಗೆ ಸಿಲುಕೊಂಡಿದ್ದ ಓರ್ವನ ರಕ್ಷಣೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಭೂಬಾಲನ್‌ ಮಾಹಿತಿ ನೀಡಿದ್ದಾರೆ.

ವಿಜಯಪುರ: ಗೋದಾಮಿನಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ 100 ಸಿಬ್ಬಂದಿಯಿಂದ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ ಸ್ಥಳದಲ್ಲಿ ಸನ್ನದ್ಧ ಸ್ಥಿತಿಯಲ್ಲಿರಿಸಿರುವ ಆಂಬುಲೆನ್ಸ್​ಗಳು
Follow us on

ವಿಜಯಪುರ, ಡಿಸೆಂಬರ್ 4: ಇಲ್ಲಿನ ರಾಜಗುರು ಪುಡ್ಸ್ (Rajaguru Foods) ಗೋದಾಮಿನಲ್ಲಿ ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿದು ಮೂಟೆಗಳ ಅಡಿ ಸಿಲುಕಿರುವ 10ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅಗ್ನಿಶಾಮಕ, ಪೊಲೀಸ್, ಹೋಮ್‌ಗಾರ್ಡ್ ಸೇರಿ ಸುಮಾರು 100 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ನಾಲ್ಕು ಕ್ರೇನ್, ನಾಲ್ಕು ಜೆಸಿಬಿಗಳನ್ನೂ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿದೆ. ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿ ಭೂಬಾಲನ್‌ ಮಾಹಿತಿ ನೀಡಿದ್ದಾರೆ.

ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಗೋವಿನ ಜೋಳ ಸಂಗ್ರಹ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. 10 ರಿಂದ 12 ಜನ ಕಾರ್ಮಿಕರು ಅದರೊಳಗೆ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ. ಒಳಗೆ ಸಿಲುಕೊಂಡಿದ್ದ ಓರ್ವನ ರಕ್ಷಣೆ ಮಾಡಿದ್ದೇವೆ. ಇನ್ನೂ ಮೂರು ಜನ ಹೊರಗಡೆ ಇದ್ದು, ಗಾಯಗಳಾಗಿವೆ. ಅವರಿಗೆ ತೊಂದರೆಯಾಗದಂತೆ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಒಳಗೆ ಸಿಲುಕಿದವರಿಗೆ ಆಕ್ಸಿಜನ್ ಪುರೈಸುವ ಕೆಲಸ ಮಾಡುತ್ತಿದ್ದೇವೆ. ಇನ್ನು ಅರ್ಧ ಗಂಟೆಯಲ್ಲಿ ಆಕ್ಸಿಜನ್ ಪೂರೈಸಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆಗೆ (SDRF) ಬುಲಾವ್ ನೀಡಿದ್ದೇವೆ. ಕಲಬುರ್ಗಿ ಹಾಗೂ ಬೆಳಗಾವಿಯಿಂದ SDRF ತಂಡ ಬರಲಿದೆ. ಅವಶ್ಯ ಎನಿಸಿದಲ್ಲಿ ಎನ್‌ಡಿ‌ಆರ್‌ಎಫ್ ಕರೆಯಿಸಿಕೊಳ್ಳಲಾಗುತ್ತದೆ. ಹೈದರಾಬಾದ್, ಪುಣೆಯಿಂದ NDRF ತಂಡ ಬರಬೇಕಿದೆ. ನೋಡಿಕೊಂಡು ಮಾಹಿತಿ ಕೊಡುತ್ತೇವೆ ಎಂದು ಅವರು ಹೇಳಿದ್ದಾರೆ.

ನಡೆದಿದ್ದೇನು?

ವಿಜಯಪುರ ನಗರದ ಹೊರವಲಯದ ಅಲಿಯಾಬಾದ್ ಬಳಿಯ ಕೈಕಾರಿಕಾ ಪ್ರದೇಶದಲ್ಲಿರುವ ರಾಜಗುರು ಪುಡ್ಸ್ ಗೋದಾಮಿನಲ್ಲಿ ಸೋಮವಾರ ರಾತ್ರಿ ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿದು ಬಿದ್ದಿದೆ. ಪರಿಣಾಮವಾಗಿ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರು ಮೆಕ್ಕೆಜೋಳದ ಮೂಟೆಗಳ ಅಡಿಯಲ್ಲಿ ಸಿಲುಕಿದ್ದಾರೆ. ಮೆಕ್ಕೆಜೋಳದ ಮೂಟೆಗಳ ಅಡಿಯಲ್ಲಿ ಸಿಲುಕಿದವರೆಲ್ಲ ಬಿಹಾರ ಮೂಲದ ಕಾರ್ಮಿಕರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಇದೇ ಇಂಡಸ್ಟ್ರೀಜ್​ನಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: ವಿಜಯಪುರ: ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿತ: 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ

ಈ ಮಧ್ಯೆ, ಮೂವರನ್ನು ರಕ್ಷಣೆ ಮಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ