AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಭೀಮಾನದಿ ಪಟ್ಟದಲ್ಲಿ ನಿಷೇದಾಜ್ಞೆ ಜಾರಿ: ವಿದ್ಯುತ್ ಸಂಪರ್ಕ ಕಟ್, ರೈತರು ಆಕ್ರೋಶ

ಭೀಮಾನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ಜಿಲ್ಲೆಯ ಚಡಚಣ ಹಾಗೂ ಇಂಡಿ ತಾಲೂಕಿನ ಭೀಮಾನದಿ ಪಟ್ಟದಲ್ಲಿ ನದಿ ತಟದ 100 ಮೀಟರ್ ಅಂತರದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ನದಿ ತಟದ ಗ್ರಾಮಗಳ ಸುತ್ತಮುತ್ತಲ ಭಾಗಗಳಲ್ಲಿ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಟ್ ಮಾಡಿದ್ದಾರೆ. ಹೀಗಾಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ: ಭೀಮಾನದಿ ಪಟ್ಟದಲ್ಲಿ ನಿಷೇದಾಜ್ಞೆ ಜಾರಿ: ವಿದ್ಯುತ್ ಸಂಪರ್ಕ ಕಟ್, ರೈತರು ಆಕ್ರೋಶ
ಹೆಸ್ಕಾಂ ಆಧಿಕಾರಿಗಳ ಜೊತೆಗೆ ವಾಗ್ವಾದ ನಡೆಸಿದ ರೈತರು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Jan 20, 2024 | 3:39 PM

Share

ವಿಜಯಪುರ, ಜನವರಿ 20: ಭೀಮಾ ನದಿ (Bhima River) ಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ಜಿಲ್ಲೆಯ ಚಡಚಣ ಹಾಗೂ ಇಂಡಿ ತಾಲೂಕಿನ ಭೀಮಾನದಿ ಪಟ್ಟದಲ್ಲಿ ನದಿ ತಟದ 100 ಮೀಟರ್ ಅಂತರದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲಾಧಿಕಾರಿ ಟಿ ಭೂಬಾಲನ್ ಸೂಚನೆ ಮೇರೆಗೆ ಇಂಡಿ ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ನಿಷೇದಾಜ್ಞೆ ಜಾರಿ ಮಾಡಿದ್ದಾರೆ. ನದಿ ತಟದ ಗ್ರಾಮಗಳ ಸುತ್ತಮುತ್ತಲ ಭಾಗಗಳಲ್ಲಿ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಟ್ ಮಾಡಿದ್ದಾರೆ. ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಿಗೆ ನೀರಿನ ಅಭಾವ ಉಂಟಾಗಬಾರದು. ನದಿಯ ನೀರನ್ನು ಕೃಷಿಗೆ ಬಳಕೆ ಮಾಡಬಾರದೆಂದು ವಿದ್ಯುತ್ ಸಂಪರ್ಕ ಕಟ್ ಮಾಡಲಾಗಿದೆ.

ಹೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಅಧಿಕಾರಿಗಳ ಕ್ರಮಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಚಡಚಣ ಪಟ್ಟಣದ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ತಹಶೀಲ್ದಾರ್ ಹಾಗೂ ಹೆಸ್ಕಾಂ ಅಧಿಕಾರಿಗಳ ಜೊತೆಗೆ ರೈತರು ವಾಗ್ವಾದ ನಡೆಸಿದ್ದಾರೆ. ನದಿ ನೀರನ್ನು ಬಳಕೆ ಮಾಡದಂತೆ ಕ್ರಮ ಕೈಗೊಳ್ಳಿ. ಆದರೆ ನದಿ ಭಾಗದ ವಿದ್ಯುತ್ ಕಟ್ ಮಾಡಿದ್ದು ಯಾಕೆ ಎಂದು ರೈತರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ವಿಜಯಪುರ: ಆಶಾ ಕಾರ್ಯಕರ್ತೆ ವಿರುದ್ಧ ನಾಲ್ಕು ಕುಟುಂಬಗಳ ಮತಾಂತರ ಮಾಡಿದ ಆರೋಪ

ನದಿ ಭಾಗದಲ್ಲಿನ ಜಮೀನಿನಲ್ಲಿ ಬಾವಿ, ಕೊಳವೆ ಬಾವಿಗಳಿವೆ. ವಿದ್ಯುತ್ ಇಲ್ಲದೇ ಬೆಳೆಗಳಿಗೆ ನೀರು ಬಿಡುವುದು ಹೇಗೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ವಿದ್ಯುತ್ ಸಂಪರ್ಕ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪ್ರತಿಭಟನೆ ವೇಳೆ ಅಧಿಕಾರಿಗಳ ಎದುರು ರೈತರು ದೀರ್ಘ ದಂಡ ನಮಸ್ಕಾರ ಹಾಕಿ ಮನವಿ ಮಾಡಿದ್ದಾರೆ. ವಿದ್ಯುತ್ ಸಂಪರ್ಕ ನೀಡದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ಚಡ್ಡಿ ಗ್ಯಾಂಗ್ ಹಾವಳಿ; ಎಚ್ಚರಿಕೆಯಿಂದಿರಲು ಸಾರ್ವಜನಿಕರಿಗೆ ಪೊಲೀಸರ ಸೂಚನೆ

ಮಹರಾಷ್ಟ್ರದಲ್ಲಿ ಹುಟ್ಟಿ, ರಾಜ್ಯದಲ್ಲಿ ವಿಜಯಪುರ, ಕಲಬುರಗಿ,ಯಾದಗಿರಿ ಜಿಲ್ಲೆಯಲ್ಲಿ ಬರೋಬ್ಬರಿ 289 ಕಿಲೋ ಮೀಟರ್ ದೂರ ಹರಿದು, ರಾಯಚೂರು ಬಳಿ ಕೃಷ್ಣಾ ನದಿ ಸೇರುತ್ತದೆ. ಭೀಮಾ ನದಿ ಕಲಬುರಗಿ ಜಿಲ್ಲೆಯ ಜನರಿಗೆ ಜೀವ ನದಿ ಎನಿಸಿಕೊಂಡಿದೆ. ಭೀಮಾ ನದಿ ದಂಡೆಯಲ್ಲಿ 169 ಹಳ್ಳಗಳಿವೆ. ಜೊತೆಗೆ ಕಲಬುರಗಿ ನಗರ, ಅಫಜಲಪುರ, ಜೇವರ್ಗಿ ಪಟ್ಟಣದ ಜನರಿಗೆ ಕುಡಿಯುವ ನೀರಿನ ಮೂಲ ಇದೇ ಭೀಮಾ ನದಿ. ನದಿ ದಂಡೆಯಲ್ಲಿರುವ ಗ್ರಾಮದ ಜನರು, ನೀರಿಗಾಗಿ ಆಶ್ರಯಿಸಿದ್ದು ಇದೇ ಭೀಮಾ ನದಿಯನ್ನು.

ಮಹರಾಷ್ಟ್ರ ಸರ್ಕಾರ, ಮಹರಾಷ್ಟ್ರದಲ್ಲಿ ಭೀಮಾ ನದಿಗೆ ಅಡ್ಡಲಾಗಿ ಉಜನಿ ಡ್ಯಾಮ್ ನಿರ್ಮಾಣ ಮಾಡಿದ್ದು, ಬಹುತೇಕ ನೀರನ್ನು ಉಜನಿ ಡ್ಯಾಮ್​ನಲ್ಲಿ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:39 pm, Sat, 20 January 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್