AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜುಗೌಡ ಪುತ್ರನಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ; ಮಗನ ತಪ್ಪಿಗೆ ಕ್ಷಮೆಯಾಚಿಸಿದ ತಂದೆ

ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು. ಈ ಹಿನ್ನೆಲೆ ಥಳಿತಕ್ಕೊಳಗಾಗಿದ್ದ ಟೋಲ್ ಸಿಬ್ಬಂದಿ ಯಾವುದೇ ದೂರು ದಾಖಲಿಸದೇ ಇದ್ದರೂ, ತನ್ನ ಮಗನ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ವಿಜು ಗೌಡ ಪಾಟೀಲ್ ಹೇಳಿದ್ದಾರೆ.

ವಿಜುಗೌಡ ಪುತ್ರನಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ; ಮಗನ ತಪ್ಪಿಗೆ ಕ್ಷಮೆಯಾಚಿಸಿದ ತಂದೆ
ವಿಜುಗೌಡ ಪುತ್ರನಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ
ಅಶೋಕ ಯಡಳ್ಳಿ, ವಿಜಯಪುರ
| Updated By: ಭಾವನಾ ಹೆಗಡೆ|

Updated on: Oct 31, 2025 | 10:38 AM

Share

ವಿಜಯಪುರ, ಅಕ್ಟೋಬರ್ 31: ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ​ (Vijugouda Patil) ​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು. ಈ ಹಿನ್ನೆಲೆ ಯಾವುದೇ ದೂರು ದಾಖಲಾಗಿಲ್ಲ. ಹೀಗಿರುವಾಗ ತನ್ನ ಮಗನ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ವಿಜು ಗೌಡ ಪಾಟೀಲ್ ಹೇಳಿದ್ದಾರೆ.

ಮಗನ ತಪ್ಪಿಗೆ ಕ್ಷಮೆಯಾಜಿಸಿದ ವಿಜು ಗೌಡ

ಸಮರ್ಥ ಗೌಡ ಮತ್ತು ಆತನ ಸ್ನೇಹಿತರಿಂದ ಹಲ್ಲೆಗೊಳಗಾದ ಟೋಲ್ ಸಿಬ್ಬಂದಿ ಸಂಗಪ್ಪ , ಈ ಗಲಾಟೆಯಿಂದ ನನಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ನಾನು ದೂರು ನೀಡಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.  ಇದೇ ಕಾರಣಕ್ಕೆ ಈ ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ. ಹೀಗಿರುವಾಗ ಈ ಘಟನೆ ಕುರಿತು ಮಾತನಾಡಿರುವ ವಿಜು ಗೌಡ, ಟೋಲ್ ಸಿಬ್ಬಂದಿ ನನ್ನ ಮಗನ ಮುಂದೆ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಮಗನ ಮುಂದೆ ತಂದೆಗೆ ಬೈದರೆ ಯಾರಿಗೆ ತಾನೇ ಕೋಪ ಬರುವುದಿಲ್ಲ, ಆಗ ನನ್ನ ಮಗ ಹಾಗೂ ಆತನ ಗೆಳೆಯರು ಸೇರಿ ಸಿಬ್ಬಂದಿಗೆ ಥಳಿಸಿದ್ದರು ಎಂದಿದ್ದಾರೆ.

ನನ್ನ ಮಗ ಮಾಡಿದ್ದು ತಪ್ಪು, ಸಿಬ್ಬಂದಿ ಕೂಡ ಆ ರೀತಿ ಮಾತನಾಡಿದ್ದು ತಪ್ಪು. ನನ್ನ ಮಗನಿಗೆ ಕ್ಷಮೆ ಕೇಳುವಂತೆ ನಾನು ಹೇಳಿದ್ದೇನೆ. ಅವನು ಕ್ಷಮೆ ಕೇಳದಿದ್ದರೂ ನಾನು ಅವನ ಪರವಾಗಿ ಕ್ಷಮೆ ಕೇಳುತ್ತೇನೆ ಎಂದಿರುವ ವಿಜು ಗೌಡ, ಈ ವಿಷಯದಲ್ಲೀಗ ರಾಜಕೀಯ ಮಧ್ಯಪ್ರವೇಶೆಸಿದ ಕಾರಣ ಈ ಮಟ್ಟಕ್ಕೆ ಬೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ. ನನ್ನ ಮಗ ಮತ್ತು ಸಿಬ್ಬಂದಿ ಇಬ್ಬರೂ ಪರಸ್ಪರ ಕ್ಷಮೆ ಕೇಳಿ ಪ್ರಕರಣವನ್ನು ಸುಖಾಂತ್ಯಗೊಳಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ನಡೆದಿದ್ದೇನು?

ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ನಡೆದಿತ್ತು. ಸಮರ್ಥ ಗೌಡ ವಿಜಯಪುರದಿಂದ ಬ್ಲ್ಯಾಕ್‌ ಕಲರ್‌ ಥಾರ್‌ನಲ್ಲಿ ಸಿಂದಗಿ ಕಡೆ ಹೊರಟ್ಟಿದ್ದರು. ಈ ವೇಳೆ ಟೋಲ್ ಸಿಬ್ಬಂದಿ ಸಂಗಪ್ಪ ಹಣ ಕೇಳಿದ್ದಕ್ಕೆ ವಿಜು ಗೌಡ ಪುತ್ರ ಎಂದಿದ್ದಾರೆ. ಯಾವ ವಿಜುಗೌಡ ಎಂದು ಸಂಗಪ್ಪ ಕೇಳಿದ್ದಕ್ಕೆ ಥಳಿಸಿರುವ ಆರೋಪ ಮಾಡಲಾಗಿದೆ.  ಹಲ್ಲೆಗೊಳಗಾದ ಸಂಗಪ್ಪಗೆ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ ಹಣ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್‌ ಪುತ್ರ

ಈ ಹಿಂದೆಯೂ ದಾಂಧಲೆ ಮಾಡಿಕೊಂಡಿದ್ದ ಸಮರ್ಥ ಗೌಡ

ಈ ಹಿಂದೆಯೂ ಸಮರ್ಥಗೌಡ ಪಾಟೀಲ್ ಗುಂಡು ಹಾರಿಸಿದ್ದ ವಿಡಿಯೋ ವೈರಲ್ ಆಗಿದ್ದವು. ವಿಜಯಪುರದ ತೋಟದ ಮನೆಯಲ್ಲಿ ಸ್ನೇಹಿತರ ಜೊತೆ ಸೇರಿ ಪಿಸ್ತೂಲ್ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಘಟನೆ 2023 ರ ವಿಧಾನಸಭಾ ಚುನಾವಣೆ ವೇಳೆಯಲ್ಲಿ‌ ಜಿಲ್ಲೆಯಲ್ಲಿ ವಿವಾದ ಸೃಷ್ಟಿಸಿತ್ತು. ಇದೀಗ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಸಮರ್ಥ ಗೌಡ ವಿಡಿಯೋ ಮತ್ತೊಮ್ಮೆ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ