ಮಕ್ಕಳ ಕಳ್ಳನೆಂದು‌ ಭಾವಿಸಿ ಸರ್ಕಾರಿ ಅಧಿಕಾರಿಗೆ ಥಳಿಸಿದ ಗ್ರಾಮಸ್ಥರು

ಮಕ್ಕಳ ಕಳ್ಳನೆಂದು ಭಾವಿಸಿ ಭೂಗರ್ಭ ಇಲಾಖೆ ಅಧಿಕಾರಿಗೆ ಗ್ರಾಮಸ್ಥರು ಥಳಿಸಿರುವ ಘಟನೆ ಇಂಡಿ ತಾಲೂಕಿನ ಹಿರೇಬೇವನೂರಿನಲ್ಲಿ ನಡೆದಿದೆ.

ಮಕ್ಕಳ ಕಳ್ಳನೆಂದು‌ ಭಾವಿಸಿ ಸರ್ಕಾರಿ ಅಧಿಕಾರಿಗೆ ಥಳಿಸಿದ ಗ್ರಾಮಸ್ಥರು
ಮಕ್ಕಳ ಕಳ್ಳನೆಂದು ಭಾವಿಸಿ ಸರ್ಕಾರಿ ಅಧಿಕಾರಿಗೆ ಥಳಿತ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 26, 2022 | 7:12 PM

ವಿಜಯಪುರ: ಮಕ್ಕಳ ಕಳ್ಳನೆಂದು ಭಾವಿಸಿ ಭೂಗರ್ಭ ಇಲಾಖೆ ಅಧಿಕಾರಿಗೆ ಗ್ರಾಮಸ್ಥರು ಥಳಿಸಿರುವ ಘಟನೆ ಇಂಡಿ ತಾಲೂಕಿನ ಹಿರೇಬೇವನೂರಿನಲ್ಲಿ ನಡೆದಿದೆ. ಹಿರೇಬೇವನೂರು ಸುತ್ತಮುತ್ತ ಖನಿಜದ ಅದಿರು ಇರುವ ಭೂಗರ್ಭ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ದೊರೆತಿತ್ತು. ಈ ಸಂಬಂಧ ಇಲಾಖೆ ಬೆಂಗಳೂರಿನಿಂದ ಸಹಾಯಕ ಅಧಿಕಾರಿ ದಿನೋಮನ್​ ಅವರನ್ನು ಖನಿಜದ ಅದಿರು ಪರಿಶೀಲನೆಗೆ ಕಳಿಸಿತ್ತು. ಈ ಸಂಬಂಧ ಗ್ರಾಮಕ್ಕೆ ಭೇಟಿ ನೀಡಿದ ದಿನೋಮನ್​ಗೆ ಗ್ರಾಮಸ್ಥರು ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಐಡಿ, ಇಲಾಖೆ ಪತ್ರ ತೋರಿಸುವಂತೆ ಒತ್ತಾಯಿಸಿದ್ದಾರೆ.

ಅಧಿಕಾರಿ ಸಮರ್ಪಕ ಉತ್ತರ ನೀಡದ ಹಿನ್ನೆಲೆ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಇಂಡಿ ಗ್ರಾಮಾಂತರ ಪೊಲೀಸರು ಹಲ್ಲೆಗೊಳಗಾದ ವ್ಯಕ್ತಿ ಸರ್ಕಾರಿ ಅಧಿಕಾರಿ ಎಂಬುವುದನ್ನು ಖಾತರಿ ಪಡಿಸಿಕೊಂಡಿದ್ದಾರೆ. ಈ ವೇಳೆ ಅಧಿಕಾರಿ ಗೌಪ್ಯತೆ ದೃಷ್ಟಿಯಿಂದ ತಪ್ಪು ಮಾಹಿತಿ ನೀಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಸರ್ಕಾರಿ ಅಧಿಕಾರಿ ಎಂದು ತಿಳಿದ ಬಳಿಕ ಗ್ರಾಮಸ್ಥರು ಕ್ಷಮೆಯಾಚಿಸಿದ್ದಾರೆ.

ಇದೇ ತರಹದ ಮತ್ತೊಂದು ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ನಡೆದಿದೆ

ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಬಳಿ ಮಕ್ಕಳ ಕಳ್ಳನೆಂದು ಭಾವಿಸಿ ಅಪರಿಚಿತ ಯುವಕನನ್ನು ಗ್ರಾಮಸ್ಥರು  ಥಳಿಸಿದ್ದಾರೆ. ಇಟ್ಟಂಗಿಹಾಳ ಗ್ರಾಮದ ಪೂಜಾರ ವಸತಿ ಬಳಿ ಅಪರಿಚಿತ ಯುವಕನನ್ನು ಹಿಡಿದು ಗ್ರಾಮಸ್ಥರು ಥಳಿಸಿ, ಮರಕ್ಕೆ ಕಟ್ಟಿ ಹಾಕಿದ್ದಾರೆ. ಎಲ್ಲಿಂದ ಬಂದಿದ್ದೀಯಾ? ಎಷ್ಟು ಜನ ಬಂದಿದ್ದೀರಿ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Mon, 26 September 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ