ಮದ್ಯ ಸೇವಿಸಿ ಎರಡು ಆಟೋ ಹಾಗೂ ಒಂದು ಬೈಕ್​ಗೆ ಡಿಕ್ಕಿ: ಕಾರ್ ಚಾಲಕನಿಗೆ ಮಹಿಳೆಯಿಂದ ಚಪ್ಪಲಿ ಸೇವೆ

ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರ್ ಚಾಲನೆ ಮಾಡಿ ಅಪಘಾತ ಮಾಡಿದ ಕಾರ್ ಚಾಲಕನಿಗೆ ಮಹಿಳೆ ಒಬ್ಬರು ಚಪ್ಪಲಿಯಲ್ಲಿ ಹೊಡೆದಿರುವಂತಹ ಘಟನೆ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಮದ್ಯ ಸೇವಿಸಿ ಎರಡು ಆಟೋ ಹಾಗೂ ಒಂದು ಬೈಕ್​ಗೆ ಡಿಕ್ಕಿ: ಕಾರ್ ಚಾಲಕನಿಗೆ ಮಹಿಳೆಯಿಂದ ಚಪ್ಪಲಿ ಸೇವೆ
ಕಾರ್ ಚಾಲಕನಿಗೆ ಚಪ್ಪಲಿಯಿಂದ ಥಳಿಸುತ್ತಿರುವ ಮಹಿಳೆ
Follow us
ಗಂಗಾಧರ​ ಬ. ಸಾಬೋಜಿ
|

Updated on:May 19, 2023 | 9:59 AM

ವಿಜಯಪುರ: ಮದ್ಯ ಸೇವಿಸಿ (alcohol) ಅಡ್ಡಾದಿಡ್ಡಿ ಕಾರ್ ಚಾಲನೆ ಮಾಡಿ ಅಪಘಾತ ಮಾಡಿದ ಕಾರ್ ಚಾಲಕನಿಗೆ ಮಹಿಳೆ ಒಬ್ಬರು ಚಪ್ಪಲಿಯಲ್ಲಿ ಹೊಡೆದಿರುವಂತಹ ಘಟನೆ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಎಣೆ ಮತ್ತಲ್ಲಿ ಅಡ್ಡಾದಿಡ್ಡಿ ಕಾರ್ ಚಾಲನೆ ಮಾಡಿ ಎರಡು ಆಟೋ ಹಾಗೂ ಒಂದು ಬೈಕ್​ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಆಟೋ ಪಲ್ಟಿ ಆಗಿದೆ. ಸಣ್ಣಪುಟ್ಟ ಗಾಯಗಳಾಗಿವೆ. ಪಲ್ಟಿಯಾದ ಆಟೋದಲ್ಲಿದ್ದ ಮಹಿಳೆಯಿಂದ ಕಾರ್ ಚಾಲಕನಿಗೆ ಚಪ್ಪಲಿ ಸೇವೆ ಮಾಡಿದ್ದಾರೆ. ಬೇಜವಾಬ್ದಾರಿಯಾಗಿ ಹಾಗೂ ಮದ್ಯ ಸೇವಿಸಿ ಕಾರ್ ಚಾಲನೆ ಮಾಡಿ ಅಪಘಾತಕ್ಕೀಡಾಗಿಸಿದಕ್ಕೆ ಮಹಿಳೆ ಆಕ್ರೋಶಗೊಂಡಿದ್ದಾರೆ.

ಮಹಿಳೆಯಿಂದ ಕಾರ್ ಚಾಲಕನಿಗೆ ಥಳಿಸುತ್ತಿರುವ ವಿಡಿಯೋ ಇಂದು ವೈರಲ್​ ಆಗಿದೆ. ಸದ್ಯ ಕಾರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಶಾಂತಿಯುತ ಚುನಾವಣೆ ಯಶಸ್ವಿ: ರಾಜ್ಯದ ಜನತೆಗೆ, ಪೊಲೀಸ್ ಇಲಾಖೆಗೆ ಅಭಿನಂದನೆ ತಿಳಿಸಿದ ಎಡಿಜಿಪಿ ಅಲೋಕ್ ಕುಮಾರ್

ಪಾಕಿಸ್ತಾನ್ ಪರ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ವಿಜಯಪುರ: ‘ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲಿಮ್ ರಾಷ್ಟ್ರ’ ಎಂದು ಸಾಮಾಜಿಕ ಮಾಧ್ಯಮ ಇನ್ಸಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದ ಯುವಕ ಇಬ್ರಾಹಿಂ ಮುರ್ತುಜಸಾಬ್ ಮುಲ್ಲಾ ಇನ್ಸಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದ.

ಇದನ್ನು ವೀಕ್ಷಿಸಿದ ಸ್ಥಳಿಯರು ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡ ತಾಳಿಕೋಟೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಸದ್ಯ ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ನೀಡಿದೆ.

ಹಾರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡಿದ ಪ್ರಯಾಣಿಕನ ಬಂಧನ

ದೇವನಹಳ್ಳಿ: ಚಲಿಸುತ್ತಿದ್ದ ವಿಮಾನದ ಶೌಚಾಲಯದಲ್ಲಿ ಸಿಗರೇಟ್‌ ಸೇದಿ ಆತಂಕ ಸೃಷ್ಟಿಸಿದ್ದ ಪ್ರಯಾಣಿಕನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಕುಮಾರ್​ ಬಂಧಿತ ಆರೋಪಿ. ಅಹಮದಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ. ಆಕಾಶ್‌ ಏರ್‌ ವಿಮಾನದಲ್ಲಿ ಆರೋಪಿ ನಿಯಮ ಉಲ್ಲಂಘಿಸಿದ್ದಾನೆ. ಕೆಐಎಬಿಯಲ್ಲಿ ಪ್ರವೀಣ್‌ ಕುಮಾರ್‌ನನ್ನು ಬಂಧಿಸಿ ಏರ್‌ಪೋರ್ಟ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:  ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ: ರಾಜಕೀಯ ಕೆಸರೆರೆಚಾಟ ಶರು

ಮತ್ತೊಂದು ಪ್ರಕರಣದಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ಶೇಹರಿ ಚೌದರಿ ಎಂಬಾತ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ್ದ. 6E 716 ಇಂಡಿಗೂ ವಿಮಾನದಲ್ಲಿ ಮಧ್ಯರಾತ್ರಿ 01:30 ರ ವೇಳೆ ಈ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:54 am, Fri, 19 May 23