ಸೀರೆ ಹಂಚಲು ಬಂದಿದ್ದ ಬಿಜೆಪಿ ಶಾಸಕನ ಬೆಂಬಲಿಗರಿಗೆ ತರಾಟೆ ತೆಗೆದುಕೊಂಡ ಮಹಿಳೆ: ವಿಡಿಯೋ ವೈರಲ್​

ಸೀರೆ ಹಂಚಲು ಬಂದಿದ್ದ ಬಿಜೆಪಿ ಶಾಸಕನ ಬೆಂಬಲಿಗರಿಗೆ ಮಹಿಳೆ ಹಾಗೂ ಸ್ಥಳಿಯರು ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳದ ಮೈಬೂಬ್ ನಗರದಲ್ಲಿ ಘಟನೆ ನಡೆದಿದೆ.

Follow us
ಗಂಗಾಧರ​ ಬ. ಸಾಬೋಜಿ
|

Updated on:Mar 22, 2023 | 7:21 PM

ವಿಜಯಪುರ: ಸೀರೆ (saree) ಹಂಚಲು ಬಂದಿದ್ದ ಬಿಜೆಪಿ (BJP) ಶಾಸಕನ ಬೆಂಬಲಿಗರಿಗೆ ಮಹಿಳೆ ಹಾಗೂ ಸ್ಥಳಿಯರು ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳದ ಮೈಬೂಬ್ ನಗರದಲ್ಲಿ ಘಟನೆ ನಡೆದಿದೆ. ಎ.ಎಸ್.ಪಾಟೀಲ್ ನಡಹಳ್ಳಿ ಬೆಂಬಲಿಗರಿಂದ ಸೀರೆ ಹಂಚಿಕೆ ಆರೋಪ ಮಾಡಲಾಗಿದೆ. ಕಳೆದ 5 ವರ್ಷಗಳಲ್ಲಿ ಒಂದು ಆಶ್ರಯ ಮನೆ ಸಹ ಹಾಕಿ ಕೊಡಲಿಲ್ಲ. ನಿಮ್ಮ ಸೀರೆ ಬೇಡ ಎಂದು ಅಲ್ಪಸಂಖ್ಯಾತ ಸಮುದಾಯದ ಮಹಿಳೆ ಹೇಳಿದ್ದಾರೆ. ಸೀರೆ ಹಂಚಲು ಬಂದಿದ್ದ ವ್ಯಕ್ತಿ ಮಹಿಳೆಗೆ ಸಮಜಾಯಿಸಿ ನೀಡಲು ಮುಂದಾಗಿದ್ದಾನೆ. ಯಾವುದಕ್ಕೂ ಸೊಪ್ಪು ಹಾಕದೇ ನಿಮ್ಮ ಸೀರೆ ಬೇಡ ಎಂದಿದ್ದಾರೆ ಮಹಿಳೆ. ಪಟ್ಟಣ ಪಂಚಾಯತಿಯವರೂ ಅವರೇ ಶಾಸಕರೂ ಅವರೇ ಎಂದು ಮಹಿಳೆ ಹರಿಹಾಯ್ದಿದ್ದಾರೆ. ಮಹಿಳೆ ಜೊತೆಗೆ ಪುತ್ರ ಹಾಗೂ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋರು ಮಾಡಿದವರ ಕೆಲಸ ಮಾತ್ರ ಮಾಡುತ್ತೀರಿ ನಮ್ಮಂಥವರ ಕೆಲಸ ಮಾಡಲ್ಲಾ ಎಂದು ಜನರು ಅವಾಜ್ ಹಾಕಿದ್ದಾರೆ.

ಸೀರೆ ಕೊಳ್ಳಲು ನಮ್ಮ ಬಳಿ ಹಣವಿಲ್ಲವೇ ಎಂದು ಮಹಿಳೆ ಅಸಮಾಧಾನ ಹೊರ ಹಾಕಿದ್ದಾರೆ. ಸ್ಥಳಿಯರ ಮೊಬೈಲ್​ನಲ್ಲಿ ಘಟನೆ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲಿ ಫುಲ್ ಅಲರ್ಟ್ ಆದ ಪೊಲೀಸರು; ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಅಕ್ಕಿ ಚೀಲ, ಮದ್ಯ ವಶ

ದಾಖಲೆ ಇಲ್ಲದ 50 ಲಕ್ಷ ಹಣ ಜಪ್ತಿ: ಓರ್ವ ವ್ಯಕಿ ವಶಕ್ಕೆ

ಕಲಬುರಗಿ: ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 50 ಲಕ್ಷ ರೂ. ಹಣವನ್ನು ಜಿಲ್ಲೆಯ ಜೇವರ್ಗಿ ತಾಲೂಕಿನ ಚಿಗರಳ್ಳಿ ಚೆಕ್​​ಪೋಸ್ಟ್​ ಬಳಿ ಜಪ್ತಿ ಮಾಡಲಾಗಿದೆ. ಹಣ ಸಾಗಿಸುತ್ತಿದ್ದ ಯಾದವ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರದಿಂದ ಕಲಬುರಗಿ ಕಡೆಗೆ ಕಾರಿನಲ್ಲಿ ತೆರಳಿದ್ದರು. ಜೇವರ್ಗಿ ತಹಶೀಲ್ದಾರ್​​, ಪೊಲೀಸರ ನೇತೃತ್ವದಲ್ಲಿ ಹಣ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: AICC ಹೆಸರಲ್ಲಿ ಕರೆ ಮಾಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚನೆ ಯತ್ನ; ಎಚ್ಚರವಹಿಸುಂತೆ ಸೂಚನೆ

ಅಕ್ಕಿ ವಶಕ್ಕೆ ಪಡೆದ ಪೊಲೀಸರು

ಮತದಾರರಿಗೆ ಹಂಚಲು ಸಂಗ್ರಹಿಸಲಾದ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತದಾರರಿಗೆ ಹಂಚಲು ಅಕ್ಕಿ ಚೀಲ ಸಂಗ್ರಹದ ಶಂಕೆ ಹಿನ್ನೆಲೆ ಶಿವಾಜಿನಗರದ ನೋವಾ ರಸ್ತೆಯಲ್ಲಿರುವ ರೌಡಿಶೀಟರ್ ಇಸ್ತಿಯಾಖ್ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದು ಕಚೇರಿಯಲ್ಲಿದ್ದ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಸಂಗ್ರಹಿಸಿದ್ದ 22.5 ಲಕ್ಷ ಮೌಲ್ಯದ ಮದ್ಯ ವಶಕ್ಕೆ

ಚುನಾವಣೆ ಹಿನ್ನೆಲೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಮಾಸ್ತಿ ಗ್ರಾಮದ MSIL ಶಾಪ್​​ನಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹ ಮಾಡಲಾಗಿದ್ದು ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 22.5 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ದಾಖಲೆ ಪುಸ್ತಕದಲ್ಲಿ ಇದ್ದ ಲೆಕ್ಕಕ್ಕಿಂತ ಹೆಚ್ಚು ಮದ್ಯ ಸಂಗ್ರಹ ಹಿನ್ನೆಲೆ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯ ವಶಕ್ಕೆ ಪಡೆಯಲಾಗಿದೆ. ಮತ್ತು ಅಬಕಾರಿ ಪೊಲೀಸರು ವೇಣು ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಅಕ್ರಮವಾಗಿ ತಂಬಾಕು ಸಂಗ್ರಹ, ಮೊಬೈಲ್ ಬಳಕೆ ಆರೋಪ​​​​ ಹಿನ್ನೆಲೆ ರಾಮನಗರ ಡಿವೈಎಸ್​​ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ಕಾರಾಗೃಹದ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ. 50 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಜೈಲಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:20 pm, Wed, 22 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ