AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಸಿರಿ ಸೊಸೈಟಿ ಮೇಲೆ ಯಾವುದೇ ದಾಳಿಯಾಗಿಲ್ಲ, ಗ್ರಾಹಕರ ಹಣ ಸುರಕ್ಷಿತ; ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಸಿದ್ದಸಿರಿ ಮಲ್ಟಿ ಸ್ಟೇಟ್ ಸಹಕಾರಿ ಸಂಘದ ಮೇಲೆ ಇಡಿ/ಐಟಿ ದಾಳಿ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಇವು ರಾಜಕೀಯ ವಿರೋಧಿಗಳ ಸುಳ್ಳು ಪ್ರಚಾರವೆಂದು ಸ್ಪಷ್ಟಪಡಿಸಿದ್ದು, ಭ್ರಷ್ಟಾಚಾರ ಸಾಬೀತುಪಡಿಸಿದರೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ಸವಾಲು ಹಾಕಿದ್ದಾರೆ. ಸೊಸೈಟಿಯ ಆಸ್ತಿ ಕುಟುಂಬದ ಹೆಸರಿನಲ್ಲಿಲ್ಲ, ಗ್ರಾಹಕರ ಹಣ ಸುರಕ್ಷಿತವಾಗಿದೆ ಎಂದೂ ಭರವಸೆ ನೀಡಿದ್ದಾರೆ.

ಸಿದ್ದಸಿರಿ ಸೊಸೈಟಿ ಮೇಲೆ ಯಾವುದೇ ದಾಳಿಯಾಗಿಲ್ಲ, ಗ್ರಾಹಕರ ಹಣ ಸುರಕ್ಷಿತ; ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ
ಶಾಸಕ ಬಸನಗೌಡ ಪಾಟೀಲ್ ಯತ್ನಾಳImage Credit source: Google
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Nov 15, 2026 | 5:53 PM

Share

ವಿಜಯಪುರ, ನ.15: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಸಂಸ್ಥಾಪನೆಯ, ಪುತ್ರ ರಾಮನಗೌಡ ಪಾಟೀಲ್ ಅಧ್ಯಕ್ಷರಾಗಿರುವ ‘ಸಿದ್ದಸಿರಿ ಮಲ್ಟಿ ಸ್ಟೇಟ್ ಮಲ್ಟಿ ಪರ್ಪಸ್ ಕೋ-ಆಪರೇಟಿವ್ ಸೊಸೈಟಿ’ ಮೇಲೆ ಕೇಂದ್ರದ ಹಣಕಾಸು ಸಂಸ್ಥೆಗಳು (ED-IT) ದಾಳಿ ನಡೆಸಿವೆ ಎಂಬ ವಂತಿಗಳ ಕುರಿತು ಶಾಸಕ ಯತ್ನಾಳ ಸ್ಪಷ್ಟನೆ ನೀಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ದಾಳಿಯಾಗಿಲ್ಲ, ಇದೆಲ್ಲವೂ ರಾಜಕೀಯ ವಿರೋಧಿಗಳ ಸುಳ್ಳು ವದಂತಿ ಎಂದು ತಳ್ಳಿಹಾಕಿದ್ದು, ತಮ್ಮ ಮೇಲೆ ಭ್ರಷ್ಟಾಚಾರ ಸಾಬೀತು ಮಾಡಿದರೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಸವಾಲು ಹಾಕಿದ್ದಾರೆ.

ಕಳೆದ 2025ರಲ್ಲಿ ಕೇವಲ 5 ಲಕ್ಷ ರೂ. ಬಂಡವಾಳದಲ್ಲಿ ಆರಂಭವಾದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘವು ಅಲ್ಪಾವಧಿಯಲ್ಲಿ ಬೆಳೆದು 2025ರ ವೇಳೆಗೆ 6,140 ಕೋಟಿ ರೂ. ವ್ಯವಹಾರ ನಡೆಸುವ ಮೂಲಕ ರಾಜ್ಯದಿಂದ ಕೇಂದ್ರ ವ್ಯಾಪ್ತಿಗೆ ಸೇರ್ಪಡೆಗೊಂಡು ‘ಸಿದ್ದಸಿರಿ ಮಲ್ಟಿ ಸ್ಟೇಟ್ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ’ಯಾಗಿ ಪರಿವರ್ತನೆಯಾಗಿದೆ. ರಾಜ್ಯ ವ್ಯಾಪ್ತಿಯಿಂದ ಕೇಂದ್ರ ಸಹಕಾರಿ ವ್ಯಾಪ್ತಿಗೆ ಹೋದಾಗ ನಿಯಮಗಳ ಬದಲಾವಣೆಯಾಗಲಿದ್ದು, ಕೇಂದ್ರ ಸಹಕಾರ ಸಂಘಗಳ ರಿಜಿಸ್ಟ್ರಾರ್ ಕಚೇರಿಯಿಂದ ಮಾಹಿತಿ ಕೋರಿ ನೋಟಿಸ್ ಬರುವುದು ಸಹಜ. ಅದರಂತೆ ಆಗಸ್ಟ್ 14ರಂದು ಆಡಿಟರ್ ಸಹಿ ಹಾಗೂ ದಾಖಲೆಗಳ ಕುರಿತು ಕೇಳಿದ್ದ ಮಾಹಿತಿಗೆ ಸೆಪ್ಟೆಂಬರ್ 4ರಂದೇ ಇ-ಮೇಲ್ ಮೂಲಕ ಸಮರ್ಪಕ ಉತ್ತರ ನೀಡಲಾಗಿದೆ ಎಂದು ಯತ್ನಾಳ ತಿಳಿಸಿದರು.

ಈವರೆಗೆ ಕನ್ನಡದಲ್ಲಿಯೇ ಆಡಿಟ್ ವರದಿ ಸಲ್ಲಿಸಲಾಗುತ್ತಿದ್ದು, ಸಿಆರ್‌ಸಿಎಸ್ ಅಧಿಕಾರಿಗಳು ಕನ್ನಡದಿಂದ ಇಂಗ್ಲಿಷ್‌ಗೆ ಭಾಷಾಂತರಿಸುವಾಗ ಕೆಲವು ಗೊಂದಲಗಳು ಉಂಟಾಗಿವೆ. ಮುಂದಿನ ದಿನಗಳಲ್ಲಿ ಇಂಗ್ಲಿಷ್‌ನಲ್ಲಿಯೇ ಆಡಿಟ್ ವರದಿ ಸಲ್ಲಿಸಲಾಗುವುದು ಎಂದರು.

“ಚಿಂಚೋಳಿ ಕಾರ್ಖಾನೆ ನಮ್ಮ ಕುಟುಂಬದ ಹೆಸರಿನಲ್ಲಿದ್ದರೆ ಸಾಬೀತು ಮಾಡಿ”: ವಿಜಯೇಂದ್ರ ವಿರುದ್ಧ ಯತ್ನಾಳ ಪರೋಕ್ಷ ವಾಗ್ದಾಳಿ

ಚಿಂಚೋಳಿಯಲ್ಲಿರುವ ಸಿದ್ದಸಿರಿ ಎಥನಾಲ್ ಆ್ಯಂಡ್ ಪವರ್‌ಗೆ 1,065 ಕೋಟಿ ರೂ. ಹೂಡಿಕೆ ಮಾಡಲಾಗಿದ್ದು, 1,734 ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಸೊಸೈಟಿ ಅಧ್ಯಕ್ಷರಾಗಿರುವ ತಮ್ಮ ಪುತ್ರ ರಾಮನಗೌಡ ಅವರು ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ಸಂಪೂರ್ಣ ಸುಳ್ಳು. ಚಿಂಚೋಳಿ ಕಾರ್ಖಾನೆ ಸಿದ್ದಸಿರಿ ಸೊಸೈಟಿಯ ಹೆಸರಿನಲ್ಲೇ ಹೊರತು ಕುಟುಂಬದ ಹೆಸರಿನಲ್ಲ. ಇದನ್ನು ದಾಖಲೆ ಸಮೇತ ಸಾಬೀತುಪಡಿಸಿದರೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ಸವಾಲು ಹಾಕಿದರು. ಸಿದ್ದಸಿರಿ ಸೊಸೈಟಿ ಹೆಸರು ಕೆಡಿಸಲು ಬೆಂಗಳೂರಿನಲ್ಲಿ ಮಾಜಿ ಶಾಸಕರೊಬ್ಬರು ಅಪಪ್ರಚಾರ ನಡೆಸುತ್ತಿದ್ದಾರೆ. ಇದರ ಹಿಂದೆ ಕೇಂದ್ರ ಸಚಿವ ಅಮಿತ್ ಶಾ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಅಥವಾ ಸೋಮಣ್ಣ ಅವರ ಪಾತ್ರವಿಲ್ಲ. ಬದಲಿಗೆ ರಾಜ್ಯದಲ್ಲಿ ಬಿಜೆಪಿಯನ್ನು ಮುನ್ನಡೆಸುತ್ತಿರುವ ವ್ಯಕ್ತಿಯೊಬ್ಬರ ಕುತಂತ್ರ ಇದರಲ್ಲಿದೆ ಎಂದು ಪರೋಕ್ಷವಾಗಿ ಬಿ.ವೈ. ವಿಜಯೇಂದ್ರ ವಿರುದ್ಧ ಕಿಡಿಕಾರಿದರು. ಅವ್ಯವಹಾರ ಮಾಡಿ ಜೀವನ ನಡೆಸುವ ನೀಚ ರಾಜಕಾರಣಿ ನಾನಲ್ಲ ಎಂದರು.

ಇದನ್ನೂ ಓದಿ: “ರಾಮನಗರದಿಂದ ನಮ್ಮನ್ನು ಹೊರಹಾಕಲು ಯಾರಿಂದಲೂ ಸಾಧ್ಯವಿಲ್ಲ”: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಗ್ರಾಹಕರು ಆತಂಕಪಡಬೇಕಿಲ್ಲ; ಒಂದೇ ವಾರದಲ್ಲಿ 9 ಕೋಟಿ ಠೇವಣಿ ಬಂದಿದೆ

ದಾಳಿಯ ವದಂತಿಗಳಿAದ ಗ್ರಾಹಕರು ಯಾವುದೇ ಕಾರಣಕ್ಕೂ ಗಾಬರಿಯಾಗಬೇಕಿಲ್ಲ. ವದಂತಿಗಳ ನಡುವೆಯೂ ಇದೇ ವಾರದಲ್ಲಿ ಸೊಸೈಟಿಗೆ 9 ಕೋಟಿ ರೂ. ಠೇವಣಿ ಬಂದಿದ್ದು, ಸಾರ್ವಜನಿಕರ ಪ್ರತಿಯೊಂದು ಹಣವೂ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಯತ್ನಾಳ ಭರವಸೆ ನೀಡಿದರು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ಅಶೋಕ ಯಡಳ್ಳಿಯವರು ಮೂಲತಃ ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದವರು. ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇದು ಇವರ ಕೆಲಸದ ಮಾಹಿತಿಯಾಗಿದೆ. ಪ್ರಾಥಮಿಕ ಶಿಕ್ಷಣ ನಂತರ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡವೇ ಇವರ ವಿದ್ಯಾ ಕ್ಷೇತ್ರವಾಗಿದೆ . ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ್ದಾರೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ, ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದಾರೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ, ಆಸಕ್ತಿ ಇವರಗಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ.

Read More
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ