AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಯುವತಿಗೆ ಚಪ್ಪಲಿಯಿಂದ ಥಳಿಸಿದ ನಾಗಠಾಣಾ ಯುವಕ, ಪರಾರಿ

ಆರೋಪಿ ಶ್ರೀಶೈಲ ಅನ್ಯಕೋಮಿನ ಯುವತಿಗೆ ಕೆಲ ದಿನಗಳಿಂದ ಚುಡಾಯಿಸುತ್ತಿದ್ದ. ನಿನ್ನೆ ಯುವತಿ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ತೆರಳುವಾಗ ಮತ್ತೆ ಮತ್ತೆ ಚುಡಾಯಿಸಿದ್ದಾನೆ. ಆಗ ಅನ್ಯ ಕೋಮಿನ ಯುವತಿಯು ಯುವಕನಿಗೆ ಚಪ್ಪಲಿ ತೋರಿಸಿದ್ದಾರೆ.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 13, 2024 | 10:30 AM

Share

ವಿಜಯಪುರ, ಫೆಬ್ರವರಿ 13: ಯುವಕನಮೊಬ್ಬ (youth) ರೋಷಾವೇಶದಿಂದ ಯುವತಿಗೆ ಚಪ್ಪಲಿಯಿಂದ (chappal) ಥಳಿಸುವ ದೃಶ್ಯಗಳು ಸಿಸಿ‌ ಕೆಮೆರಾ ವಿಡಿಯೋದಲ್ಲಿ ಸೆರೆಯಾಗಿದೆ. ವಿಜಯಪುರ ತಾಲೂಕಿನ ನಾಗಠಾಣಾ ಗ್ರಾಮದಲ್ಲಿ ನಿನ್ನೆ ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು, ಶ್ರೀಶೈಲ‌‌‌ ಮಸಳಿ ಎಂಬ ಯುವಕ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ನಾಗಠಾಣಾ ಗ್ರಾಮದ (Nagathan, Vijayapura) ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಅನ್ಯ ಕೋಮಿನ ಯುವತಿ ಥಳಿತಕ್ಕೊಳಗಾದ ಮಹಿಳೆ.

ಆರೋಪಿ ಶ್ರೀಶೈಲ ಅನ್ಯಕೋಮಿನ ಯುವತಿಗೆ ಕೆಲ ದಿನಗಳಿಂದ ಚುಡಾಯಿಸುತ್ತಿದ್ದ. ನಿನ್ನೆ ಯುವತಿ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ತೆರಳುವಾಗ ಮತ್ತೆ ಮತ್ತೆ ಚುಡಾಯಿಸಿದ್ದಾನೆ. ಆಗ ಅನ್ಯ ಕೋಮಿನ ಯುವತಿಯು ಯುವಕನಿಗೆ ಚಪ್ಪಲಿ ತೋರಿಸಿದ್ದಾರೆ.

Also Read: ಮುಂದುವರೆದ ಬೀಟಮ್ಮ ಗ್ಯಾಂಗ್ ಉಪಟಳ; ಛತ್ರಿಮರ ದೇಗುಲ ಬಳಿ ಬೀಡುಬಿಟ್ಟ 26 ಕಾಡಾನೆಗಳು

ಇದರಿಂದ ಆಕ್ರೋಶಗೊಂಡ ಶ್ರೀಶೈಲ ಕಂಪ್ಯೂಟರ್ ತರಬೇತಿ ಕೇಂದ್ರದ ಒಳ ಹೋಗಿ ಯುವತಿಯನ್ನು ಹೊರ ತಂದು ಚಪ್ಪಲಿಯಿಂದ ಥಳಿಸಿದ್ದಾನೆ. ಈ ಬಗ್ಗೆ ಯುವತಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ‌ನೀಡಿದ್ದಾರೆ. ದೂರು‌‌ ನೀಡುತ್ತಿದ್ದಂತೆ ಯುವಕ ಶ್ರೀಶೈಲ‌ ಪರಾರಿಯಾಗಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನ್ಯಾಯಕ್ಕಾಗಿ ಯುವತಿ ಹಾಗೂ ಪೋಷಕರು ಒತ್ತಾಯಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!