ರಾಜ್ಯದಲ್ಲಿ ಮುಂದುವರೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ; ಇಲ್ಲಿದೆ ವಿವರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 16, 2023 | 9:00 PM

ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ, ದೇಶದ ಬಡಜನರಿಗೆ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಆದರೆ, ಜನಸಾಮಾನ್ಯರಿಗೆ ಅನುಕೂಲವಾಗಬೇಕಾದ ಅನೇಕ ಯೋಜನೆಗಳ ಬಗ್ಗೆ ಅದೆಷ್ಟೋ ಜನರಿಗೆ ಮಾಹಿತಿಯೇ ಇಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ರಾಜ್ಯದಲ್ಲಿ ಮುಂದುವರೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ; ಇಲ್ಲಿದೆ ವಿವರ
ವಿಕಸಿತ ಸಂಕಲ್ಪ ಯಾತ್ರೆ
Follow us on

ಮಂಡ್ಯ, ಡಿ.16: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಕೇಂದ್ರ ಸರ್ಕಾರ, ದೇಶದ ಬಡಜನರಿಗೆ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಆದರೆ, ಜನಸಾಮಾನ್ಯರಿಗೆ ಅನುಕೂಲವಾಗಬೇಕಾದ ಅನೇಕ ಯೋಜನೆಗಳ ಬಗ್ಗೆ ಅದೆಷ್ಟೋ ಜನರಿಗೆ ಮಾಹಿತಿಯೇ ಇಲ್ಲ. ಜನಸಾಮಾನ್ಯರು ಕೂಡ ಅನೇಕ ಯೋಜನೆಗಳನ್ನ ಸದುಪಯೋಗ ಕೂಡ ಪಡಿಸಿಕೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯದಲ್ಲಿ ವಿಕಸಿತ ಭಾರತ ಸಂಕಲ್ಪ(Vikasita Bharat Sankalpa) ಯಾತ್ರೆ ಎಂಬ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದು, ಪ್ರತಿ ಗ್ರಾಮಪಂಚಾಯತಿ ಮಟ್ಟದಲ್ಲೂ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.

ಗ್ರಾಮಪಂಚಾಯತಿ ಮಟ್ಟದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ

ದೇಶದಲ್ಲಿ ಪ್ರಧಾನಿ ಅವರ ನೇತೃತ್ವದ ಸರ್ಕಾರ ಬಂದು 9 ವರ್ಷ ಕಳೆದಿದೆ. ದೇಶದ ಬಡಜನರು, ಸಾಮಾನ್ಯ ಜನರು, ರೈತರು ಸೇರಿದಂತೆ ಅನೇಕ ವರ್ಗದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ಪ್ರಧಾನಿ ಮೋದಿ ಅವರು ಅನೇಕ ಯೋಜನೆಗಳನ್ನ ಜಾರಿ ಮಾಡಿದ್ದಾರೆ. ಪಿಎಂ ಕೃಷಿ ಸಮ್ಮನ್ ಯೋಜನೆ, ಪಿಎಂ ಜೀವನ್ ಜ್ಯೋತಿ, ಪ್ರಧಾನ ಮಂತ್ರಿ ಸುರಕ್ಷ ಭೀಮ ಯೋಜನೆ, ಆಟಲ್ ಪಿಂಚಣಿ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ, ಸ್ವಸಹಯ ಗುಂಪುಗಳಿಗೆ ಸಾಲ ಯೋಜನೆ, ಪಿಎಂ ವಿದ್ಯಾರ್ಥಿ ವೇತನ, ಆಯುಷ್ ಮಾನ್ ಕಾರ್ಡ್ ವಿತರಣೆ, ಜಲ್ ಜೀವನ್ ಮಿಷನ್ ಸೇರಿದಂತೆ ಅನೇಕ ಯೋಜನೆಗಳನ್ನ ಜಾರಿ ಮಾಡಿದೆ. ಆದರೆ, ಈ ಯೋಜನೆಗಳ ಬಗ್ಗೆ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಅದೇಷ್ಟೋ ಜನಸಾಮಾನ್ಯರಿಗೆ ಮಾಹಿತಿ ಇಲ್ಲ. ಯೋಜನೆಗಳನ್ನ ಸದುಪಯೋಗ ಕೂಡ ಪಡಿಸಿಕೊಳ್ಳುತ್ತಿಲ್ಲ.

ಇದನ್ನೂ ಓದಿ:ದಕ್ಷಿಣ ಕನ್ನಡ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಯಶಸ್ವಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಈ ನಿಟ್ಟಿನಲ್ಲಿ ಕೇಂದ್ರದ ಯೋಜನೆಗಳು, ಅದರ ಬಗ್ಗೆ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿಗಳ ಬಳಿ ಎರಡು ವಾಹನಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಹೇಗೆ ಯೋಜನೆಗಳನ್ನ ಪಡೆಯಬಹುದು ಎನ್ನುವುದನ್ನು ತಿಳಿಸಿಕೊಡಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ಕೇಂದ್ರ ಇಂಧನ ಮತ್ತು ಭಾರಿ ಕೈಗಾರಿಕೆಗಳ ರಾಜ್ಯ ಖಾತೆ ಸಚಿವ, ಕೃಷ್ಣನ್‌ ಪಾಲ್‌ ಗುರ್ಜಾರ್‌  ‘ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲ ಉದ್ದೇಶ, ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸುವುದಾಗಿದೆ. ಸರ್ಕಾರ ಬಡವರ ಕಲ್ಯಾಣಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮ ಪ್ರಚಾರ ಮಾಡಲಾಗಿದೆ. ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲಾಗುತ್ತಿದೆ. ದೇಶದಲ್ಲಿ ಮೋದಿ ಗ್ಯಾರಂಟಿ ಗಾಡಿ ಓಡುತ್ತಿದೆ. ಜನವರಿ 25 ರವರೆಗೆ ಪ್ರತಿ ಗ್ರಾಮ, ಪಟ್ಟಣದಲ್ಲಿ ಸಂಚರಿಸಿ ಯೋಜನೆಗಳ ಪ್ರಚಾರ ಕೈಗೊಳ್ಳಲಿದೆ.

ದೇಶದಲ್ಲಿ ಮೋದಿ ಗ್ಯಾರಂಟಿ ಬಗ್ಗೆ ಮಾತ್ರ ಜನರಿಗೆ ವಿಶ್ವಾಸವಿದೆ. ಉಳಿದ ಗ್ಯಾರಂಟಿಗಳ ಇಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಪ್ರಗತಿ ಎನ್ ಡಿಎ ಸರ್ಕಾರದ ಗುರಿ. ಕಳೆದ ಒಂಬತ್ತೂವರೆ ವರ್ಷದಲ್ಲಿ. ಕೇಂದ್ರದಿಂದ ನಾಲ್ಕು ಕೋಟಿ ಮನೆ ನಿರ್ಮಾಣ ಮಾಡಿದೆ. ಹನ್ನೊಂದು ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ಜಾರಿಯಾಗಿದೆ. 80 ಕೋಟಿ ಜನರಿಗೆ ತಲಾ ಐದು ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ದೇಶದಲ್ಲಿ ಈಗ ಸ್ಟಾರ್ಟಪ್ ಗಳ ಸಂಖ್ಯೆ 1.5 ಲಕ್ಷಕ್ಕೆ ಏರಿಕೆಯಾಗಿದೆ. ಮುಂದಿನ ಐದು ವರ್ಷದಲ್ಲಿ ಭಾರತದ ಅರ್ಥವ್ಯವಸ್ಥೆ ಪ್ರಪಂಚದ ಮೂರು ಅಗ್ರ ಅರ್ಥವ್ಯವಸ್ಥೆಗಳಲ್ಲಿ ಒಂದಾಗಲಿದೆ ಭಾರತದಲ್ಲಿ ಜಿಡಿಪಿ ದರ 6.7 ನಿಂದ 7.6 ಗೆ ಏರಿಕೆಯಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ:ವಿಕಸಿತ ಭಾರತ ಸಂಕಲ್ಪ ಯಾತ್ರೆ: ಪ್ರಲ್ಹಾದ್ ಜೋಶಿ ಭಾಷಣದ ವೇಳೆ ರಾಜ್ಯ ಸರ್ಕಾರದ ವಿರುದ್ಧ ರೈತನ ಆಕ್ರೋಶ

ಅಂದಹಾಗೆ ಸಕ್ಕರೆ ನಗರಿ ಮಂಡ್ಯದಲ್ಲಿ ನವೆಂಬರ್ 29 ರಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಆರಂಭಗೊಂಡಿದ್ದು, ಪ್ರತಿನಿತ್ಯ ನಾಲ್ಕು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎರಡು ವಾಹನಗಳ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸಿಕೊಡಲಾಗುತ್ತಿದೆ. ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಯೋಜನೆಗಳ ಬಗ್ಗೆ ತಿಳಿಸಿ ಕೊಡಲಾಗುತ್ತಿದೆ. ಅಧಿಕಾರಿಗಳು ಸಹ ಕೇಂದ್ರ ಸರ್ಕಾರದ ಯೋಜನೆಗಳ ಸಂಪೂರ್ಣ ಮಾಹಿತಿ ನೀಡುತ್ತಿದ್ದಾರೆ. ಹೇಗೆಲ್ಲ ಯೋಜನೆಗಳನ್ನ ಸದ್ಬಳಕೆ ಮಾಡಿಕೊಳ್ಳಬಹುದು ಎಂದು ತಿಳಿಸುತ್ತಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಅಲ್ಲದೆ ಸ್ಥಳದಲ್ಲೇ ಯಾರಿಗಾದರೂ ಯೋಜನೆಗಳ ಅನುಮಾನ ಇದ್ದರೇ ಅದನ್ನು ಕೂಡ ಸರಿಪಡಿಸುತ್ತಿದ್ದಾರೆ. ಇನ್ನು ಇಂದು ಸಹ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಯೋಜನೆ ಬಗ್ಗೆ ಮಾಹಿತಿ ನೀಡಲಾಯಿತು. ಕೇಂದ್ರ ಇಂಧನ ಮತ್ತು ಭಾರಿ ಕೈಗಾರಿಕೆಗಳ ರಾಜ್ಯ ಖಾತೆ ಸಚಿವ ಕೃಷ್ಣನ್‌ ಪಾಲ್‌ ಗುರ್ಜಾರ್‌, ವಿಪಕ್ಷ ನಾಯಕ ಆರ್ ಅಶೋಕ್ ಕೂಡ ಭಾಗಿಯಾಗಿದ್ದರು. ಇದೇ ವೇಳೆ ಅಧಿಕಾರಿಗಳು ಕೂಡ ಹಲವು ಮಾಹಿತಿಗಳನ್ನ ಜನರಿಗೆ ತಿಳಿಸಿಕೊಟ್ಟರು. ಒಟ್ಟಾರೆ ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸುವ ಮೂಲಕ, ಕೇಂದ್ರ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಕೈಗೊಂಡಿರೊ ಕಾರ್ಯಕ್ರಮ ಪ್ರಚಾರ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ