ಬಾಗಲಕೋಟೆ ಸೇರಿದಂತೆ 6 ಜಿಲ್ಲೆಗಳಲ್ಲಿ ಯಶಸ್ವಿಯಾದ ವಿಕಸಿತ ಭಾರತ ಸಂಕಲ್ಪ ಯಾತ್ರೆ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 18, 2023 | 8:36 PM

ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ , ಬಳ್ಳಾರಿ, ಗದಗ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಯಶಸ್ವಿಯಾಗಿದೆ. ಕುಡಿಯುವ ನೀರು, ವಿದ್ಯುತ್ ಸಂಪರ್ಕ, ರೈತರಿಗೆ ವಿವಿಧ ಸೌಲಭ್ಯಗಳು, ಕೈಗಾರಿಕಾ ಕ್ಷೇತ್ರದ ಬೆಳವಣಿಗೆ ಸೌಕರ್ಯಗಳು, ಕ್ರೀಡಾಪಟುಗಳಿಗೆ ವಿಶೇಷ ಸವಲತ್ತುಗಳು ಹೀಗೆ ಎಲ್ಲಾ ಕ್ಷೇತ್ರಗಳ ಬಗ್ಗೆ ವಿಶೇಷ ಕಾಳಜಿಯಿಂದ ದೇಶದ ಸಮಗ್ರ ಬದಲಾವಣೆ ಸಾಧ‍್ಯ.

ಬಾಗಲಕೋಟೆ ಸೇರಿದಂತೆ 6 ಜಿಲ್ಲೆಗಳಲ್ಲಿ ಯಶಸ್ವಿಯಾದ ವಿಕಸಿತ ಭಾರತ ಸಂಕಲ್ಪ ಯಾತ್ರೆ
ವಿಕಸಿತ ಭಾರತ ಸಂಕಲ್ಪ ಯಾತ್ರೆ
Follow us on

ಹುಬ್ಬಳ್ಳಿ, ಡಿಸೆಂಬರ್​​ 18: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ 49 ರಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ (Vikasita Bharat Sankalpa Yatra) ಕಾರ್ಯಕ್ರಮಕ್ಕೆ ಕೇಂದ್ರ ಕ್ಷೇತ್ರದ ಶಾಸಕ ಮಹೇಶ ತೆಂಗಿನಕಾಯಿ ಅವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದ್ದಾರೆ. ಮಹಾಪೌರರಾದ ವೀಣಾ ಭಾರದ್ವಾಡ ಮಾತನಾಡಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ವಿವರಿಸಿ ಯಾರಿಗೆ ಇದರ ಲಾಭ ದೊರೆತಿಲ್ಲ ಅವರು ಇಲ್ಲಿಯೇ ಸಾಲದ ಅರ್ಜಿ ಪಡೆದುಕೊಳ್ಳಬೇಕೆಂದು ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ವಾಜಗೋಡ ಪಂಚಾಯಿತದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದ್ದು, ಸಿದ್ದಾಪುರ ವಿಜಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ಶಿವಶಂಕರ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಕುಮಟಾ ತಾಲೂಕಿನ ಕುಜಲ್ಲಿ ಗ್ರಾಮ ಪಂಚಾಯತಿಯಲ್ಲಿ ಯಶಸ್ವಿಯಾಗಿ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ; ಇಲ್ಲಿದೆ ವಿವರ

ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಪ್ರಭಂದಕರು ಮಾತನಾಡಿ ಹಲವಾರು ಪ್ರಧಾನ ಮಂತ್ರಿ ಯೋಜನೆಗಳ ಕುರಿತು ಮಾಹಿತಿ ನೀಡಿದ್ದು, ಅದರ ಪ್ರಯೋಜನವನ್ನು ಪಡೆಯಲು ತಿಳಿಸಿದ್ದಾರೆ.

ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರಮುಖ ಪಾತ್ರ ವಹಿಸಲಿದೆ ಎಂದು ಮಾಜಿ ಸಚಿವ ಹಾಗೂ ನರಗುಂದ ಶಾಸಕ ಸಿಸಿ ಪಾಟೀಲ ಗದಗದಲ್ಲಿ ಹೇಳಿದ್ದಾರೆ. ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಕಾಶವಾಣಿ ಜೊತೆ ಮಾತನಾಡಿದ ಫಲಾನುಭವಿಗಳು ಭಾರತ ಸರ್ಕಾರದ ಯೋಜನೆಗಳಿಂದ ನಾವು ಟೈಲರಿಂಗ್, ವಿದ್ಯುತ್ ರಿಪೇರಿ, ಗಾರ್ಮೆಂಟ್ ನಡೆಸಲು ಸಾಲ ಪಡೆದಿದ್ದೇವೆ ಎಂದಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ಹೂವಿನಹಡಗಲಿ ತಾಲೂಕಿನ ನವಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜರುಗಿದ್ದು, ನವಲಿ ಗ್ರಾಮ ಪಂಚಾಯಿತಿಯ ಪಿಡಿಓ ಮೊಹಮ್ಮದ್ ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು. ಇಂಡಿ ತಾಲೂಕಿನ ಅಗರಖೇಡ, ಅಥರ್ಗಾ ಹಾಗೂ ಮುದ್ದೇಬಿಹಾಳ ತಾಲೂಕಿನ ಆಲೂರು ಹಾಗೂ ಹುಲ್ಲೂರು ಗ್ರಾಮಗಳಲ್ಲಿ ಯಶಸ್ವಿಯಾಗಿ ಜರುಗಿದೆ.

ಇದನ್ನೂ ಓದಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ: ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯ ಕಿರುಪುಸ್ತಕ ವಿತರಣೆ

ದೇಶದ ಸಮಸ್ತ ಜನರ ಅಭಿವೃದ್ಧಿಯನ್ನು ಮೂಲ ಉದ್ದೇಶವಾಗಿಟ್ಟುಕೊಂಡು ಜನಪರವಾದ ಹಲವು ಯೋಜನೆಗಳನ್ನು ಜಾರಿಗೊಳಿಸಿ ಬಡವರ ಪರ ಸರಕಾರವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಪಿ.ಎಚ್. ಪೂಜಾರ್ ಬಾಗಲಕೋಟೆಯಲ್ಲಿ ಹೇಳಿದ್ದಾರೆ.

ಮನೆಮನೆಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ರೈತರಿಗೆ ವಿವಿಧ ಸೌಲಭ್ಯಗಳು, ಕೈಗಾರಿಕಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳಿಗೆ ವಿಶೇಷವಾದ ಹತ್ತು ಕ್ಷೇತ್ರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.