AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಮನೆಮನೆಗೆ ತೆರಳಿ ಕೊವಿಡ್ ಪರೀಕ್ಷೆ ಮಾಡಲಿದ್ದಾರೆ ಆರೋಗ್ಯ ಸಿಬ್ಬಂದಿ

ಜಿಲ್ಲೆಯಲ್ಲಿ ಕೊವಿಡ್​ನಿಂದ ಉಂಟಾಗುತ್ತಿರುವ ಸಾವಿನ ಸಂಖ್ಯೆಯನ್ನು ಶೂನ್ಯಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಈ ಗುರಿ ಸಾಧಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಉತ್ತರ ಕನ್ನಡ: ಮನೆಮನೆಗೆ ತೆರಳಿ ಕೊವಿಡ್ ಪರೀಕ್ಷೆ ಮಾಡಲಿದ್ದಾರೆ ಆರೋಗ್ಯ ಸಿಬ್ಬಂದಿ
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on: May 31, 2021 | 10:50 PM

ಕಾರವಾರ: ಕೊರೊನಾ ಸೋಂಕು ಹರಡುವಿಕೆ ತಡೆಯಲು ಉತ್ತರ ಕನ್ನಡ ಜಿಲ್ಲೆಯಲ್ಲಿ ಮನೆಮನೆಗೆ ತೆರಳಿ ಜ್ವರದ ಸರ್ವೆ ನಡೆಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ತಿಳಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಹಳ್ಳಿಗರ ಸರ್ವೆ ನಡೆಸಲಿದ್ದಾರೆ. ಕೆಮ್ಮು, ಜ್ವರ, ನೆಗಡಿ ಲಕ್ಷಣಗಳಿದ್ದರೆ ಸ್ಥಳದಲ್ಲೇ ಆ್ಯಂಟಿಜೆನ್​ ಟೆಸ್ಟ್ ನಡೆಸಲಾಗುವುದು. ಮುಂದೆ ಕೊರೊನಾ ಬರುವ ಲಕ್ಷಣಗಳಿದ್ದರೆ ಆರ್​ಟಿಪಿಸಿಆರ್ ಪರೀಕ್ಷೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೊರೊನಾ ಪೀಡಿತರು ದಾಖಲಾಗುವ ಸಂಖ್ಯೆ ಇಳಿಕೆಯಾಗಿದ್ದು, ಮರಣ ಪ್ರಮಾಣವೂ ಇಳಿಕೆಯಾಗಿದೆ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಯಾರೂ ಸಹ ಮುಚ್ಚಿಟ್ಟುಕೊಳ್ಳಬೇಡಿ. ಸರ್ಕಾರದ ಮೂಲಕವೇ ಬೆಡ್ ವಿತರಣೆ​ ವ್ಯವಸ್ಥೆ ಮಾಡಲಾಗುವುದು. ಜಿಲ್ಲೆಯಲ್ಲಿ ಕೊವಿಡ್​ನಿಂದ ಉಂಟಾಗುತ್ತಿರುವ ಸಾವಿನ ಸಂಖ್ಯೆಯನ್ನು ಶೂನ್ಯಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಈ ಗುರಿ ಸಾಧಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಉತ್ತರ ಕನ್ನಡದಲ್ಲಿ ಕಡಿಮೆಯಿಲ್ಲ ಸೋಂಕಿನ ಪ್ರಮಾಣ ಉತ್ತರ ಕನ್ನಡ ಕೊವಿಡ್ ಸೋಂಕಿನ ಪಾಸಿಟಿವಿಟಿ ದರದಲ್ಲಿ ದೇಶಮಟ್ಟದಲ್ಲಿ ಸ್ಥಾನ ಗಿಟ್ಟಿಸಿತ್ತು. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉತ್ತರ ಕನ್ನಡಕ್ಕೆ ಸೋಂಕು ಹರಡದಂತೆ ತಡೆಯಲು ಸದ್ಯದ ಮಟ್ಟಿಗೆ ಅಗತ್ಯ ಇರುವ ಕ್ರಮಗಳನ್ನು ಬಿಗಿಯಾಗಿಯೇ ಕೈಗೊಂಡಿದ್ದಾರೆ. ಮೇ 16ರಿಂದ ಜಿಲ್ಲೆಯ ರಸ್ತೆಗಳಲ್ಲಿ ಯಾವುದೇ ಖಾಸಗಿ ವಾಹನ ಓಡಾಡಬಾರದು ಎಂದು ಆದೇಶಿಸಿದ್ದಾರೆ. ಅಲ್ಲದೇ ಅವರ ಸ್ವಂತ ವಿಧಾನಸಭಾ ಕ್ಷೇತ್ರ ಯಲ್ಲಾಪುರದ ಪ್ರತಿ ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲೂ ಸ್ವಂತ ಖರ್ಚಿನಲ್ಲಿ ಹೆಬ್ಬಾರ್ ಕೊವಿಡ್ ಹೆಲ್ಪ್​ಲೈನ್ ಆರಂಭಿಸಿದ್ದಾರೆ. ಈ ಸೇವೆ ಕೊವಿಡ್ ಸೋಂಕಿತರ ಸಕಲ ಆಗುಹೋಗುಗಳನ್ನು ಉಚಿತವಾಗಿ ನೋಡಿಕೊಳ್ಳಲಿದೆ. ಜತೆಗೆ 40 ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿದ್ದರೆ ಕಂಟೇನ್ಮೆಂಟ್ ಝೋನ್ ಮಾಡುವುದು, ಮದುವೆಗಳಿಗೆ ನಿಯಂತ್ರಣ ಹೇರುವುದು ಸೇರಿದಂತೆ ಮುಂತಾದ ಆದೇಶಗಳನ್ನು ಸಚಿವ ಶಿವರಾಮ್ ಹೆಬ್ಬಾರ್ ಹೊರಡಿಸಿದ್ದಾರೆ.

ಇದನ್ನೂ ಓದಿ:  Karnataka Covid Update: ಕರ್ನಾಟಕದಲ್ಲಿ ಇಂದು ಒಂದೇ ದಿನ 16,604 ಜನರಿಗೆ ಕೊವಿಡ್ ಸೋಂಕು ದೃಢ, ಬೆಂಗಳೂರಿನಲ್ಲಿ 3,992 ಜನರಿಗೆ ಸೋಂಕು ಪತ್ತೆ

ಕೊವಿಡ್​ ಆಸ್ಪತ್ರೆಯಲ್ಲಿ ಡ್ಯಾನ್ಸ್​ ಮಾಡಿದ ನಟಿ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ; ರೋಗಿಗಳು ಫುಲ್​ ಖುಷ್

(Village Covid Survey will be Conducted in Uttara Kannada district to stop Corona spread)

ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ