AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಗ್ರಾಮ ಕುಡಿಯುವ ನೀರು ಯೋಜನೆ ಅಡಿ ಸಿಗ್ತಿದೆ ಕಲುಷಿತ ನೀರು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ಮಂಗಳೂರು: ಶುದ್ಧ ನೀರಿಗಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಲಾಗಿದೆ. ಆದ್ರೆ ಜನರಿಗೆ ಪೂರೈಕೆ ಆಗುತ್ತಿರೋದು ಕಲುಷಿತಗೊಂಡಿರುವ ನೀರು. ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಾಣವಾಗಿರುವ ಮಂಗಳೂರಿನ ಮರವೂರು ಡ್ಯಾಂನಿಂದ 9 ಗ್ರಾಮಗಳಿಗೆ ಕಲುಷಿತ ನೀರು ಪೂರೈಕೆ ಆಗುತ್ತಿದೆ. ನೀರು ಕುಡಿದ 9 ಗ್ರಾಮದ ಜನರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಜಲತ್ಯಾಜ್ಯ ಘಟಕದವರ ನಿರ್ಲಕ್ಷ್ಯದಿಂದ ನದಿಗೆ ವಿಷಕಾರಿ ನೀರು ಸೇರುತ್ತಿದೆ. ಹೀಗಾಗಿ ಆರೋಗ್ಯ ಸಮಸ್ಯೆ ಉಂಟಾಗಿದೆ ಎನ್ನಲಾಗುತ್ತಿದೆ. ಮಂಗಳೂರಿನ ಡ್ರೈನೇಜ್ 2ನೇ ಹಂತದ ಸಂಸ್ಕರಣಾ ನೀರು ನದಿಗೆ ಸೇರುತ್ತಿದೆ. […]

ಬಹುಗ್ರಾಮ ಕುಡಿಯುವ ನೀರು ಯೋಜನೆ ಅಡಿ ಸಿಗ್ತಿದೆ ಕಲುಷಿತ ನೀರು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 11, 2019 | 3:26 PM

Share

ಮಂಗಳೂರು: ಶುದ್ಧ ನೀರಿಗಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಲಾಗಿದೆ. ಆದ್ರೆ ಜನರಿಗೆ ಪೂರೈಕೆ ಆಗುತ್ತಿರೋದು ಕಲುಷಿತಗೊಂಡಿರುವ ನೀರು. ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಾಣವಾಗಿರುವ ಮಂಗಳೂರಿನ ಮರವೂರು ಡ್ಯಾಂನಿಂದ 9 ಗ್ರಾಮಗಳಿಗೆ ಕಲುಷಿತ ನೀರು ಪೂರೈಕೆ ಆಗುತ್ತಿದೆ.

ನೀರು ಕುಡಿದ 9 ಗ್ರಾಮದ ಜನರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಜಲತ್ಯಾಜ್ಯ ಘಟಕದವರ ನಿರ್ಲಕ್ಷ್ಯದಿಂದ ನದಿಗೆ ವಿಷಕಾರಿ ನೀರು ಸೇರುತ್ತಿದೆ. ಹೀಗಾಗಿ ಆರೋಗ್ಯ ಸಮಸ್ಯೆ ಉಂಟಾಗಿದೆ ಎನ್ನಲಾಗುತ್ತಿದೆ. ಮಂಗಳೂರಿನ ಡ್ರೈನೇಜ್ 2ನೇ ಹಂತದ ಸಂಸ್ಕರಣಾ ನೀರು ನದಿಗೆ ಸೇರುತ್ತಿದೆ.

ಹಿಂದೆ ಪಿಲಿಕುಳ ನಿಸರ್ಗದಾಮಕ್ಕೆ ಪೂರೈಕೆ ಮಾಡಲಾಗುತ್ತಿದ್ದ ನೀರು ಅಲ್ಲಿನ ಗಿಡಗಳಿಗೆ ಮತ್ತು ಪ್ರಾಣಿಗಳಿಗೆ ಬಳಕೆ ಆಗುತ್ತಿತ್ತು. ನಿಸರ್ಗದಾಮದಲ್ಲಿ ಗಿಡ ಮತ್ತು ಪ್ರಾಣಿಗಳಿಗೆ ನೀರು ಸೂಕ್ತವಾಗಿರಲಿಲ್ಲ. ಗಿಡಗಳು ಒಣಗಿ ಹೋಗಿ, ಪ್ರಾಣಿಗಳಿಗೆ ಚರ್ಮರೋಗ ಕಾಣಿಸಿಕೊಂಡಿತ್ತು.

ಈ ಕಾರಣಕ್ಕೆ ಅಧಿಕಾರಿಗಳು ತ್ಯಾಜ್ಯ ನೀರನ್ನ ಪಲ್ಗುಣಿ ನದಿಗೆ ಹರಿಸಿದ್ದಾರೆ. ಬಜಪೆ, ಮೂಡಶೆಡ್ಡೆ, ಕಾವೂರು, ಮರಕಡ, ಮರವೂರು, ಎಕ್ಕಾರು, ಜೋಕಟ್ಟೆ, ಬಾಳಾ, ಸೂರಿಂಜೆ ಸೇರಿದಂತೆ 9 ಗ್ರಾಮದ ಜನರು ಈ ಕಲುಷಿತ ನೀರನ್ನು ಕುಡಿದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಗ್ರಾಮದ ಜನರು ಆಕ್ರೋಶ ಹೊರ ಹಾಕಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ