ಶಹಾಪುರದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹೊಡೆದ ಗ್ರಾಮಸ್ಥರು
ಕುಡಿದ ಮತ್ತಿನಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬರಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ.
ಯಾದಗಿರಿ: ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದ ವ್ಯಕ್ತಿಯನ್ನು ಮರಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ ಘಟನೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜೀಲಾನಿಸಾಬ್ ಎಂಬಾತ ಕುಡಿದ ಮತ್ತಿನಲ್ಲಿ ಕಳೆದ ಶನಿವಾರ ರಾತ್ರಿ ವೇಳೆ ಒಂಟಿ ಮಹಿಳೆಯ ಮನೆಗೆ ನುಗ್ಗಿದರು. ನಂತರ ಈ ಮಹಿಳೆ ಪೊಲೀಸರ ಬಳಿ ದೂರು ದಾಖಲಿಸಿದ್ದರು. ವಿಷಯ ತಿಳಿದ ಗ್ರಾಮಸ್ಥರು ಜೀಲಾನಿಸಾಬ್ನನ್ನು ಮರಕ್ಕೆ ಕಟ್ಟಿ ಹೊಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸದ್ಯ ವೈರಲ್ ಆಗಿದೆ.
ಅಪ್ರಾಪ್ತೆ ಮೇಲೆ ಸರಣಿ ಅತ್ಯಾಚಾರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಧರಣಿ