ಶಹಾಪುರದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹೊಡೆದ ಗ್ರಾಮಸ್ಥರು

ಕುಡಿದ ಮತ್ತಿನಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬರಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ.

ಶಹಾಪುರದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹೊಡೆದ ಗ್ರಾಮಸ್ಥರು
ಮರಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು
Edited By:

Updated on: Feb 06, 2021 | 1:16 PM

ಯಾದಗಿರಿ: ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದ ವ್ಯಕ್ತಿಯನ್ನು ಮರಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ ಘಟನೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೀಲಾನಿಸಾಬ್ ಎಂಬಾತ ಕುಡಿದ ಮತ್ತಿನಲ್ಲಿ ಕಳೆದ ಶನಿವಾರ ರಾತ್ರಿ ವೇಳೆ ಒಂಟಿ ಮಹಿಳೆಯ ಮನೆಗೆ ನುಗ್ಗಿದರು. ನಂತರ ಈ ಮಹಿಳೆ ಪೊಲೀಸರ ಬಳಿ ದೂರು  ದಾಖಲಿಸಿದ್ದರು. ವಿಷಯ ತಿಳಿದ ಗ್ರಾಮಸ್ಥರು ಜೀಲಾನಿಸಾಬ್​ನನ್ನು ಮರಕ್ಕೆ ಕಟ್ಟಿ ಹೊಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸದ್ಯ ವೈರಲ್ ಆಗಿದೆ.

ಅಪ್ರಾಪ್ತೆ ಮೇಲೆ ಸರಣಿ ಅತ್ಯಾಚಾರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಧರಣಿ