AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಗುಂಪು ಸೇರದಂತೆ ಹಾವೇರಿ ಗ್ರಾಮದಲ್ಲೊಂದು ಹೊಸ ಐಡಿಯಾ

ಜೂನ್ ಹೊತ್ತಿಗೆ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತದೆ. ಆದರೆ ಹಳ್ಳಿಗಳಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತದೆ. ಹೀಗಾಗಿ ಗ್ರಾಮಗಳ ಜನರು ಈ ಬಗ್ಗೆ ಹೆಚ್ಚು ಜವಾಬ್ದಾರಿಯಿಂದ ವರ್ತಿಸಬೇಕು. ಸರ್ಕಾರವೂ ಕೂಡಾ ರಾಜ್ಯದ ಗ್ರಾಮಗಳತ್ತ ಹೆಚ್ಚು ಗಮನಹರಿಸಬೇಕು ಎಂದು ಸಲಹಾ ತಜ್ಞರು ತಿಳಿಸಿದ್ದಾರೆ.

ಜನರ ಗುಂಪು ಸೇರದಂತೆ ಹಾವೇರಿ ಗ್ರಾಮದಲ್ಲೊಂದು ಹೊಸ ಐಡಿಯಾ
ಕಟ್ಟೆಗಳಿಗೆ ಎಣ್ಣೆ ಹಚ್ಚುತ್ತಿರುವ ಗ್ರಾಮಸ್ಥರು
Follow us
sandhya thejappa
|

Updated on: May 23, 2021 | 8:38 AM

ಹಾವೇರಿ: ರಾಜ್ಯದಾದ್ಯಂತ ಕೊರೊನಾ ಎರಡನೇ ಬಂದು ಅಪ್ಪಳಿಸಿದೆ. ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಸೋಂಕನ್ನು ನಿಯಂತ್ರಿಸಲು ಪ್ರತಿಯೊಬ್ಬರು ಕಠಿಣ ನಿಯಮಗಳನ್ನು ಪಾಲಿಸಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಆದರೆ ಈ ಬಗ್ಗೆ ಜನರಿಗೆ ಇನ್ನು ತಿಳುವಳಿಕೆ ಮೂಡಿಲ್ಲ. ಬೇಕಾ ಬಿಟ್ಟಿಯಾಗಿ ಓಡಾಡುತ್ತಾರೆ. ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿರ್ಲಕ್ಷ್ಯದಿಂದ ವರ್ತಿಸುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲೊಂದು ಗ್ರಾಮ ಹೊಸ ಐಡಿಯಾವನ್ನು ಕಂಡುಕೊಂಡಿದೆ.

ಜೂನ್ ಹೊತ್ತಿಗೆ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತದೆ. ಆದರೆ ಹಳ್ಳಿಗಳಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತದೆ. ಹೀಗಾಗಿ ಗ್ರಾಮಗಳ ಜನರು ಈ ಬಗ್ಗೆ ಹೆಚ್ಚು ಜವಾಬ್ದಾರಿಯಿಂದ ವರ್ತಿಸಬೇಕು. ಸರ್ಕಾರವೂ ಕೂಡಾ ರಾಜ್ಯದ ಗ್ರಾಮಗಳತ್ತ ಹೆಚ್ಚು ಗಮನಹರಿಸಬೇಕು ಎಂದು ಸಲಹಾ ತಜ್ಞರು ತಿಳಿಸಿದ್ದಾರೆ. ಆದರೆ ಕೆಲ ಜಿಲ್ಲೆಯ ಗ್ರಾಮದ ಜನರು ಕೊರೊನಾ ಬಗ್ಗೆ ತೀರಾ ಅಸಡ್ಡೆಯಾಗಿ ವರ್ತಿಸುತ್ತಿದ್ದಾರೆ. ಇದರಿಂದ ಜಿಲ್ಲೆಯ ಹಾನಗಲ್ ತಾಲೂಕಿನ ಮಾರನಬೀಡ ಗ್ರಾಮದ ಜನರು ಹೊಸ ಐಡಿಯಾವನ್ನು ಕಂಡು ಹಿಡಿದಿದ್ದಾರೆ. ಸಾಮಾಜಿಕ ಅಂತರ ಮರೆತು ಮೋರಿ, ಕಟ್ಟೆಗಳ ಮೇಲೆ ಗುಂಪು ಗುಂಪಾಗಿ ಕೂತು ಮಾತನಾಡುವುದನ್ನು ತಪ್ಪಿಸಲು ಮಾರನಬೀಡ ಗ್ರಾಮಸ್ಥರು ಗ್ರಾಮದಲ್ಲಿನ ಅಂಗಡಿಗಳು ಹಾಗೂ ಜನರ ಗುಂಪು ಕುಳಿತುಕೊಳ್ಳುವ ಸಾರ್ವಜನಿಕ ಸ್ಥಳಗಳಲ್ಲಿ ಆಯಲ್ ಸುರಿದಿದ್ದಾರೆ. ಇದರಿಂದ ಸುಖಾ ಸಮ್ಮನೆ ಅಲ್ಲಲ್ಲಿ ಕೂತು ಮಾತನಾಡಲು ಸಾಧ್ಯವಾಗಲ್ಲ.

ತರಕಾರಿ ಖರೀದಿಗೆ ಮುಗುಬಿದ್ದ ಜನ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಮೇ 21ರಿಂದ ಸಂಪೂರ್ಣ ಲಾಕ್​ಡೌನ್​ ಘೋಷಿಸಿದ್ದರು. ಇವತ್ತು ಮಾತ್ರ ಬೆಳಿಗ್ಗೆ 6 ಗಂಟೆಯಿಂದ ಹತ್ತು ಗಂಟೆಯವರೆಗೆ ತರಕಾರಿ ಮತ್ತು ದಿನಸಿ ಅಂಗಡಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವಕಾಶ ನೀಡಿದ್ದರು. ಹೀಗಾಗಿ ತರಕಾರಿ ಮತ್ತು ದಿನಸಿ ಅಂಗಡಿಗಳಿಗೆ ಜನ ಮುಗಿಬಿದ್ದಿದ್ದಾರೆ. ಬೆಳಿಗ್ಗೆ ಹತ್ತು ಗಂಟೆ ನಂತರ ಮೇ 25ರ ಬೆಳಿಗ್ಗೆ 6 ಗಂಟೆಯವರೆಗೆ ಮತ್ತೆ ಸಂಪೂರ್ಣ ಲಾಕ್​ಡೌನ್​ ಆಗಲಿದೆ.

ಸಂಪೂರ್ಣ ಲಾಕ್​ಡೌನ್​ ವೇಳೆ ಔಷಧಿ, ಪೆಟ್ರೋಲ್, ಆ್ಯಂಬುಲೆನ್ಸ್, ಆಕ್ಸಿಜನ್ ಉತ್ಪಾದನಾ ಘಟಕ, ಬೀಜ ಮತ್ತು ರಸಗೊಬ್ಬರ ಮಾರಾಟ, ಅಡುಗೆ ಅನೀಲ ಸಿಲಿಂಡರ್ಗಳ ಪೂರೈಕೆ, ಪಡಿತರ ಅಂಗಡಿಗಳು ಸೇರಿದಂತೆ ಕೆಲವೇ ಕೆಲವು ಸೇವೆಗಳಿಗೆ ಅವಕಾಶವನ್ನು ನೀಡಿದ್ದಾರೆ. ದೈಹಿಕ ಅಂತರ ಮರೆತು ಜನರು ದಿನಸಿ ವಸ್ತುಗಳನ್ನು ಖರೀದಿ ಮಾಡುತ್ತಿರುವ ದೃಶ್ಯ ನಗರದ ಲಾಲ್ ಬಹಾದ್ದೂರ್ ಶಾಸ್ತ್ರಿ ಮಾರ್ಕೆಟ್​ನಲ್ಲಿ ಕಂಡುಬಂದಿದೆ.

ಇದನ್ನೂ ಓದಿ

ಜಿಲ್ಲೆ ಜಿಲ್ಲೆಗಳಲ್ಲಿ ಬ್ಲ್ಯಾಕ್ ಫಂಗಸ್ ಆರ್ಭಟ, ಹೆಚ್ಚಾಗುತ್ತಿದೆ ಪ್ರಕರಣಗಳ ಸಂಖ್ಯೆ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು

(Villagers of haveri got one new idea for maintain social distance)

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ