ಗದಗದ ಲಖಮಾಪುರ ಗ್ರಾಮಸ್ಥರಿಗೆ ಮತ್ತೆ ಎದುರಾದ ಪ್ರವಾಹ ಭೀತಿ; ಸಚಿವ ಸಿ.ಸಿ.ಪಾಟೀಲ್ ವಿರುದ್ಧ ಕಿಡಿ

ಕ್ಷೇತ್ರದ ಶಾಸಕರೂ ಆದ ಸಚಿವ ಸಿ.ಸಿ.ಪಾಟೀಲ್ ಸೇತುವೆ ನಿರ್ಮಾಣ ಮಾಡುವಂತೆ ಗ್ರಾಮಸ್ಥರಿಗೆ ಭರವಸೆಯನ್ನು ನೀಡಿದ್ದರು. ಆದರೆ ಭೂಮಿ ಪೂಜೆ ಮಾಡಿ ಹೋದ ಸಚಿವರು ಈವರೆಗೂ ಈಚೆ ಸುಳಿಯಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ನಮ್ಮ ಬಗ್ಗೆ ಯಾಕೇ ಮಲತಾಯಿ ಧೋರಣೆ ಅಂತ ಕಿಡಿಕಾರಿದ್ದಾರೆ.

ಗದಗದ ಲಖಮಾಪುರ ಗ್ರಾಮಸ್ಥರಿಗೆ ಮತ್ತೆ ಎದುರಾದ ಪ್ರವಾಹ ಭೀತಿ; ಸಚಿವ ಸಿ.ಸಿ.ಪಾಟೀಲ್ ವಿರುದ್ಧ ಕಿಡಿ
ಗ್ರಾಮಸ್ಥರ ಆಕ್ರೋಶ
Follow us
TV9 Web
| Updated By: sandhya thejappa

Updated on: Jun 20, 2021 | 12:02 PM

ಗದಗ: ರಾಜ್ಯದ ಹಲವು ಕಡೆ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗದಗದ ನರಗುಂದ ತಾಲೂಕಿನ ಲಖಮಾಪುರ ಗ್ರಾಮಸ್ಥರಿಗೆ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಸೇತುವೆ ನಿರ್ಮಾಣದ ಭರವಸೆಯನ್ನು ಈಡೇರಿಸದ ಹಿನ್ನೆಲೆ ಸಚಿವ ಸಿ.ಸಿ.ಪಾಟೀಲ್ ವಿರುದ್ಧ ಲಖಮಾಪುರ ಗ್ರಾಮಸ್ಥರು ಕಿಡಿಕಾರಿದ್ದಾರೆ. 2019, 2020ರಲ್ಲಿ ಲಖಮಾಪುರ ಗ್ರಾಮ ಭಾರಿ ಪ್ರವಾಹಕ್ಕೆ ಸಿಲುಕಿತ್ತು. ಕಳೆದ ವರ್ಷವಷ್ಟೇ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಆದರೆ ಭರವಸೆ ಭರವಸೆಯಾಗೆ ಉಳಿದಿದೆ ಹೊರತು ಯಾವುದೇ ಪ್ರಯೋಜನವಾಗಿಲ್ಲ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದ ಶಾಸಕರೂ ಆದ ಸಚಿವ ಸಿ.ಸಿ.ಪಾಟೀಲ್ ಸೇತುವೆ ನಿರ್ಮಾಣ ಮಾಡುವಂತೆ ಗ್ರಾಮಸ್ಥರಿಗೆ ಭರವಸೆಯನ್ನು ನೀಡಿದ್ದರು. ಆದರೆ ಭೂಮಿ ಪೂಜೆ ಮಾಡಿ ಹೋದ ಸಚಿವರು ಈವರೆಗೂ ಈಚೆ ಸುಳಿಯಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ನಮ್ಮ ಬಗ್ಗೆ ಯಾಕೇ ಮಲತಾಯಿ ಧೋರಣೆ ಅಂತ ಕಿಡಿಕಾರಿದ್ದಾರೆ.

ಈ ಬಾರಿ ಪ್ರವಾಹ ಬಂದರೆ ಯಾವುದೇ ಕಾರಣಕ್ಕೂ ಕಾಳಜಿ ಕೇಂದ್ರಕ್ಕೆ ಹೋಗಲ್ಲ ಎಂದು ನಿರ್ಧರಿಸಿರುವ ಹಿರಿಯರು ಮತ್ತು ಯುವಕರು, ಜಿಲ್ಲಾಡಳಿತ ಹಾಗೂ ಸಚಿವರು ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಲಖಮಾಪೂರ ಗ್ರಾಮದ ರಾಮದುರ್ಗ ಕ್ರಾಸ್‌ ಬಳಿ ಶೆಡ್ ನಿರ್ಮಾಣ ಮಾಡಬೇಕು. ಶೆಡ್ ನಿರ್ಮಾಣ‌ ಮಾಡದಿದ್ದರೆ ಪ್ರವಾಹದಲ್ಲೇ ನಮ್ಮ ಜೀವ ಹೋಗಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮಲೆನಾಡು ಭಾಗದಲ್ಲಿ ನಿರಂತರ ಮಳೆ ಹಿನ್ನೆಲೆ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಹರಿಹರ ತಾಲೂಕಿನ ನದಿಪಾತ್ರದ ಜನರಿಗೆ ಆತಂಕ ಎದುರಾಗಿದೆ. ಅದರೆ ಜಿಲ್ಲಾಡಳಿತ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ

ಬಳ್ಳಾರಿಯಲ್ಲಿ ಕಳಪೆ ಸೂರ್ಯಕಾಂತಿ ಬೀಜ ವಿತರಣೆ; ಕೃಷಿ ಅಧಿಕಾರಿಗಳ ವಿರುದ್ಧ ನೊಂದ ರೈತರ ಆಕ್ರೋಶ

ಕಾಶ್ಮೀರದ ರಾಜಕೀಯ ನಾಯಕರೊಂದಿಗೆ ಪ್ರಧಾನಿ ಮೋದಿ ಸಭೆ; ಸುದ್ದಿ ತಿಳಿಯುತ್ತಿದ್ದಂತೆ ಭಾರತಕ್ಕೆ ಎಚ್ಚರಿಕೆ ರವಾನಿಸಿದ ಪಾಕಿಸ್ತಾನ

(Villagers of Lakhampur in Gadag are facing flood threats and Villagersexpressed outrage against Minister CC Patil)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ