ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವಂತೆ ಗ್ರಾ. ಪಂ. ಕಚೇರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಶಾಂತಗಿರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳೆಯರು, ಪುರುಷರು ಸೇರಿ ನೂರಾರು ಜನರು ಪ್ರತಿಭಟನೆ ನಡೆಸಿದ್ದು, ಗುದ್ದಲಿ, ಸಲಕಿ, ಬುಟ್ಟಿ ಸಮೇತ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಎಷ್ಟೇ ಮನವಿ ಮಾಡಿದರು ಉದ್ಯೋಗ ಖಾತ್ರಿ ಕೆಲಸ ನೀಡದ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರು ಪ್ರತಿಭಟನೆ ನಡೆಸಿದ್ದಾರೆ.
ಗದಗ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವಂತೆ ಒತ್ತಾಯಿಸಿ ಶಾಂತಗಿರಿ ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನಲ್ಲಿ ನಡೆದಿದೆ.
ಶಾಂತಗಿರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳೆಯರು, ಪುರುಷರು ಸೇರಿ ನೂರಾರು ಜನರು ಪ್ರತಿಭಟನೆ ನಡೆಸಿದ್ದು, ಗುದ್ದಲಿ, ಸಲಕಿ, ಬುಟ್ಟಿ ಸಮೇತ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಎಷ್ಟೇ ಮನವಿ ಮಾಡಿದರೂ ಉದ್ಯೋಗ ಖಾತ್ರಿ ಕೆಲಸ ನೀಡದ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಪಿಡಿಓ ಹಾಗೂ ಸಿಬ್ಬಂದಿ ಬಾರದೆ ಪಂಚಾಯತಿ ಕಚೇರಿ ಬಾಗಿಲು ಮುಚ್ಚಿದ್ದು, ಜನರನ್ನು ಮತ್ತಷ್ಟು ಆಕ್ರೋಶಕ್ಕೆ ಗುರಿ ಮಾಡಿತು.
ಕೊರೊನಾ ಸಂಕಷ್ಟದಲ್ಲೂ ದುಡಿಯುವ ಕೈಗಳಿಗೆ ವರವಾದ ಈ ಯೋಜನೆ