ಸಾವಿರಾರು ಜನರನ್ನು ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದ ಆರೋಪ; ಗ್ರಾಮಸ್ಥರಿಂದ ಪ್ರತಿಭಟನೆ
ನಾಳೆ ನಡೆಯುವ ಗ್ರಾಮ ಪಂಚಾಯತಿ ಚುನಾವಣೆಗೆ ನಕಲಿ ಮತದಾರರನ್ನು ಬಿಜೆಪಿಯವರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದ್ದಾರೆಂದು ಆರೋಪಿಸಿ ನೂರಾರು ಜನ ಗ್ರಾಮಸ್ಥರು ತಾಲೂಕು ಕಚೇರಿ ಎದುರು ಧರಣಿಗೆ ಮುಂದಾಗಿದ್ದಾರೆ.

ಗ್ರಾಮಸ್ಥರಿಂದ ಪ್ರತಿಭಟನೆ
ಆನೇಕಲ್: ಸಾವಿರಾರು ಜನರನ್ನು ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರಿಸಿದ್ದಾರೆಂದು ಆರೋಪಿಸಿ ಬಿದರಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದರು.
ನಾಳೆ (ಡಿ.27) ನಡೆಯುವ ಗ್ರಾಮ ಪಂಚಾಯತಿ ಚುನಾವಣೆಗೆ ನಕಲಿ ಮತದಾರರನ್ನು ಬಿಜೆಪಿಯವರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ತಾಲೂಕು ಕಚೇರಿ ಎದುರು ಧರಣಿಗೆ ಮುಂದಾಗಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬಂದು, ಪಟ್ಟಿಗೆ ಸೇರ್ಪಡೆಯಾಗಿರುವ ನಕಲಿ ಮತದಾರರನ್ನು ತೆಗೆಯದಿದ್ದರೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮತದಾರರ ಪಟ್ಟಿ

ರಾಜ್ಯದಲ್ಲಿ ಇಂದು ಮೊದಲ ಹಂತದ ಲೋಕಲ್ ಫೈಟ್! ನಿರ್ಧಾರವಾಗಲಿದೆ 1,17,383 ಅಭ್ಯರ್ಥಿಗಳ ಹಣೆಬರಹ



