ನಮ್ಮ ಊರಿಗೆ ಕೊವಿಡ್​ ಬಾರದಂತೆ ನೋಡಿಕೊಳ್ತೀವಿ; ಕೊರೊನಾ ನಿಯಂತ್ರಣಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ ಗ್ರಾಮಸ್ಥರು

|

Updated on: May 20, 2021 | 8:29 AM

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ 46 ಹಳ್ಳಿಗಳಲ್ಲಿ ಈ ವಿಭಿನ್ನ ಪ್ರಯತ್ನಕ್ಕೆ ಕೈಹಾಕಲಾಗಿದ್ದು, ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು ಕೊರೊನಾ ತಡೆಗಟ್ಟಲು ಹೇಗೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಕೊರೊನಾ ನಿಯಮಾವಳಿಗಳ ಪ್ರಾಮುಖ್ಯತೆ ಏನು. ನಿಯಮ ಪಾಲಿಸುವವರ ವಿರುದ್ಧ ಯಾವೆಲ್ಲಾ ರೀತಿಯ ಕ್ರಮಕೈಗೊಳ್ಳಬಹುದು ಎಂಬಿತ್ಯಾದಿಯಾಗಿ ವಿವರಣೆ ನೀಡುತ್ತಿದ್ದಾರೆ.

ನಮ್ಮ ಊರಿಗೆ ಕೊವಿಡ್​ ಬಾರದಂತೆ ನೋಡಿಕೊಳ್ತೀವಿ; ಕೊರೊನಾ ನಿಯಂತ್ರಣಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ ಗ್ರಾಮಸ್ಥರು
ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡ ಗ್ರಾಮಸ್ಥರು
Follow us on

ದಾವಣಗೆರೆ: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಹಳ್ಳಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿರುವ ಕಾರಣ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ 46 ಹಳ್ಳಿಗಳಲ್ಲಿ ಸೋಂಕಿನ ವಿರುದ್ಧ ಹೋರಾಡಲು ವಿಭಿನ್ನ ರೀತಿಯಲ್ಲಿ ಪ್ರಯತ್ನಿಸಲಾಗುತ್ತಿದ್ದು, ಎಸ್ಐ ಶಿವರುದ್ರಪ್ಪ ಮೇಟಿ ಹಾಗೂ ಇನ್ನಿತರ ಗಣ್ಯರ ನೇತೃತ್ವದಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸುವ ಮೂಲಕ ಹಳ್ಳಿಗರಿಗೆ ಪ್ರತಿಜ್ಞಾವಿಧಿ ಬೋಧಿಸಲಾಗುತ್ತಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ 46 ಹಳ್ಳಿಗಳಲ್ಲಿ ಈ ವಿಭಿನ್ನ ಪ್ರಯತ್ನಕ್ಕೆ ಕೈಹಾಕಲಾಗಿದ್ದು, ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು ಕೊರೊನಾ ತಡೆಗಟ್ಟಲು ಹೇಗೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಕೊರೊನಾ ನಿಯಮಾವಳಿಗಳ ಪ್ರಾಮುಖ್ಯತೆ ಏನು. ನಿಯಮ ಪಾಲಿಸುವವರ ವಿರುದ್ಧ ಯಾವೆಲ್ಲಾ ರೀತಿಯ ಕ್ರಮಕೈಗೊಳ್ಳಬಹುದು ಎಂಬಿತ್ಯಾದಿಯಾಗಿ ವಿವರಣೆ ನೀಡುತ್ತಿದ್ದಾರೆ. ಆ ಮೂಲಕ ಜನರಿಗೆ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಸುತ್ತಿದ್ದಾರೆ.

ಹೀಗೆ ಹಳ್ಳಿಗಳಿಗೆ ತೆರಳಿ ಅಲ್ಲಿನ ಗ್ರಾಮಸ್ಥರನ್ನೆಲ್ಲಾ ಸಾಮಾಜಿಕ ಅಂತರ ಕಾಯ್ದುಕೊಂಡು, ಕೊರೊನಾ ನಿಯಮಾವಳಿಗಳು ಉಲ್ಲಂಘನೆಯಾಗದ ರೀತಿಯಲ್ಲಿ ಒಂದೆಡೆ ಸೇರಿಸಿ ಕೊವಿಡ್ ನಿಯಂತ್ರಣಕ್ಕಾಗಿ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳ ಈ ಕ್ರಮಕ್ಕೆ ಗ್ರಾಮಸ್ಥರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ನಿಯಮ ಪಾಲನೆ ವಿಚಾರದಲ್ಲಿ ಹಾಗೂ ಸೋಂಕು ನಿಯಂತ್ರಣಕ್ಕಾಗಿ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಪೊಲೀಸ್ ಅಧಿಕಾರಿ

ಎರಡನೇ ಅಲೆಯಲ್ಲಿ ಸೋಂಕು ವೇಗವಾಗಿ ಹಬ್ಬುತ್ತಿದ್ದು ಗ್ರಾಮೀಣ ಪ್ರದೇಶಗಳನ್ನು ಆವರಿಸುತ್ತಿತರುವ ಹೊತ್ತಿನಲ್ಲಿ ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಥದ್ದೊಂದು ವಿಭಿನ್ನ ಜಾಗೃತಿ ಕಾರ್ಯಕ್ರಮ ಆಯೋಜಿಸಿರುವುದು ನಿಜಕ್ಕೂ ಮಾದರಿಯಾಗಿದೆ. ಪೊಲೀಸರ ಜನಪರ ಕಾಳಜಿಗೆ ಹಾಗೂ ಆಲೋಚನೆಗೆ ಊರಿನ ಹಿರಿಯರು ಸಹ ಧನ್ಯವಾದ ಹೇಳಿದ್ದು, ಇದೇ ರೀತಿ ಎಲ್ಲಾ ಗ್ರಾಮದ ಜನರೂ ಸೋಂಕು ನಿಯಂತ್ರಣಕ್ಕೆ ಸ್ವಯಂ ನಿಬಂಧನೆಗಳನ್ನು ರೂಪಿಸಿಕೊಂಡರೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:
‘ಗ್ರಾಮೀಣ ಭಾರತದಲ್ಲಿ ಕೊವಿಡ್​ನಿಂದಾಗಿ ಇಡೀ ಕುಟುಂಬಗಳೇ ಇಲ್ಲದಾಗಬಹುದು’  

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿ; ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ