AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ಷೆಗೂ ತಡೆಯಾಜ್ಞೆ: ಯೋಗೀಶ್ ಗೌಡರ್ ಕೊಲೆ ಕೇಸ್​ನಲ್ಲಿ ಬಿಗ್ ರಿಲೀಫ್

High Court Grants Bail to Vinay Kulkarni: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಕೇಸ್ ಸಂಬಂಧ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಿನಯ್ ಕುಲಕರ್ಣಿಗೆ ಜಾಮೀನು ನೀಡಿ ಶುಕ್ರವಾರ ಆದೇಶ ಹೊರಡಿಸಿದೆ.

ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ಷೆಗೂ ತಡೆಯಾಜ್ಞೆ: ಯೋಗೀಶ್ ಗೌಡರ್ ಕೊಲೆ ಕೇಸ್​ನಲ್ಲಿ ಬಿಗ್ ರಿಲೀಫ್
ಯೋಗೀಶ್ ಗೌಡರ್ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನುImage Credit source: tv9
ರಮೇಶ್​ ಎಮ್​.
| Edited By: |

Updated on:Jul 31, 2026 | 11:33 AM

Share

ಬೆಂಗಳೂರು, ಜುಲೈ 31: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda Murder Case) ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. 5 ಲಕ್ಷ ರೂ. ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ಕೋರ್ಟ್​ ಆದೇಶಿಸಿದೆ. ಇದೇ ವೇಳೆ ವಿನಯ್ ಕುಲಕರ್ಣಿ ದೋಷಿ ಎಂದು ಪ್ರಕಟಿಸಿದ್ದ ತೀರ್ಪಿಗೂ ತಡೆಯಾಜ್ಞೆ ನೀಡಲಾಗಿದೆ. ಈ ಆದೇಶದಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಮೂಡಿದೆ. ನ್ಯಾ.ಮೊಹಮ್ಮದ್ ನವಾಜ್, ಜಿ.ಬಸವರಾಜ ಅವರಿದ್ದ ಪೀಠದಿಂದ ಈ ಆದೇಶ ಹೊರಬಿದ್ದಿದೆ.

10 ಮಂದಿಗೂ ಜಾಮೀನು

ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಚಂದ್ರಶೇಖರ ಇಂಡಿ ಅಲಿಯಾಸ್ ಚಂದು ಮಾಮ, ದಿನೇಶ್, ಅಶ್ವತ್ಥ್‌, ಸುನಿಲ್, ನಜೀರ್ ಅಹ್ಮದ್, ಷಾನವಾಜ್, ನೂತನ್, ಹರ್ಷಿತ್, ಚನ್ನಕೇಶವ ಟಿಂಗರಿಕರ್‌ಗೆ ಹೈಕೋರ್ಟ್‌ ಜಾಮೀನು ನೀಡಿದೆ.

ವಿನಯ್ ಕುಲಕರ್ಣಿಗೆ ಹೈಕೋರ್ಟ್ ವಿಧಿಸಿರುವ ಷರತ್ತುಗಳೇನು?

  • 5 ಲಕ್ಷ ರೂ. ಬಾಂಡ್ ಹಾಗೂ ಶ್ಯೂರಿಟಿ ಒದಗಿಸಬೇಕು
  • ಕೋರ್ಟ್‌ ಅನುಮತಿ ಇಲ್ಲದೆ ದೇಶ ಬಿಟ್ಟು ಹೋಗುವಂತಿಲ್ಲ

ವಿನಯ್ ಕುಲಕರ್ಣಿ ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿತ್ತು. ನಂತರ ಪ್ರಕರಣದ ತನಿಖೆಯನ್ನು ಬಳಿಕ ಸಿಬಿಐಗೆ ವಹಿಸಲಾಗಿದ್ದು, ತನಿಖೆ ನಡೆದಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಕೊಲೆ ಮತ್ತು ಕ್ರಿಮಿನಲ್ ಸಂಚು ಆರೋಪಗಳು ಸಾಬೀತಾಗಿವೆ ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯ 2026ರ ಏಪ್ರಿಲ್ 17ರಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದಂತೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡವನ್ನೂ ವಿಧಿಸಿತ್ತು. ದಂಡದ ಮೊತ್ತದಿಂದ ಸಂತ್ರಸ್ತ ಯೋಗೀಶ್ ಗೌಡ ಅವರ ಮಕ್ಕಳು ಮತ್ತು ಸಹೋದರರಿಗೆ ಒಟ್ಟು 16 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಲಾಗಿತ್ತು.

ಇದನ್ನೂ ಓದಿ: ನಾಳೆ ಹೈಕೋರ್ಟ್​​ನಲ್ಲಿ ಏನಾಗಲಿದೆ ವಿನಯ್ ಕುಲಕರ್ಣಿ ಭವಿಷ್ಯ?

ಶಿಕ್ಷೆ ಪ್ರಕಟವಾದ ಬಳಿಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಅನರ್ಹಗೊಂಡಿತ್ತು. ಆದರೆ, ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿರುವುದರಿಂದ, ಅವರ ಶಾಸಕ ಸ್ಥಾನಕ್ಕೆ ಮತ್ತೆ ಅವಕಾಶ ದೊರೆಯುವ ಸಾಧ್ಯತೆ ಬಗ್ಗೆ ಗಮನ ಸೆಳೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:56 am, Fri, 31 July 26

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ