ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ, ಸಿಬಿಐ ಅಧಿಕಾರಿಗಳಿಗೆ ಒತ್ತಡ ಇದೆ: ಡಿ.ಕೆ.ಶಿವಕುಮಾರ್ ಗಂಭೀರ ಆರೋಪ
ಧಾರವಾಡದಲ್ಲಿ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ನಂತರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅನ್ನುವುದು ಗೊತ್ತಿದೆ ಎಂದಿದ್ದಾರೆ.
ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ CBI ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಬಂಧಿಸಿತ್ತು. ಈ ಪ್ರಕರಣವು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಧಾರವಾಡದಲ್ಲಿ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ನಂತರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅನ್ನುವುದು ಗೊತ್ತಿದೆ. ಒತ್ತಡದಲ್ಲಿ ಸಿಬಿಐ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ಈ ಪ್ರಕರಣದ ಹಿಂದೆ ಬಿಜೆಪಿ ಕೈವಾಡ ಇದೆ ಎನ್ನುವ ಆರೋಪ ಮಾಡಿದ್ದಾರೆ.
ವಿನಯ್ ಕುಲಕರ್ಣಿ ಮನೆಯಲ್ಲಿ ಏನು ಚರ್ಚೆ ಆಗಿದೆ ಎನ್ನುವ ಬಗ್ಗೆ ಮಾತನಾಡಿದ ಡಿಕೆಶಿ, ವಿನಯ್ ಮನೆಯವರು ನನ್ನ ಬಳಿ ಎಲ್ಲಾ ಅಳಲು ತೋಡಿಕೊಂಡಿದ್ದಾರೆ. ಏನೆಲ್ಲ ಚರ್ಚೆ ಆಯಿತು ಎಂದು ಹೇಳಲು ಆಗುವುದಿಲ್ಲ. ನಮಗೂ ನ್ಯಾಯಾಲಯವಿದೆ, ಕಾನೂನಿದೆ ಎಂದು ಡಿಕೆಶಿ ಹೇಳಿದ್ದಾರೆ.
ಏನಿದರ ಹಿನ್ನೆಲೆ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಕೈವಾಡ ಕೂಡ ಇದೆ ಎನ್ನಲಾಗಿದೆ. ಹೀಗಾಗಿ ಇವರನ್ನು ಬಂಧಿಸಿ ಜೈಲಿನಲ್ಲಿ ಇಡಲಾಗಿದೆ. ಇತ್ತೀಚೆಗೆ ಇವರು ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಅದು ತಿರಸ್ಕಾರಗೊಂಡಿತ್ತು. ಇತ್ತೀಚೆಗೆ, ವಿನಯ್ ಕುಲಕರ್ಣಿಗೆ ಐಷಾರಾಮಿ ಸವಲತ್ತು ನೀಡಲಾಗುತ್ತಿದೆ ಎನ್ನುವ ಬಗ್ಗೆಯೂ ಟಿವಿ9 ಸುದ್ದಿ ಬಿತ್ತರ ಮಾಡಿತ್ತು.
ಗುಂಡು-ತುಂಡು ಆಯ್ತು, ಈಗ ಜೈಲಲ್ಲಿ ರೌಡಿಶೀಟರ್ ಜತೆ ವಿನಯ್ ಕುಲಕರ್ಣಿ ಕಾಲಹರಣ!